ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2026: ವಿರಾಟ್ ಕೊಹ್ಲಿ ನೆಟ್​​ನಲ್ಲಿ ಕಠಿಣ ಅಭ್ಯಾಸ! Video ವೈರಲ್

ಇನ್‌ಸ್ಟಾಗ್ರಾಮ್‌ನಲ್ಲಿ ಕೊಹ್ಲಿ ಹಂಚಿಕೊಂಡಿರುವ ರೀಲ್ಸ್ ನಲ್ಲಿ 37 ವರ್ಷದ ಮಾಜಿ ಆರ್ ಸಿಬಿ ನಾಯಕ ನೆಟ್ ನಲ್ಲಿ ಅಭ್ಯಾಸ ನಡೆಸುತ್ತಿರುವುದು ಕಂಡುಬಂದಿದೆ.

ಸ್ಟಾರ್ ಇಂಡಿಯನ್ ಬ್ಯಾಟರ್ ವಿರಾಟ್ ಕೊಹ್ಲಿ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಸಿದ್ಧತೆಯನ್ನು ಪ್ರಾರಂಭಿಸಿದ್ದಾರೆ. ನೆಟ್‌ನಲ್ಲಿ ಅಭ್ಯಾಸ ಮಾಡುತ್ತಿರುವ ಕೊಹ್ಲಿ ವೀಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

ಇನ್‌ಸ್ಟಾಗ್ರಾಮ್‌ನಲ್ಲಿ ಕೊಹ್ಲಿ ಹಂಚಿಕೊಂಡಿರುವ ರೀಲ್ಸ್ ನಲ್ಲಿ 37 ವರ್ಷದ ಮಾಜಿ ಆರ್ ಸಿಬಿ ನಾಯಕ ನೆಟ್ ನಲ್ಲಿ ಅಭ್ಯಾಸ ನಡೆಸುತ್ತಿರುವುದು ಕಂಡುಬಂದಿದೆ. ಐಪಿಎಲ್‌ನ ಹೊಸ ಸೀಸನ್ ಗೆ ಸಜ್ಜಾಗುತ್ತಿರುವಂತೆ ಬ್ಯಾಟಿಂಗ್‌ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದಾರೆ.

ಈ ವಿಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಕೊಹ್ಲಿ ಫಿಟ್ ನೆಸ್ ಕಂಡು ಪುಳಕೀತರಾಗಿದ್ದಾರೆ. ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ 267 ಪಂದ್ಯಗಳನ್ನಾಡಿರುವ ಕೊಹ್ಲಿ, 259 ಇನ್ನಿಂಗ್ಸ್‌ಗಳಲ್ಲಿ 8661 ರನ್ ಗಳಿಸಿದ್ದಾರೆ. 39.54 ಸರಾಸರಿಯಲ್ಲಿ 132.85 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಎಂಟು ಶತಕಗಳು ಮತ್ತು 63 ಅರ್ಧ ಶತಕಗಳನ್ನು ಸಿಡಿಸಿದ್ದಾರೆ.

ಕಳೆದ ಆವೃತ್ತಿಯಲ್ಲಿ 15 ಪಂದ್ಯಗಳಲ್ಲಿ 54.75 ರ ಸರಾಸರಿಯಲ್ಲಿ 657 ರನ್ ಗಳಿಸಿದ ಕೊಹ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್