ಪರಸ್ಪರ ಕೈಕೈ ಮಿಲಾಯಿಸಿದ ಭಾರತ-ಪಾಕ್ ಆಟಗಾರ್ತಿಯರು (ಎಐ ರಚಿತ ವಿಡಿಯೋ) 
ಕ್ರಿಕೆಟ್

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು; 'ಜಗಳ' Video ವೈರಲ್; ಅಸಲಿಯತ್ತೇನು?

ಅತ್ತ ಪಂದ್ಯ ಮುಕ್ತಾಯವಾಗುತ್ತಲೇ ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಆಟಗಾರ್ತಿಯರು ಮೈದಾನದಲ್ಲೇ ಪರಸ್ಪರ ಜಟ್ಟು ಹಿಡಿದು ಕಿತ್ತಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಬರ್ಮಿಂಗ್ ಹ್ಯಾಮ್: ಮಹಿಳಾ ಟಿ20 ವಿಶ್ವಕಪ್ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಆಟಗಾರ್ತಿಯರು ಭಾರತೀಯ ಆಟಗಾರ್ತಿ ಮೇಲೆ ಹಲ್ಲೆ ಮಾಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಭಾನುವಾರ ಬರ್ಮಿಂಗ್ ಹ್ಯಾಮ್ ನ ಎಡ್ಜ್ ಬ್ಯಾಸ್ಟನ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ 64 ರನ್ ಗಳ ಭರ್ಜರಿ ಜಯ ಸಾಧಿಸಿತ್ತು.

ಅತ್ತ ಪಂದ್ಯ ಮುಕ್ತಾಯವಾಗುತ್ತಲೇ ಇತ್ತ ಸಾಮಾಜಿಕ ಜಾಲತಾಣಗಳಲ್ಲಿ ಆಟಗಾರ್ತಿಯರು ಮೈದಾನದಲ್ಲೇ ಪರಸ್ಪರ ಜಟ್ಟು ಹಿಡಿದು ಕಿತ್ತಾಡಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ ಪಾಕಿಸ್ತಾನದ ಆಟಗಾರ್ತಿಯೊಬ್ಬರು ಭಾರತೀಯ ಬ್ಯಾಟರ್ ಮೇಲೆ ಹಲ್ಲೆ ನಡೆಸುತ್ತಿರುವುದು ದಾಖಲಾಗಿದೆ. ಈ ವೇಳೆ ಅಂಪೈರ್ ಹಾಗೂ ಇತರ ಆಟಗಾರ್ತಿಯರು ಮಧ್ಯಪ್ರವೇಶಿಸಿ ಇಬ್ಬರನ್ನು ಬೇರ್ಪಡಿಸುತ್ತಿರುವ ದೃಶ್ಯ ಇದರಲ್ಲಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಉಭಯ ದೇಶಗಳ ಕ್ರಿಕೆಟ್ ಅಭಿಮಾನಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಈ ಘಟನೆ ನಿಜವಾಗಿಯೂ ನಡೆದಿದೆಯೇ ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ.

ವೈರಲ್ ವಿಡಿಯೋ ಅಸಲೀಯತ್ತೇನು?

ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಈ ವಿಡಿಯೋ ಸಂಪೂರ್ಣ ನಕಲಿ ಎಂದು ಸಾಬೀತಾಗಿದೆ. ಈ ವಿಡಿಯೋ ಅಸಲೀಯತ್ತು ಬಟಾಬಯಲಾಗಿದ್ದು, ಇದು ಎಐ ರಚಿತ ವಿಡಿಯೋ ಎಂದು ಸಾಬೀತಾಗಿದೆ.

ಮೂಲಗಳ ಪ್ರಕಾರ, ಈ ವಿಡಿಯೋವನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾಗಿದೆ. ಪಂದ್ಯದಲ್ಲಿ ಇಂತಹ ಯಾವುದೇ ಘಟನೆ ನಡೆದಿರುವ ಬಗ್ಗೆ ಯಾವುದೇ ಅಧಿಕೃತ ವರದಿ ಅಥವಾ ದಾಖಲೆಗಳಿಲ್ಲ. ಕೃತಕ ಬುದ್ಧಿಮತ್ತೆ (AI) ಯುಗದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಪ್ರತಿಯೊಂದನ್ನೂ ನಂಬಲು ಸಾಧ್ಯವಿಲ್ಲ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಇನ್ನು ನಿನ್ನೆಯ ಪಂದ್ಯದ ಕುರಿತು ಹೇಳುವುದಾದರೆ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ 64 ರನ್ ಗಳ ಅಮೋಘ ಜಯಭೇರಿ ಬಾರಿಸಿತು. ಭಾರತ ನೀಡಿದ್ದ 171 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ ತಂಡ ಕೇವಲ 106 ರನ್ ಗಳಿಗೇ ಆಲೌಟ್ ಆಗುವ ಮೂಲಕ 64 ರನ್ ಗಳ ಹೀನಾಯ ಸೋಲು ಕಂಡಿತು. ಭಾರತದ ಪರ ದೀಪ್ತಿ ಶರ್ಮಾ 5 ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ರದ್ದತಿಗೆ ಈಶ್ವರ್ ಖಂಡ್ರೆ ಪಟ್ಟು; UPSC ಮಾದರಿ ತನ್ನಿ ಎಂದು ಸಿಎಂಗೆ ಗ್ರಾಮೀಣಾಭಿವೃದ್ಧಿ ಸಚಿವ ಮನವಿ

'ಹಾಸ್ಯಾಸ್ಪದ, ನಾಚಿಕೆಗೇಡು': ಬ್ರಿಕ್ಸ್ ಭೋಜನಕೂಟದ ಮೆನು ಕುರಿತ ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ಆಕ್ರೋಶ

ಜೈಲಿನಲ್ಲಿ ಮಾಜಿ ಪ್ರಧಾನಿ: 52ನೇ ವಯಸ್ಸಿನಲ್ಲಿ ಎರಡನೇ ಮದುವೆಯಾದ ಇಮ್ರಾನ್ ಖಾನ್ ಮಾಜಿ ಪತ್ನಿ!

BBK 13: ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್, ಆಸ್ಪತ್ರೆಗೆ ದಾಖಲು..!

ಪಾಕ್‌ನ ಹೊಸ ನವರಂಗಿ ಆಟ: FATF ಸಭೆಯ ಮುನ್ನ ಉಗ್ರ ಮಸೂದ್ ಅಜರ್ ಮೇಲಿನ ಬಹುಮಾನದ ಮೊತ್ತ 70 ಲಕ್ಷಕ್ಕೆ ಏರಿಕೆ!