ಶ್ರೇಯಾಂಕಾ ಪಾಟೀಲ್ ಗೆ ಗಾಯ 
ಕ್ರಿಕೆಟ್

Women's T20 World Cup 2026: ಭಾರತಕ್ಕೆ ಭಾರಿ ಆಘಾತ; Shreyanka Patil ಗೆ ಗಾಯ; ಕಣ್ಣೀರು ಹಾಕುತ್ತಲೇ ಹೊರ ನಡೆದ ಕನ್ನಡತಿ! ಆಗಿದ್ದೇನು?

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಆಘಾತವೊಂದು ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ್ತಿ ಗಾಯದ ಸಮಸ್ಯೆಗೆ ತುತ್ತಾಗಿ ಮೈದಾನದಿಂದ ಹೊರ ನಡೆದಿದ್ದಾರೆ.

ಲೀಡ್ಸ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ಟೂರ್ನಿಯಲ್ಲಿ ನೆದರ್ಲೆಂಡ್ ವಿರುದ್ಧ ಬರೊಬ್ಬರಿ 95 ರನ್ ಗಳ ಅಮೋಘ ಜಯ ದಾಖಲಿಸಿದ್ದು, ಈ ಜಯದ ಹೊರತಾಗಿಯೂ ಭಾರತ ತಂಡಕ್ಕೆ ಭಾರಿ ಆಘಾತ ಎದುರಾಗಿದೆ.

ಹೌದು.. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಆಘಾತವೊಂದು ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ್ತಿ ಗಾಯದ ಸಮಸ್ಯೆಗೆ ತುತ್ತಾಗಿ ಮೈದಾನದಿಂದ ಹೊರ ನಡೆದಿದ್ದಾರೆ.

ಈ ಘಟನೆ ಲೀಡ್ಸ್ ನ ಹೆಡಿಂಗ್ಲೇ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ನೆದರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಗಿದ್ದು, ಗಾಯಗೊಂಡ ಸ್ಟಾರ್ ಸ್ಪಿನ್ನರ್ ಶ್ರೇಯಾಂಕ ಪಾಟೀಲ್ ಗಂಭೀರ ಗಾಯಕ್ಕೆ ತುತ್ತಾಗಿ ಸ್ಟ್ರೆಚರ್ ಮೂಲಕ ಹೊರಗೆ ಕರೆದೊಯ್ಯಲಾಯಿತು.

ಅವರಿಗೆ ನಡೆಯಲು ಸಾಧ್ಯವಾಗದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಕ್ಯಾನ್ ವರದಿ ಬಂದ ಬಳಿಕ ಗಾಯದ ತೀವ್ರತೆ ಸ್ಪಷ್ಟವಾಗಲಿದೆ. ಇದು ಭಾರತದ ವಿಶ್ವಕಪ್ ಆಸೆಗಳಿಗೆ ದೊಡ್ಡ ಆಘಾತ ನೀಡಿದೆ.

ಫೀಲ್ಡಿಂಗ್ ವೇಳೆ ಗಾಯ

ಟೀಂ ಇಂಡಿಯಾ ನೀಡಿದ 209 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲ್ಯೆಂಡ್ಸ್ ತಂಡದ ಇನ್ನಿಂಗ್ಸ್‌ನ 6ನೇ ಓವರ್‌ನ ಮೊದಲ ಎಸೆತದಲ್ಲಿ ಈ ಘಟನೆ ಸಂಭವಿಸಿತು. ಈ ಪಂದ್ಯದಲ್ಲಿ ಮೊದಲ ಓವರ್ ಬೌಲ್ ಮಾಡಲು ಬಂದ ಶ್ರೇಯಾಂಕ ಪಾಟೀಲ್ ಎಸೆದ ಮೊದಲ ಎಸೆತವನ್ನು ಸ್ಟ್ರೈಕ್‌ನಲ್ಲಿದ್ದ ಮೊಲ್ಕೆನ್‌ಬೋರ್ ಮಿಡ್-ಆನ್ ಕಡೆಗೆ ಆಡಿದರು.

ಹೀಗಾಗಿ ಶ್ರೇಯಾಂಕ ಬೌಲಿಂಗ್ ಮಾಡಿದ ಬಳಿಕ ಚೆಂಡನ್ನು ಹಿಡಿಯಲು ಅದರ ಹಿಂದೆ ಓಡಿದರು. ಚೆಂಡಿನ ಬಳಿ ಹೋದ ಶ್ರೇಯಾಂಕ ಅದನ್ನು ತೆಗೆದುಕೊಳ್ಳಲು ಕೆಳಕ್ಕೆ ಬಾಗಿದರು. ಈ ಪ್ರಕ್ರಿಯೆಯಲ್ಲಿ ಶ್ರೇಯಾಂಕ ಸಮತೋಲನ ಕಳೆದುಕೊಂಡು ಅವರ ಬಲಗಾಲು ತಿರುಚಲ್ಪಟ್ಟಿತು.

ಇದರಿಂದ ಶ್ರೇಯಾಂಕ ತೀವ್ರ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲು ಶುರು ಮಾಡಿದರು. ಶ್ರೇಯಾಂಕ ನೋವಿನಿಂದ ಬಳಲುತ್ತಿರುವುದನ್ನು ನೋಡಿದ ಅಂಪೈರ್‌ಗಳು ಮತ್ತು ತಂಡದ ಸದಸ್ಯರು ತಕ್ಷಣವೇ ಫಿಸಿಯೋ ಅವರನ್ನು ಮೈದಾನಕ್ಕೆ ಕರೆಸಿದರು. ಶ್ರೇಯಾಂಕ ಅವರನ್ನು ಪರೀಕ್ಷಿಸಿದ ಫಿಸಿಯೋ ಪ್ರಥಮ ಚಿಕಿತ್ಸೆಯ ಬಳಿಕ ಅವರನ್ನು ಡಗೌಟ್​ಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದರು. ಆದರೆ ಶ್ರೇಯಾಂಕಗೆ ಸರಿಯಾಗಿ ನಿಲ್ಲಲು ಸಹ ಸಾಧ್ಯವಾಗಲಿಲ್ಲ.

ಕಣ್ಣೀರು ಹಾಕುತ್ತಲೇ ಹೊರ ನಡೆದ ಕನ್ನಡತಿ!

ಹೀಗಾಗಿ ಕಾರ್ಟ್ ಮತ್ತು ಸ್ಟ್ರೆಚರ್ ಬಳಕೆ ಮಾಡಲಾಯಿತು. ಶ್ರೇಯಾಂಕ ಅವರನ್ನು ಸ್ಟ್ರೆಚರ್‌ ಮೇಲೆ ಮಲಗಿಸಿ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು. ಶ್ರೇಯಾಂಕಾ ಮೈದಾನದಿಂದ ಹೊರಡುವಾಗ ಕಣ್ಣೀರಿಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಹಾಗೆಯೇ ಅವರ ಮುಖದಲ್ಲಿ ನೋವು ಮತ್ತು ನಿರಾಶೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು.

ಅಂದಹಾಗೆ ಇಂದಿನ ಪಂದ್ಯದಲ್ಲಿ ಭಾರತ ನೀಡಿದ್ದ 211 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನೆದರ್ಲೆಂಡ್ಸ್ ತಂಡ 17.3 ಓವರ್ ನಲ್ಲಿ 114 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು 95 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!