ಯುವ ಕ್ರಿಕೆಟಿಗ ಅಮನ್ ರಾವ್! 
ಕ್ರಿಕೆಟ್

Telangana T20 League: 13 ಸಿಕ್ಸರ್, 12 ಬೌಂಡರಿ, ವೇಗದ ಶತಕ ಸಿಡಿಸಿದ ಯುವ ಕ್ರಿಕೆಟಿಗ ಅಮನ್ ರಾವ್!

ಮೆದಕ್ ಫಾಲ್ಕನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ವಾರಂಗಲ್ ವಾರಿಯರ್ಸ್ ಕ್ಯಾಪ್ಟನ್ ಅಮನ್ ರಾವ್ ಕೇವಲ 48 ಎಸೆತಗಳಲ್ಲಿ 142 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.

ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಸಂಚಲನ ಸೃಷ್ಟಿಸುತ್ತಿರುವ ಯುವ ಆಕ್ರಮಣಕಾರಿ ಬಲಗೈ ಆರಂಭಿಕ ಬ್ಯಾಟರ್ ಅಮನ್ ರಾವ್, ತೆಲಂಗಾಣ ಟಿ-20 ಲೀಗ್ ನಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಈ ಮೂಲಕ ದೇಶಿಯ ಟಿ20 ಲೀಗ್ ಇತಿಹಾಸದಲ್ಲಿ ಅತಿ ವೇಗದ ಶತಕ ಬಾರಿಸಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮೆದಕ್ ಫಾಲ್ಕನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ವಾರಂಗಲ್ ವಾರಿಯರ್ಸ್ ಕ್ಯಾಪ್ಟನ್ ಅಮನ್ ರಾವ್ ಕೇವಲ 48 ಎಸೆತಗಳಲ್ಲಿ 142 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಭರ್ಜರಿ ಸಿಕ್ಸರ್‌ಗಳು ಮತ್ತು ಬೌಂಡರಿಗಳ ಮೂಲಕ ಎದುರಾಳಿ ಬೌಲರ್‌ಗಳ ಬೇವರಿಳಿಸಿದರು.

ಅಮನ್ ಒಟ್ಟು 48 ಎಸೆತಗಳನ್ನು ಎದುರಿಸಿ ಮೇಡಕ್ ಫಾಲ್ಕನ್ಸ್ ವಿರುದ್ಧ 12 ಬೌಂಡರಿ ಮತ್ತು 13 ಸಿಕ್ಸರ್‌ಗಳ ಸಹಾಯದಿಂದ 142 ರನ್ ಗಳಿಸಿದರು. ಅವರು 295.83 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದರು.

ಅಮನ್ ರಾವ್ ಅವರನ್ನು ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್ 2026 ಹರಾಜಿನಲ್ಲಿ ₹30 ಲಕ್ಷಕ್ಕೆ ಖರೀದಿಸಿತ್ತು. ದೇಶೀಯ ಕ್ರಿಕೆಟ್‌ನಲ್ಲಿ ಅವರ ನಿರಂತರ ಪ್ರದರ್ಶನದಿಂದ ಅವರು ಈಗ ಫ್ರಾಂಚೈಸಿಯ ಭವಿಷ್ಯದ ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!