ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2026, RCB vs SRH: ಕಿಂಗ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಉದ್ಘಾಟನಾ ಪಂದ್ಯ ಗೆದ್ದು ಬೀಗಿದ ಬೆಂಗಳೂರು

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್​ಗಳ ಬೃಹತ್ ಮೊತ್ತ ಕಲೆಹಾಕಿತು.

ಹೈದರಾಬಾದ್ ಪರ ಇಶಾನ್ ಕಿಶನ್ ಸ್ಫೋಟಕ 80 ರನ್​ಗಳ ಇನ್ನಿಂಗ್ಸ್ ಆಡಿದರೆ, ಆರ್​ಸಿಬಿ ಪರ ಡಫಿ ಪ್ರಮುಖ 3 ವಿಕೆಟ್ ಪಡೆದರು.

ಗೆಲುವಿಗೆ 202 ರನ್ ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರು ಪವರ್‌ಪ್ಲೇನಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ನಾಲ್ಕು ಓವರ್‌ಗಳಲ್ಲಿ ಇಬ್ಬರು ಸೇರಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿದರು.

ವಿರಾಟ್ ಕೊಹ್ಲಿಯ ಭರ್ಜರಿ ಅರ್ಧ ಶತಕ(69)ದ ನೆರವಿನಿಂದ ಕೇವಲ 15.4 ಓವರ್ ಗಳಲ್ಲಿ 203ರನ್ ಗಳಿಸುವ ಮೂಲಕ ಆರ್ ಸಿಬಿ ಆರು ವಿಕೆಟ್ ಗಳ ಗೆಲುವು ಸಾಧಿಸಿತು.

ಪಂದ್ಯಕ್ಕೂ ಮುನ್ನ ಮೌನಾಚರಣೆ

ಕಳೆದ ವರ್ಷ ಆರ್‌ಸಿಬಿ ತಂಡದ ವಿಜಯೋತ್ಸವದ ಮೆರವಣಿಗೆಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 11 ಜನರ ಸ್ಮರಣಾರ್ಥ ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯಕ್ಕೂ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?