ಶುಭಮನ್ ಗಿಲ್ Photo | BCCI
ಕ್ರಿಕೆಟ್

ICC ODI Rankings: ವಿರಾಟ್ ಕೊಹ್ಲಿ ಹಿಂದಿಕ್ಕಿದ ಶುಭಮನ್ ಗಿಲ್; ಬುಮ್ರಾ ಜತೆ ಅಗ್ರ ಸ್ಥಾನಕ್ಕೇರಿದ ಹೆನ್ರಿ

ಇನ್ನು ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ, ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತ ಬೌಲರ್ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಸೇರಿಕೊಂಡಿದ್ದಾರೆ.

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬ್ಯಾಟಿಂಗ್ ಶ್ರೇಯಾಂಕ ಬಿಡುಗಡೆ ಮಾಡಿದ್ದು, ಇತ್ತೀಚೆಗೆ ಮುಕ್ತಾಯಗೊಂಡ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಅವರು ಎರಡನೇ ಸ್ಥಾನಕ್ಕೆ ಏರಿದ್ದಾರೆ.

ಇನ್ನು ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ, ಟೆಸ್ಟ್ ಕ್ರಿಕೆಟ್‌ನಲ್ಲಿ ವಿಶ್ವದ ಅಗ್ರ ಶ್ರೇಯಾಂಕಿತ ಬೌಲರ್ ಜಸ್ಪ್ರೀತ್ ಬುಮ್ರಾ ಅವರೊಂದಿಗೆ ಸೇರಿಕೊಂಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸಿದ್ದ ಗಿಲ್, ಇದೀಗ ಏಕದಿನ ರ್ಯಾಂಕಿಂಗ್​ನಲ್ಲಿ ವಿರಾಟ್ ಕೊಹ್ಲಿ ಅವರನ್ನು ಹಿಂದಿಕ್ಕಿದ್ದಾರೆ.

ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ಕೊಹ್ಲಿ ತಪ್ಪಿಸಿಕೊಂಡಿದ್ದರು. ಹೀಗಾಗಿ ಕೊಹ್ಲಿ ಏಕದಿನ ರ್ಯಾಂಕಿಂಗ್​ನಲ್ಲಿ ಕುಸಿತ ಅನುಭವಿಸಿದ್ದಾರೆ. ಇದರ ಫಲವಾಗಿ ಶುಭ್​ಮನ್ ಗಿಲ್, ಕೊಹ್ಲಿಯನ್ನು ಹಿಂದಿಕ್ಕಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಇಶಾನ್ ಕಿಶನ್ ಮತ್ತು ಯಶಸ್ವಿ ಜೈಸ್ವಾಲ್ ಕೂಡ ನೂತನ ರ್ಯಾಂಕಿಂಗ್ ಪಟ್ಟಿಯನ್ನು ಮುಂಬಡ್ತಿ ಪಡೆದಿದ್ದಾರೆ.

ಶುಭ್​ಮನ್ ಗಿಲ್ 791 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ಅಗ್ರಸ್ಥಾನದಲ್ಲಿರುವ ನ್ಯೂಜಿಲೆಂಡ್‌ನ ಡ್ಯಾರಿಲ್ ಮಿಚೆಲ್ 816ರೇಟಿಂಗ್ ಪಾಯಿಂಟ್‌ ಹೊಂದಿದ್ದಾರೆ. ಅಫ್ಘನ್ ವಿರುದ್ಧದ ಏಕದಿನ ಸರಣಿಗೂ ಮುನ್ನ 5ನೇ ಸ್ಥಾನದಲ್ಲಿದ್ದ ಗಿಲ್, ಮೊದಲ ಏಕದಿನದಲ್ಲಿ 84 ರನ್ ಮತ್ತು ಎರಡನೇ ಏಕದಿನದಲ್ಲಿ 154 ರನ್​ಗಳ ಇನ್ನಿಂಗ್ಸ್ ಆಡಿದ್ದರು.

ಮತ್ತೊಂದೆಡೆ, ಏಕದಿನ ಶ್ರೇಯಾಂಕದಲ್ಲಿ ಒಂದು ಸ್ಥಾನ ಕುಸಿತ ಕಂಡಿರುವ ವಿರಾಟ್ ಕೊಹ್ಲಿ ಈಗ 768 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದು ಟಾಪ್ 5 ರೊಳಗೆ ಕಾಣಿಸಿಕೊಂಡ ಮೂರನೇ ಭಾರತೀಯ ಆಟಗಾರನೆನಿಸಿಕೊಂಡಿದ್ದಾರೆ. ಆದರೆ ಕೆಎಲ್ ರಾಹುಲ್ ಎರಡು ಸ್ಥಾನ ಕುಸಿದು ಟಾಪ್ 10 ರಿಂದ ಹೊರಬಿದ್ದಿದ್ದಾರೆ.

ಏತನ್ಮಧ್ಯೆ, ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ನ 253 ರನ್‌ಗಳ ಬೃಹತ್ ಗೆಲುವಿನಲ್ಲಿ ಐದು ವಿಕೆಟ್‌ಗಳನ್ನು ಕಬಳಿಸಿದ ಹೆನ್ರಿ, ಬುಮ್ರಾ ಅವರೊಂದಿಗೆ ಅಗ್ರ ಸ್ಥಾನವನ್ನು ಹಂಚಿಕೊಂಡು, ನಂಬರ್ 1 ಸ್ಥಾನಕ್ಕೆ ಏರಿದ್ದಾರೆ.

36 ವರ್ಷಗಳ ನಂತರ ನ್ಯೂಜಿಲೆಂಡ್ ವೇಗಿಯೊಬ್ಬರು ಜ್ಯಾಕ್ ಕೋವಿ ಮತ್ತು ರಿಚರ್ಡ್ ಹ್ಯಾಡ್ಲೀ ನಂತರ ಅಗ್ರ ಶ್ರೇಯಾಂಕಕ್ಕೆ ಏರಿದ್ದಾರೆ.

"34 ವರ್ಷದ ಪೇಸರ್ ಮ್ಯಾಟ್ ಹೆನ್ರಿ ಬೌಲರ್ ಶ್ರೇಯಾಂಕದಲ್ಲಿ ಭಾರತದ ಜಸ್ಪ್ರೀತ್ ಬುಮ್ರಾ ಅವರ ಜೊತೆ ಸೇರುವುದರೊಂದಿಗೆ ಟೆಸ್ಟ್ ಬೌಲರ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಮೂರನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: ಕುಸಿದು ಬಿದ್ದ ನಿರ್ಮಾಣ ಹಂತದ ಗೋದಾಮು; ಹಲವರು ಸಾವು ಶಂಕೆ, ರಕ್ಷಣಾ ಕಾರ್ಯ ಆರಂಭ

ಕುಸಿತದ ಬಳಿಕ ಪುಟಿದೆದ್ದ Indian Stock Market: ಸೆನ್ಸೆಕ್ಸ್ 790 ಅಂಕ ಏರಿಕೆ, 24 ಸಾವಿರ ಗಡಿ ದಾಟಿದ Nifty!

ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆ: ಪ್ರಧಾನಿ ಮೋದಿಗೆ ಆಹ್ವಾನ ನೀಡಿದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

'ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ': ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

Triangle love: ವಿವಾಹಿತ ಮಹಿಳೆಗಾಗಿ ಇಬ್ಬರು ಪುರುಷರ ನಡುವೆ ಜಗಳ; ಮಚ್ಚೇಟಿನಿಂದ ಮುಂಗೈ ಕಟ್!