ಪಾಕಿಸ್ತಾನದ ಆಟಗಾರರು 
ಕ್ರಿಕೆಟ್

T20 World Cup 2026: ಶ್ರೀಲಂಕಾ ಹೋಟೆಲ್‌ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ; ಪಾಕಿಸ್ತಾನ ಆಟಗಾರನಿಗೆ ದಂಡ!

ಈ ಆಟಗಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಶಿಸ್ತು ಸಮಿತಿಯ ಮುಂದೆ ಹಾಜರಾಗುವ ಸಾಧ್ಯತೆ ಇದ್ದು, ಅವರಿಗೆ ಹೆಚ್ಚಿನ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.

ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಗಳಿಗಾಗಿ ಶ್ರೀಲಂಕಾದ ಕ್ಯಾಂಡಿಯಲ್ಲಿರುವ ಹೋಟೆಲ್‌ನಲ್ಲಿ ತಂಗಿದ್ದ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಪಾಕಿಸ್ತಾನದ ಆಟಗಾರನೊಬ್ಬನಿಗೆ ತಂಡದ ವ್ಯವಸ್ಥಾಪಕರು ದಂಡ ವಿಧಿಸಿದ್ದಾರೆ ಎಂದು ಗುರುವಾರ ವರದಿಯೊಂದು ತಿಳಿಸಿದೆ. ಆತಿಥೇಯ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಕೊನೆಯ ಸೂಪರ್ 8 ಪಂದ್ಯಕ್ಕೂ ಮುನ್ನ ಈ ಘಟನೆ ನಡೆದಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮತ್ತು ತಂಡದ ವಲಯಗಳಲ್ಲಿ ಈ ಬಗ್ಗೆ ಗುಸುಗುಸು ಚರ್ಚೆಯಾಗುತ್ತಿದೆ ಎಂದು ಟೆಲಿಕಾಂ ಏಷ್ಯಾ ಸ್ಪೋರ್ಟ್ ವರದಿ ಮಾಡಿದೆ.

'ಶ್ರೀಲಂಕಾ ವಿರುದ್ಧದ ಪಾಕಿಸ್ತಾನದ ಕೊನೆಯ ಸೂಪರ್ 8 ಪಂದ್ಯಕ್ಕೂ ಮುನ್ನ, ಪಾಕಿಸ್ತಾನ ವಿಶ್ವಕಪ್ ತಂಡದ ಆಟಗಾರರೊಬ್ಬರು ಮಹಿಳಾ ಹೌಸ್‌ಕೀಪಿಂಗ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಸಿಬ್ಬಂದಿ ಸಹಾಯಕ್ಕಾಗಿ ಕೂಗಿದಾಗ, ಹೋಟೆಲ್ ಸಿಬ್ಬಂದಿ ಆಕೆಯ ರಕ್ಷಣೆಗೆ ಬಂದಿದ್ದಾರೆ ಮತ್ತು ಪಾಕಿಸ್ತಾನ ತಂಡದ ವ್ಯವಸ್ಥಾಪಕ ನವೈದ್ ಚೀಮಾ ಅವರಿಗೆ ವಿಷಯ ತಿಳಿಸಿದ್ದಾರೆ' ಎಂದು ಮೂಲಗಳು ತಿಳಿಸಿರುವುದಾಗಿ ಟೆಲಿಕಾಂ ಏಷ್ಯಾ ಸ್ಪೋರ್ಟ್‌ ವರದಿಯಲ್ಲಿ ತಿಳಿಸಿದೆ.

'ಗೋಲ್ಡನ್ ಕ್ರೌನ್ ಹೋಟೆಲ್‌ನ ಉನ್ನತ ಆಡಳಿತ ಮಂಡಳಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಬಯಸಿತು. ಆದರೆ, ನವೈದ್ ಚೀಮಾ ಅವರು ಆಟಗಾರನ ಪರವಾಗಿ ಕ್ಷಮೆಯಾಚಿಸಿದರು ಮತ್ತು ಅನುಚಿತ ವರ್ತನೆಗಾಗಿ ಆಟಗಾರನಿಗೆ ದಂಡ ವಿಧಿಸಿದರು' ಎಂದು ವರದಿ ತಿಳಿಸಿದೆ.

ಆ ಪಂದ್ಯವನ್ನು ಪಾಕಿಸ್ತಾನ ಐದು ರನ್‌ಗಳಿಂದ ಗೆದ್ದರೂ, ನೆಟ್ ರನ್ ರೇಟ್ ಉತ್ತಮವಾಗಿಲ್ಲದ ಕಾರಣ ಸೆಮಿಫೈನಲ್ ತಲುಪಲು ತಂಡ ವಿಫಲವಾಯಿತು. ಬಳಿಕ ಭಾನುವಾರ ಮತ್ತು ಸೋಮವಾರ ಬ್ಯಾಚ್‌ಗಳಲ್ಲಿ ಮನೆಗೆ ಮರಳಿತು.

ಈ ಆಟಗಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಶಿಸ್ತು ಸಮಿತಿಯ ಮುಂದೆ ಹಾಜರಾಗುವ ಸಾಧ್ಯತೆ ಇದ್ದು, ಅವರಿಗೆ ಹೆಚ್ಚಿನ ಶಿಕ್ಷೆ ವಿಧಿಸುವ ಸಾಧ್ಯತೆ ಇದೆ. ಪಾಕಿಸ್ತಾನಿ ಆಟಗಾರರು ಮತ್ತು ಬ್ಯಾಕ್‌ರೂಮ್ ಸಿಬ್ಬಂದಿ ಪ್ರವಾಸಗಳಲ್ಲಿ ದುರ್ವರ್ತನೆಯ ಇತಿಹಾಸವನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಪಾಕಿಸ್ತಾನ ಶಾಹೀನ್ ತಂಡದ ಇಂಗ್ಲೆಂಡ್ ಪ್ರವಾಸದಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವ ಬ್ಯಾಟ್ಸ್‌ಮನ್ ಹೈದರ್ ಅಲಿಯನ್ನು ಕಳೆದ ವರ್ಷ ಮ್ಯಾಂಚೆಸ್ಟರ್ ಪೊಲೀಸರು ಬಂಧಿಸಿದ್ದರು. ಹೈದರ್ ನ್ಯಾಯಾಲಯದ ಮುಂದೆ ಹಾಜರಾದರು. ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಬಿಡುಗಡೆ ಮಾಡಲಾಯಿತು ಎಂದು ವರದಿ ಹೇಳಿಕೊಂಡಿದೆ.

ಕೆಲವು ವರ್ಷಗಳ ಹಿಂದೆ ಮಲೇಷ್ಯಾ ಪ್ರವಾಸದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಪಾಕಿಸ್ತಾನ ತಂಡದ ಮಸಾಜ್ ಪಟು ಮಲಾಂಗ್ ಅಲಿ ಅವರ ಮೇಲೂ ದೂರು ದಾಖಲಾಗಿ ದಂಡ ವಿಧಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಶಾಸಕಾಂಗ ಪಕ್ಷದ ನಾಯಕನಾಗಿ ವಿಜಯ್ ಆಯ್ಕೆ; ಮೇ 7ರಂದು ಸಿಎಂ ಆಗಿ ಪ್ರಮಾಣ ವಚನ?

IPL 2026: DC ಸೋಲಿಸಿ ತಮ್ಮ 5ನೇ ಗೆಲುವು ದಾಖಲಿಸಿದ CSK; ದಾಖಲೆ ಸೃಷ್ಟಿ!

ಬೆಂಬಲ ನೀಡುವಂತೆ ವಿಜಯ್ ಮನವಿ: ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಕಾಂಗ್ರೆಸ್‌ಗೆ ಬಿಟ್ಟಿದ್ದೇವೆ: ಕೆಸಿ ವೇಣುಗೋಪಾಲ್

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂಖ್ಯೆ 33 ರಿಂದ 37ಕ್ಕೆ ಹೆಚ್ಚಳ: ಪ್ರಧಾನಿ ಮೋದಿ ಸಂಪುಟ ಅನುಮೋದನೆ!

ಕಬ್ಬು ಬೆಳೆಗಾರರ ನೆರವಿಗೆ ಕೇಂದ್ರ; ಕ್ವಿಂಟಾಲ್ ಗೆ ₹365 FRP ಹೆಚ್ಚಿಸಲು ಅನುಮೋದನೆ!

SCROLL FOR NEXT