ಹರ್ಮನ್ ಪ್ರೀತ್ ಕೌರ್ 
ಕ್ರಿಕೆಟ್

ವಿಶ್ವ ಕ್ರಿಕೆಟಿನಲ್ಲಿ ಯಾರಿಗೂ ಸಾಧ್ಯವಾಗದ ಹೊಸ ದಾಖಲೆ ಬರೆದ ಭಾರತದ ಹರ್ಮನ್ ಪ್ರೀತ್ ಕೌರ್!

ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮ್ಯಾಂಚೆಸ್ಟರ್‌: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಯಾರಿಗೂ ಸಾಧ್ಯವಾಗದ ದಾಖಲೆಯೊಂದನ್ನು ಭಾರತದ ಮಹಿಳಾ ತಂಡದ ನಾಯಕಿ ಹರ್ಮನ್​ ಪ್ರೀತ್ ಕೌರ್ ಮಾಡಿದ್ದಾರೆ. ಅದು ಇದುವರೆಗೆ ಯಾವುದೇ ಪುರುಷ ಅಥವಾ ಮಹಿಳಾ ಆಟಗಾರ್ತಿ ಸಾಧಿಸದ ದಾಖಲೆಯಾಗಿದೆ.

ಮ್ಯಾಂಚೆಸ್ಟರ್‌ನ ಎಮಿರೇಟ್ಸ್ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ 2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ, 200 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಹರ್ಮನ್‌ಪ್ರೀತ್ ಕೌರ್ ಜೂನ್ 11, 2009 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಉದ್ಘಾಟನಾ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ತಮ್ಮ ಅಂತಾರಾಷ್ಟ್ರೀಯ ಟಿ20 ಪ್ರಯಾಣವನ್ನು ಪ್ರಾರಂಭಿಸಿದರು. ಈಗ ಸುಮಾರು 17 ವರ್ಷಗಳ ನಂತರ 2026 ರಲ್ಲಿ, ಅದೇ ಪಂದ್ಯಾವಳಿಯ 10 ನೇ ಆವೃತ್ತಿಯಲ್ಲಿ ಇಂಗ್ಲಿಷ್ ನೆಲದಲ್ಲಿ ತಮ್ಮ 200 ನೇ ಪಂದ್ಯವನ್ನು ಪೂರ್ಣಗೊಳಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಇಲ್ಲಿಯವರೆಗೂ ಅವರು ಟಿ-20ಯ್ಲಿ 178 ಇನ್ನಿಂಗ್ಸ್ ಗಳಲ್ಲಿ 30.09 ಸರಾಸರಿಯಲ್ಲಿ 4, 123 ರನ್ ಪೂರೈಸಿದ್ದರು. ಇದರಲ್ಲಿ 17 ಅರ್ಧ ಶತಕ, ಒಂದು ಶತಕ ಸೇರಿದೆ. 2018 ರ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 51 ಎಸೆತಗಳಲ್ಲಿ 103 ರನ್ ಗಳಿಸಿದ್ದರು. ಏಳು ಬೌಂಡರಿಗಳು ಮತ್ತು ಎಂಟು ಸಿಕ್ಸರ್‌ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು.

ಅವರ ಆಫ್-ಸ್ಪಿನ್ ಬೌಲಿಂಗ್ ನಲ್ಲಿ 32 ವಿಕೆಟ್‌ಗಳನ್ನು ಪಡೆದಿದ್ದಾರೆ. ಅವರು T20I ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಎರಡನೇ ಆಟಗಾರ್ತಿಯಾಗಿದ್ದಾರೆ. ಮಹಿಳಾ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮೂರನೇ ಆಟಗಾರ್ತಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'