ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ 
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ; ಮಳೆಯಿಂದಾಗಿ 25 ಓವರ್ ಗೆ ಸೀಮಿತ! ಇಬ್ಬರ ಪದಾರ್ಪಣೆ

ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಧರ್ಮಶಾಲಾ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ಮಳೆಯಿಂದ ವಿಳಂಬಗೊಂಡಿದ್ದು, ಪಂದ್ಯವನ್ನು 25 ಓವರ್‌ಗಳಿಗೆ ಸೀಮಿತಗೊಳಿಸಲಾಗಿದೆ.

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಿದೆ. ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ವಾಸ್ತವವಾಗಿ ಈ ಮೊದಲೇ ನಿಗದಿಪಡಿಸಿದಂತೆ ಪಂದ್ಯದ ಟಾಸ್ ಮಧ್ಯಾಹ್ನ 1ಗಂಟೆಗೆ ನಡೆಯಬೇಕಿತ್ತು. ನಂತರ ಪಂದ್ಯ 1:30ಕ್ಕೆ ಆರಂಭವಾಗಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯದ ಟಾಸ್ ಸರಿಯಾದ ಸಮಯಕ್ಕೆ ನಡೆಯಲಿಲ್ಲ.

ಅಂತಿಮವಾಗಿ ನಿಂತ ಕಾರಣ ಸಂಜೆ 5:15 ಕ್ಕೆ ಪಂದ್ಯದ ಟಾಸ್ ನಡೆಸಲಾಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮಳೆಯಿಂದಾಗಿ ಈ ಪಂದ್ಯದ ಟಾಸ್ ವಿಳಂಬವಾಯಿತು. ಅದೃಷ್ಟವಶಾತ್ ಮಳೆ ನಿಂತಿದ್ದು, ಪಂದ್ಯ ಆರಂಭವಾಗಿದೆ.

25 ಓವರ್ ಗೆ ಪಂದ್ಯ ಸೀಮಿತ

ಮಳೆಯಿಂದಾಗಿ ಈ ಪಂದ್ಯವನ್ನು ಅಂಪೈರ್ ಗಳು 25 ಓವರ್ ಗೆ ಸೀಮಿತಗೊಳಿಸಿದ್ದು, ಉಭಯ ತಂಡಗಳು ತಲಾ 25 ಓವರ್ ಆಡಲಿವೆ. ಅಂದರೆ ಉಭಯ ತಂಡಗಳು ತಲಾ 25 ಓವರ್​ಗಳ ಇನ್ನಿಂಗ್ಸ್ ಆಡಲಿವೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ (Shubman Gill) ಬೌಲಿಂಗ್ ಆಯ್ದುಕೊಂಡಿದ್ದಾರೆ.

ಇಬ್ಬರ ಪದಾರ್ಪಣೆ

ಇನ್ನು ಟೀಂ ಇಂಡಿಯಾ ಪರ ಇಬ್ಬರು ಉದಯೋನ್ಮುಖ ಆಟಗಾರರು ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದು, ಹರ್ಷ್ ದುಬೆ ಹಾಗೂ ಗುರ್ನೂರ್ ಬ್ರಾರ್ ಅಂತರರಾಷ್ಟ್ರೀಯ ಏಕದಿನಕ್ಕೆ ಪಾದಾರ್ಪಣೆ ಮಾಡಿದರು. ಇದು ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ತಂಡಗಳು ಇಂತಿವೆ

ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷ್ ದುಬೆ, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ಅಫ್ಘಾನಿಸ್ತಾನ: ಇಬ್ರಾಹಿಂ ಜದ್ರಾನ್, ರಹಮಾನುಲ್ಲಾ ಗುರ್ಬಾಜ್, ಸೇದಿಕುಲ್ಲಾ ಅಟಲ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ರಶೀದ್ ಖಾನ್, ಮೊಹಮ್ಮದ್ ಸಲೀಮ್, ಎಎಮ್ ಗಜನ್ಫರ್ ಮತ್ತು ಜಿಯಾವುರ್ ರೆಹಮಾನ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!

ಅಯೋಧ್ಯೆಯ ರಾಜರ್ಷಿ ದಶರಥ್ ವೈದ್ಯಕೀಯ ಕಾಲೇಜ್ ನಲ್ಲಿ ಬಾಂಬ್ ತಯಾರಿಕೆ ಕಾಗದ ಪತ್ತೆ; ವಿದ್ಯಾರ್ಥಿ ಬಂಧನ

Commonwealth Games 2026: ಬಾಕ್ಸಿಂಗ್ ನಲ್ಲಿ ಚಿನ್ನ ಗೆದ್ದ ಸಾಕ್ಷಿ, ಪ್ರಿಯಾ

ಪ್ರಧಾನಿ ಮೋದಿಯನ್ನು ನಿಂದಿಸಿದ 15 ವರ್ಷದ ಹುಡುಗಿ ಹಿಂದೆ 'ಆ ಎರಡು ಗುಂಪುಗಳಿವೆ': ಕಂಗನಾ ಹೊಸ ಬಾಂಬ್!