ಸಲ್ಮಾನ್ ಅಲಿ ಅಘಾ ರನೌಟ್ 
ಕ್ರಿಕೆಟ್

Video: 'ನಿಂಗಿದು ಬೇಕಿತ್ತಾ...'; ಬಾಲ್ ಕೊಡಲು ಹೋಗಿ ರನೌಟ್ ಆದ ಪಾಕ್ ಮಾಜಿ ನಾಯಕ; ಕೆರಳಿ ಕೆಂಡವಾದ Salman Agha

ಢಾಕಾದ ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟರ್ ಸಲ್ಮಾನ್ ಅಲಿ ಅಘಾ ವಿಚಿತ್ರವಾಗಿ ಔಟ್ ಆಗಿದ್ದಾರೆ.

ಢಾಕಾ: ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಅಲಿ ಅಘಾ ವಿಚಿತ್ರ ರೀತಿಯಲ್ಲಿ ರನೌಟ್ ಆಗಿ ನೆಗಪಾಟಲಿಗೀಡಾಗಿದ್ದಾರೆ.

ಹೌದು.. ಢಾಕಾದ ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟರ್ ಸಲ್ಮಾನ್ ಅಲಿ ಅಘಾ ವಿಚಿತ್ರವಾಗಿ ಔಟ್ ಆಗಿದ್ದಾರೆ. ತಮ್ಮದೇ ಪ್ರಮಾದದಿಂದಾಗಿ ಸಲ್ಮಾನ್ ಅಲಿ ಅಘಾ ಔಟಾಗಿದ್ದು, ಔಟಾದ ಬಳಿಕ ಕೆರಳಿ ಕೆಂಡವಾಗಿ ಬೌಲರ್ ವಿರುದ್ಧ ಕಿಡಿಕಾರಿದ್ದಾರೆ.

ಪಾಕಿಸ್ತಾನದ ಇನ್ನಿಂಗ್ಸ್‌ನ 39 ನೇ ಓವರ್‌ ನಲ್ಲಿ ಬಾಂಗ್ಲಾದೇಶದ ಬೌಲರ್ ಮೆಹದಿ ಹಸನ್ ಎಸೆದ ನಾಲ್ಕನೇ ಚೆಂಡನ್ನು ರಿಜ್ವಾನ್ ನೇರವಾಗಿ ಬೌಲರ್ ಕಡೆಗೆ ಆಡಿದರು.

ಇತ್ತ ನಾನ್-ಸ್ಟ್ರೈಕರ್ ತುದಿಯಲ್ಲಿ ನಿಂತಿದ್ದ ಸಲ್ಮಾನ್ ಆಘಾ ರನ್​ಗಾಗಿ ತಮ್ಮ ಕ್ರೀಸ್‌ನಿಂದ ಹೊರಬಂದರಾದರೂ ಅಲ್ಲಿ ರನ್ ಇಲ್ಲದಿರುವುದನ್ನು ಗಮನಿಸಿ ಅಲ್ಲಿಯೇ ನಿಂತರು. ಅಷ್ಟರಲ್ಲಿ ರಿಜ್ವಾನ್ ಬಾರಿಸಿದ ಚೆಂಡು ಕೂಡ ಆಘಾ ಕಡೆಗೆ ಬಂತು. ಹೀಗಾಗಿ ಆಘಾ ಚೆಂಡನ್ನು ಹಿಡಿದು ಬೌಲರ್​ ಮೆಹದಿ ಹಸನ್​ಗೆ ರವಾನಿಸಲು ಪ್ರಯತ್ನಿಸಿದರು.

ಈ ಹಂತದಲ್ಲಿ ಚಾಣಾಕ್ಷತೆ ತೋರಿದ ಮೆಹದಿ ಹಸನ್ ತಾವೇ ಚೆಂಡನ್ನು ಎತ್ತಿಕೊಂಡು ನೇರವಾಗಿ ಸ್ಟಂಪ್​ಗೆ ಎಸೆದರು. ಇದೆಲ್ಲ ನಡೆಯುವಾಗ ಕ್ರೀಸ್​ನಿಂದ ಹೊರಗೆ ನಿಂತಿದ್ದ ಆಘಾ, ಕ್ರೀಸ್ ಒಳಗೆ ಬರುವ ಪ್ರಯತ್ನವನ್ನು ಮಾಡಲಿಲ್ಲ. ಹೀಗಾಗಿ ಚೆಂಡನ್ನು ಸ್ಟಂಪ್​ಗೆ ಎಸೆದ ಕೂಡಲೇ ಮೆಹದಿ ಹಸನ್​ ಔಟ್​ಗಾಗಿ ಅಂಪೈರ್ ಬಳಿ ಮನವಿ ಮಾಡಲಾರಂಬಿಸಿದರು.

ಪಾಕ್ ಬ್ಯಾಟರ್ ಕಕ್ಕಾಬಿಕ್ಕಿ

ಇದನ್ನು ನೋಡಿ ಆಘಾತಕ್ಕೊಳಗಾದ ಆಘಾ, ಹಸನ್ ಜೊತೆಗೆ ವಾದಿಸಲು ಪ್ರಾರಂಭಿಸಿದರು. ಇತ್ತ ಫೀಲ್ಡ್ ಅಂಪೈರ್ ಮೂರನೇ ಅಂಪೈರ್​ ಬಳಿ ಮರುಪರಿಶೀಲನೆಗೆ ಮನವಿ ಮಾಡಿದರು. ಎಲ್ಲವನ್ನು ಕುಲಂಕುಶವಾಗಿ ಪರಿಶೀಲಿಸಿದ ಅಂಪೈರ್, ಸಲ್ಮಾನ್ ಆಘಾ ಔಟೆಂದು ತೀರ್ಪು ನೀಡಿದರು.

ಇದರಿಂದ ಇನ್ನಷ್ಟು ಕೆರಳಿದ ಆಘಾ, ತಮ್ಮ ಹೆಲ್ಮೆಟ್ ಮತ್ತು ಕೈಗ್ಲೌಸ್ ಗಳನ್ನು ತೆಗೆದು ನೆಲದ ಮೇಲೆ ಬಡಿದು ಆಕ್ರೋಶ ಹೊರಹಾಕಿದರು.

ಅಂದಹಾಗೆ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಗೆದ್ದುಕೊಂಡಿತ್ತು.

ಹೀಗಾಗಿ ಎರಡನೇ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಿ 47.3 ಓವರ್ ನಲ್ಲಿ 274 ರನ್ ಪೇರಿಸಿತು. ಪಾಕ್ ಪರ ಫರ್ಹಾನ್ 31 ರನ್, ಮಾಝ್ ಸದಾಕತ್ 75, ಮಹಮದ್ ರಿಜ್ವಾನ್ 44 ಮತ್ತು ಸಲ್ಮಾನ್ ಅಲಿ ಅಘಾ 64 ರನ್ ಗಳಿಸಿದರು.

ಈ ಮೊತ್ತವನ್ನು ಬೆನ್ನು ಹತ್ತಿದ ಬಾಂಗ್ಲಾದೇಶಕ್ಕೆ ಮಳೆ ಅಡ್ಡಿಯಾಯಿತು. ಹೀಗಾಗಿ ಅಂಪೈರ್ ಗಳು ಡಕ್ವರ್ಥ್ ಲೂಯಿಸ್ ನಿಯಮದ ಅನ್ವಯ ಬಾಂಗ್ಲಾದೇಶಕ್ಕೆ 32 ಓವರ್ ನಲ್ಲಿ 243 ರನ್ ಗಳ ಟಾರ್ಗೆಟ್ ನೀಡಿದರು. ಈ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ಬಾಂಗ್ಲಾದೇಶ 23.3 ಓವರ್ ನಲ್ಲಿ ಕೇವಲ 114 ರನ್ ಗಳಿಗೇ ಆಲೌಟ್ ಆಯಿತು. ಆ ಮೂಲಕ ಪಾಕಿಸ್ತಾನ 128 ರನ್ ಗಳ ಅಂತರದಲ್ಲಿ ಗೆದ್ದಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

IPL 2026: ರಿಕಲ್ಟನ್ ಶತಕ ವ್ಯರ್ಥ; ಮುಂಬೈ ನೀಡಿದ ಟಾರ್ಗೆಟ್ ಧೂಳಿಪಟ, ದಾಖಲೆಯ 249 ರನ್ ಬಾರಿಸಿದ ಗೆದ್ದ SRH!

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

SCROLL FOR NEXT