ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 96 ರನ್ ಗಳ ಜಯ online desk
ಕ್ರಿಕೆಟ್

New Zealand ವಿರುದ್ಧ T20 world cup 2026 ಗೆಲುವು: ಭಾರತದ ಮುಡಿಗೆ 3 ವಿಶ್ವದಾಖಲೆ!

ಈ ಗೆಲುವಿನ ಮೂಲಕ ಭಾರತ ಕ್ರಿಕೆಟ್ ತಂಡ ಹಲವು ವಿಶ್ವ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ.

ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ 96 ರನ್ ಗಳ ಜಯ ಗಳಿಸಿದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಈ ಗೆಲುವಿನ ಮೂಲಕ ಭಾರತ ಕ್ರಿಕೆಟ್ ತಂಡ ಹಲವು ವಿಶ್ವ ದಾಖಲೆಗಳನ್ನು ತನ್ನದಾಗಿಸಿಕೊಂಡಿದೆ. 2024 ರಲ್ಲಿ ಟಿ20 ವಿಶ್ವಕಪ್ ಗೆದ್ದು ಚಾಂಪಿಯನ್ ಆಗಿದ್ದ ಭಾರತ ಕ್ರಿಕೆಟ್ ತಂಡ ತನ್ನ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಸತತ 2ನೇ ಟಿ20 ವಿಶ್ವಕಪ್ ಟ್ರೋಫಿ ಗೆದ್ದ ತಂಡ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಯಾವುದೇ ಹಾಲಿ ಚಾಂಪಿಯನ್ ತಂಡ ಸತತ 2ನೇ ಬಾರಿಗೆ ವಿಶ್ವಕಪ್ ಗೆದ್ದ ಇತಿಹಾಸವಿಲ್ಲ. ಆದರೆ ಭಾರತ ಈ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಸತತ 2ನೇ ಬಾರಿಗೆ ವಿಶ್ವಕಪ್ ಗೆದ್ದಿರುವುದು ಮೊದಲ ದಾಖಲೆಯಾಗಿದೆ.

ಚಾಂಪಿಯನ್ ಪಟ್ಟ ಪಡೆದ ಮೊದಲ ಆತಿಥೇಯ ತಂಡ ಭಾರತ

ಟಿ20 ವಿಶ್ವಕಪ್ ಟೂರ್ನಿ ಆಯೋಜಿಸಿದ್ದ ಯಾವುದೇ ಆತಿಥೇಯ ತಂಡ ಈ ವರೆಗೂ ವಿಶ್ವಕಪ್ ನ್ನು ತನ್ನದಾಗಿಸಿಕೊಂಡ ಇತಿಹಾಸವಿರಲಿಲ್ಲ. ಆದರೆ ಈ ವಿಭಾಗದಲ್ಲೂ ಅತ್ಯದ್ಭುತ ಸಾಧನೆ ಮಾಡಿದ್ದು, ಆತಿಥೇಯ ತಂಡವೊಂದು ಮೊದಲ ಬಾರಿಗೆ ವಿಶ್ವಕಪ್ ಪಟ್ಟ ಪಡೆದ ತಂಡ ಎಂಬ ಹೆಗ್ಗಳಿಕೆಗೆ ಭಾರತ ಕ್ರಿಕೆಟ್ ತಂಡ ಪಾತ್ರವಾಗಿದೆ.

3 ನೇ ಬಾರಿಗೆ ಚಾಂಪಿಯನ್ ಪಟ್ಟ ಪಡೆದ ಮೊದಲ ತಂಡ ಭಾರತ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ಬಾರಿ ವಿಶ್ವಕಪ್ ನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೂ ಭಾರತ ಕ್ರಿಕೆಟ್ ತಂಡ ಪಾತ್ರವಾಗಿದೆ.

2007 ರಲ್ಲಿ ಮೊದಲ ಬಾರಿಗೆ ಎಂಎಸ್ ಧೋನಿ ನೇತೃತ್ವದಲ್ಲಿ ಭಾರತ ಕ್ರಿಕೆಟ್ ತಂಡ ಪಾಕಿಸ್ತಾನವನ್ನು ಮಣಿಸಿ ಟಿ20 ವಿಶ್ವಕಪ್ ಟ್ರೋಫಿ ಪಡೆದಿತ್ತು. ಆ ಬಳಿಕ 2024 ರಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿ 2ನೇ ಬಾರಿಗೆ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು. ಈಗ ನ್ಯೂಜಿಲ್ಯಾಂಡ್ ವಿರುದ್ಧ ಗೆಲುವು ಸಾಧಿಸಿ 3ನೇ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಈ ಮೂಲಕ ಭಾರತ ಟಿ20 ಪುರುಷರ ವಿಭಾಗದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಟ್ರೋಫಿ ಗೆದ್ದ ತಂಡವಾಗಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!

ರಿಲಯನ್ಸ್ ಇಂಡಸ್ಟ್ರೀಸ್ ಜೊತೆ ಅಮೆರಿಕದ ತೈಲ ಶುದ್ಧೀಕರಣ ಘಟಕ ಒಪ್ಪಂದ: Donald Trump ಘೋಷಣೆ

KPCC ಅಧ್ಯಕ್ಷರಾಗಿ ಆರು ವರ್ಷ: ಡಿ ಕೆ ಶಿವಕುಮಾರ್ ಔತಣಕೂಟ ಆಯೋಜನೆ; ಸಿಎಂ ಸೇರಿ ಸಚಿವರು, ಶಾಸಕರು ಭಾಗಿ, ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ತೀವ್ರ

'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!

ನಿರ್ಮಲಾ ಸೀತಾರಾಮನ್ ಬಜೆಟ್ ಖಾಲಿ ಡ್ರಮ್ಮು: ನೋಡ್ರಪಾ, ನೀವು ಅದೆಲ್ಲಾ ಕನಸು ಕಾಣಲು ಹೋಗಬೇಡಿ; ವಿಪಕ್ಷಗಳ ಕಾಲೆಳೆದ ಡಿಕೆಶಿ

SCROLL FOR NEXT