ಐಪಿಎಲ್ ಸಾಂದರ್ಭಿಕ ಚಿತ್ರ 
ಕ್ರಿಕೆಟ್

IPL 2026: ಇದಾದ ಬಳಿಕವೇ ಸಂಪೂರ್ಣ ವೇಳಾಪಟ್ಟಿ ಪ್ರಕಟ- BCCI

ಭಾರತೀಯ ಚುನಾವಣಾ ಆಯೋಗವು ಭಾನುವಾರ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ

ನವದೆಹಲಿ: IPL 2026 ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಕುರಿತು ಬಿಸಿಸಿಐ ಭಾನುವಾರ ಮಹತ್ವದ ಮಾಹಿತಿ ಹಂಚಿಕೊಂಡಿದೆ.

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಪ್ರಕಟಿಸಿದ ನಂತರ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಭಾನುವಾರ ಹೇಳಿದ್ದಾರೆ.

ಭಾರತೀಯ ಚುನಾವಣಾ ಆಯೋಗವು ಭಾನುವಾರ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ. ಸಂಜೆ 4 ಗಂಟೆಗೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ.

ಚುನಾವಣಾ ದಿನಾಂಕ ಪ್ರಕಟಿಸಿದರೆ ಒಳ್ಳೆಯದು, ದಿನಾಂಕಗಳನ್ನು ಪ್ರಕಟಿಸಿದ ನಂತರ ನಾವು ಐಪಿಎಲ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ ಎಂದು ಶುಖ್ಲಾ ಹೇಳಿದರು.

ಚುನಾವಣಾ ವೇಳಾಪಟ್ಟಿ ಪ್ರಕಟವಾದ ನಂತರವೇ ಪೊಲೀಸ್ ನಿಯೋಜನೆಯ ಲಭ್ಯತೆ ತಿಳಿಯುತ್ತದೆ ಎಂದು ಶುಕ್ಲಾ ತಿಳಿಸಿದ್ದಾರೆ.

ಇಂದು ವೇಳಾಪಟ್ಟಿ ಪ್ರಕಟಿಸಿದರೆ ನಮಗೆ ಸಮಾಧಾನವಾಗಲಿದೆ. ಆಗಲೇ ಪೊಲೀಸ್ ನಿಯೋಜನೆ ಬಗ್ಗೆ ಮಾಹಿತಿ ಲಭ್ಯವಾಗುವುದರಿಂದ ಐಪಿಎಲ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಹೀಗಾಗಿ ಇಂದು ಚುನಾವಣೆ ದಿನಾಂಕ ಪ್ರಕಟಿಸಿದರೆ ಶೀಘ್ರವೇ ಐಪಿಎಲ್‌ನ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!