ಭಾರತ ಇಂಗ್ಲೆಂಡ್ ಪಂದ್ಯ 
ಕ್ರಿಕೆಟ್

T20 ವಿಶ್ವಕಪ್ 2026: ವೀಕ್ಷಣೆಯಲ್ಲಿ Ind vs Eng 2nd Semifinal ವಿಶ್ವದಾಖಲೆ; 2024ರ ಫೈನಲ್ ದಾಖಲೆ ಉಡೀಸ್!

ರನ್ ಗಳ ಸುರಿಮಳೆಯನ್ನೇ ಕಂಡ ಈ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ ನಿಂದ ಬರೊಬ್ಬರಿ 499 ರನ್ ಗಳು ಹರಿದುಬಂದಿದ್ದು, ಭಾರತ ಕೇವಲ 7 ರನ್ ಗಳ ಅಂತರದಲ್ಲಿ ರೋಚಕ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯ ಹಲವಾರು ದಾಖಲೆಗಳಿಗೆ ಸಾಕ್ಷಿಯಾಗಿದ್ದು ಪ್ರಮುಖವಾಗಿ ವೀಕ್ಷಣೆಯಲ್ಲಿ ವಿಶ್ವದಾಖಲೆ ನಿರ್ಮಿಸಿದೆ.

ರನ್ ಗಳ ಸುರಿಮಳೆಯನ್ನೇ ಕಂಡ ಈ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ ನಿಂದ ಬರೊಬ್ಬರಿ 499 ರನ್ ಗಳು ಹರಿದುಬಂದಿದ್ದು, ಈ ಪಂದ್ಯವನ್ನು ಭಾರತ ಕೇವಲ 7 ರನ್ ಗಳ ಅಂತರದಲ್ಲಿ ರೋಚಕ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಈ ಪಂದ್ಯ ಸಿಕ್ಸರ್‌ಗಳು, ಬೌಂಡರಿಗಳಲ್ಲೂ ದಾಖಲೆ ಬರೆದಿದ್ದು, ಈ ಪಂದ್ಯದ ಉಭಯ ಇನ್ನಿಂಗ್ಸ್ ಗಳಲ್ಲಿ 34 ಸಿಕ್ಸರ್, 39 ಬೌಂಡರಿಗಳು ಬಂದಿವೆ.

ಹೌದು.. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ-ಇಂಗ್ಲೆಂಡ್ ನಡುವಿನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ 7 ರನ್ ಗಳ ವಿರೋಚಿತ ಗೆಲುವು ಸಾಧಿಸಿತು.

ಭಾರತ ನೀಡಿದ್ದ 254 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ್ದ ಇಂಗ್ಲೆಂಡ್ ತಂಡ ಜೇಕಬ್ ಬೆಥಲ್ ಅವರ ಅಮೋಘ ಶತಕದ ನೆರವಿನಿಂದ ಗೆಲುನಂಚಿಗೆ ಬಂದು ತಲುಪಿತ್ತು. ಆದರೆ ಭಾರತದ ಅನುಭವಿ ಬೌಲರ್ ಗಳ ಕರಾರುವಕ್ಕಾದ ಬೌಲಿಂಗ್ ದಾಳಿ ನೆರವಿನಿಂದ ಭಾರತ ಸೋಲಿನಿಂದ ಪಾರಾಯಿತು.

ವೀಕ್ಷಣೆಯಲ್ಲಿ ವಿಶ್ವದಾಖಲೆ

ಮಾರ್ಚ್​ 5 ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಸೆಮಿಫೈನಲ್‌ ಪಂದ್ಯ ಅತಿ ಹೆಚ್ಚು ವೀಕ್ಷಣೆ ಕಂಡ ಪಂದ್ಯವೆಂಬ ವಿಶ್ವದಾಖಲೆ ಬರೆದಿದೆ. ಈ ಪಂದ್ಯ ವೀಕ್ಷಣೆಯಲ್ಲಿ ವಿಶ್ವದಾಖಲೆ ನಿರ್ಮಿಸಿದ್ದು, ಬರೊಬ್ಬರಿ 65.2 ಮಿಲಿಯನ್ ವೀಕ್ಷಕರೊಂದಿಗೆ ಡಿಜಿಟಲ್ ವೀಕ್ಷಣೆಯಲ್ಲಿ ದಾಖಲೆ ಬರೆದಿದೆ.

ಭಾರತದ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಗಳಾದ ಜಿಯೋಹಾಟ್‌ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ ಇಂಡಿಯಾ ಪಂದ್ಯದ ಸಮಯದಲ್ಲಿ 65.2 ಮಿಲಿಯನ್ ಏಕಕಾಲಿಕ ವೀಕ್ಷಕರ ಗರಿಷ್ಠ ಮಟ್ಟವನ್ನು ದಾಖಲಿಸಿದೆ, ಇದು ವಿಶ್ವದ ಯಾವುದೇ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ನೇರ ಪ್ರಸಾರ ಕಾರ್ಯಕ್ರಮಕ್ಕೆ ಇದುವರೆಗಿನ ಅತಿ ಹೆಚ್ಚು ಏಕಕಾಲಿಕ ವೀಕ್ಷಕರ ಹೊಸ ವಿಶ್ವ ದಾಖಲೆಯಾಗಿದೆ.

2024ರ ದಾಖಲೆ ಉಡೀಸ್

ಜಿಯೋಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾದ ಈ ಪಂದ್ಯವು 619 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದು, ಇದು ಇತಿಹಾಸದಲ್ಲಿ ಅತಿ ಹೆಚ್ಚು ಸ್ಟ್ರೀಮ್ ಮಾಡಲಾದ ಟಿ20ಐ ಪಂದ್ಯವಾಗಿದೆ. ಇದು ಐಸಿಸಿ ಪುರುಷರ ಟಿ20 ವಿಶ್ವಕಪ್ 2024 ರ ಫೈನಲ್‌ನಲ್ಲಿ ಸ್ಥಾಪಿಸಿದ್ದ 533 ಮಿಲಿಯನ್ ವೀಕ್ಷಣೆಗಳ ದಾಖಲೆಯನ್ನು ಮೀರಿಸಿದೆ.

ಜಯ್ ಶಾ ಟ್ವೀಟ್

ಈ ವಿಚಾರವನ್ನು ಸ್ವತಃ ಐಸಿಸಿ ಅಧ್ಯಕ್ಷ ಜಯ್ ಶಾ ಅವರೇ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ‘ಐಸಿಸಿ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಡಿಜಿಟಲ್ ವೀಕ್ಷಕರ ಸಂಖ್ಯೆಯಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ಪಂದ್ಯವನ್ನು ಜಿಯೋ ಹಾಟ್‌ಸ್ಟಾರ್‌ನಲ್ಲಿ 65.2 ಮಿಲಿಯನ್ ವೀಕ್ಷಕರು ವೀಕ್ಷಿಸಿದ್ದಾರೆ. ಇದು ವಿಶ್ವದ ಯಾವುದೇ ಲೈವ್ ಕಾರ್ಯಕ್ರಮಕ್ಕೆ ಹೋಲಿಸಿದರೆ ಅತ್ಯಧಿಕವಾಗಿದೆ. ಫೈನಲ್ ಪಂದ್ಯವನ್ನು ಇನ್ನೂ ಆಡಬೇಕಾಗಿದೆ.

ಆದರೆ ಇದು (ಟಿ20 ವಿಶ್ವಕಪ್ 2026) ಈಗಾಗಲೇ 2024 ರಲ್ಲಿ ಯುನೈಟೆಡ್ ಸ್ಟೇಟ್ಸ್‌ನಲ್ಲಿ ನಡೆದ ಪಂದ್ಯಾವಳಿಯಲ್ಲಿ ನಿರ್ಮಿಸಿದ್ದ ವೀಕ್ಷಕರ ದಾಖಲೆಯನ್ನು ಮುರಿದಿದೆ’ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಪ್ರಮಾಣವಚನ ಸಮಾರಂಭಕ್ಕೆ ಸಕಲ ಸಿದ್ಧತೆ, 20 ಸಚಿವರ ಪಟ್ಟಿಗೆ ಹೈಕಮಾಂಡ್ ಅಸ್ತು..?

ಪೆರುವಿನಲ್ಲಿ ಭೀಕರ ದುರಂತ: ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ನೆಲಕ್ಕಪ್ಪಳಿಸಿ ಸ್ಫೋಟಗೊಂಡ ವಿಮಾನ, 11 ವಿದೇಶಿ ಪ್ರವಾಸಿಗರು ಸೇರಿ 13 ಮಂದಿ ದುರ್ಮರಣ..!

35 ವರ್ಷಗಳಿಂದ ಲೆಕ್ಕಪರಿಶೋಧನೆ ಇಲ್ಲ...! ಕೂಡಲಸಂಗಮ ಮಂಡಳಿ ಸಭೆಯಲ್ಲಿ ಅಧಿಕಾರಿಗಳ ಬೆವರಿಳಿಸಿದ DCM ಪರಮೇಶ್ವರ್..!

ಭಾರತೀಯ ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕ್ಷಮೆ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ!