ಡೆಲ್ಲಿ ಕ್ಯಾಪಿಟಲ್ಸ್ ತಂಡ 
ಕ್ರಿಕೆಟ್

IPL 2026: ಡೆಲ್ಲಿ ಕ್ಯಾಪಿಟಲ್ಸ್ ಟ್ರೋಫಿ ಗೆಲ್ಲಲಿದೆ, ಸಂಜು ಸ್ಯಾಮ್ಸನ್‌ಗೆ ಆರೆಂಜ್ ಕ್ಯಾಪ್ ಸಿಗಲಿದೆ; ಕೆಕೆಆರ್ ಮಾಜಿ ಕ್ರಿಕೆಟಿಗ ಭವಿಷ್ಯ

ಈ ವರ್ಷ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂದು ಕೇಳಿದಾಗ, ಅವರು ಮೊದಲು 'ಚೆನ್ನಾಗಿ ಆಡುವವರು ಗೆಲ್ಲುತ್ತಾರೆ' ಎಂದರು.

ಐಪಿಎಲ್ 2026ರ ಪ್ಲೇಆಫ್‌ಗೆ ಯಾವ ತಂಡಗಳು ಪ್ರವೇಶಿಸುತ್ತವೆ ಎಂಬುದರ ಕುರಿತು ಭಾರತೀಯ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ಲೀಗ್ ಪ್ರಾರಂಭವಾಗುವ ಮೊದಲೇ ಭವಿಷ್ಯ ನುಡಿದಿದ್ದಾರೆ. ಮಾರ್ಚ್ 28 ರಿಂದ ಪಂದ್ಯಾವಳಿ ಪ್ರಾರಂಭವಾಗಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ವಿರುದ್ಧ ಸೆಣಸಲಿದೆ. ಚೋಪ್ರಾ ಮುಂಬೈ ಇಂಡಿಯನ್ಸ್ (ಎಂಐ), ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಅನ್ನು ಪ್ಲೇಆಫ್‌ಗೆ ತಲುಪುತ್ತವೆ ಎಂದಿದ್ದಾರೆ.

ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಕ್ರೆಕ್ಸ್ ಅಪ್‌ಲೋಡ್ ಮಾಡಿದ ವಿಡಿಯೋದಲ್ಲಿ, ಆಕಾಶ್ ಚೋಪ್ರಾ ಅವರು, IPL 2026ರ ಪ್ಲೇಆಫ್‌ಗೆ ಯಾವ ತಂಡಗಳು ಬರುತ್ತವೆ ಎಂಬುದನ್ನು ಈಗಲೇ ಆಯ್ಕೆ ಮಾಡುವುದು ಕಷ್ಟ. ಆದರೂ, PBKS, MI, RCB ಮತ್ತು DC ತಂಡಗಳು ಅಂತಿಮ 4 ತಂಡಗಳಾಗಿ ಹೊರಹೊಮ್ಮುತ್ತವೆ ಎಂದಿದ್ದಾರೆ.

ಈ ವರ್ಷ ಟ್ರೋಫಿಯನ್ನು ಯಾರು ಗೆಲ್ಲುತ್ತಾರೆ ಎಂದು ಕೇಳಿದಾಗ, ಅವರು ಮೊದಲು 'ಚೆನ್ನಾಗಿ ಆಡುವವರು ಗೆಲ್ಲುತ್ತಾರೆ' ಎಂದರು. ನಂತರ, ಡೆಲ್ಲಿ ಕ್ಯಾಪಿಟಲ್ಸ್ ಹೊಸ ಚಾಂಪಿಯನ್ ಆಗಬಹುದು ಎಂದು ಅವರು ಸೂಚಿಸಿದರು.

IPL 2025ನೇ ಆವೃತ್ತಿಯಲ್ಲಿ ಪಂಜಾಬ್ ಕಿಂಗ್ಸ್, ಎಂಐ, ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪ್ಲೇಆಫ್‌ನಲ್ಲಿ ಸ್ಥಾನ ಪಡೆದವು. ಪಂಜಾಬ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೈನಲ್ ಪಂದ್ಯವನ್ನು ಆಡಿತು. ಅಲ್ಲಿ ಅವರು 6 ರನ್‌ಗಳಿಂದ ಸೋತರು.

ಮತ್ತೊಂದೆಡೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಂದ್ಯಾವಳಿಯನ್ನು ಉತ್ತಮ ರೀತಿಯಲ್ಲಿ ಪ್ರಾರಂಭಿಸಿತು ಆದರೆ ಮಧ್ಯದಲ್ಲಿ ಕಳಪೆ ಪ್ರದರ್ಶನ ನೀಡಿತು. ಆದ್ದರಿಂದ, ಪ್ಲೇಆಫ್‌ನಲ್ಲಿ ಸೋತು ಪಂದ್ಯಾವಳಿಯಿಂದ ಹೊರಗುಳಿಯಿತು.

ಮುಂಬರುವ ಐಪಿಎಲ್ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ಅವರು ಆರೆಂಜ್ ಕ್ಯಾಪ್, ಜಸ್ಪ್ರೀತ್ ಬುಮ್ರಾ ಅವರು ಪರ್ಪಲ್ ಕ್ಯಾಪ್ ಪಡೆಯುತ್ತಾರೆ. ವೈಭವ್ ಸೂರ್ಯವಂಶಿ ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಭಾಜನರಾಗುತ್ತಾರೆ ಎಂದು ಚೋಪ್ರಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

ಬಕ್ರೀದ್ ಮೇಕೆ ವಿಷಯವಾಗಿ ಮುಂಬೈ ಸೊಸೈಟಿಯಲ್ಲಿ ಭಾರಿ ವಿವಾದ; VHP ಕಾರ್ಯಕರ್ತರ ಮೇಲೆ ಬ್ಲೇಡ್ ನಿಂದ ಹಲ್ಲೆ!

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

SCROLL FOR NEXT