ಎಂ ಎಸ್ ಧೋನಿ  
ಕ್ರಿಕೆಟ್

IPL 2026: CSK ಫ್ಯಾನ್ಸ್ ಗೆ ಶಾಕ್; ಕಾಲಿನ ಗಾಯದಿಂದ ಮೊದಲ 2 ವಾರ MS Dhoni ಪಂದ್ಯದಿಂದ ಔಟ್

ಟೂರ್ನಮೆಂಟ್‌ನ 19ನೇ ಆವೃತ್ತಿ ಇಂದು ಶನಿವಾರದಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಆಡಲಿದೆ.

ಭಾರತ ಕ್ರಿಕೆಟ್ ತಂಡದ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರಿಗೆ ಕಾಲಿನ (calf strain) ಗಾಯವಾಗಿದ್ದು, ಅವರು ಐಪಿಎಲ್ 2026ರ ಮೊದಲ ಎರಡು ವಾರಗಳಿಗೆ ಹೊರಗುಳಿಯಲಿದ್ದಾರೆ ಎಂದು ಫ್ರಾಂಚೈಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಟೂರ್ನಮೆಂಟ್‌ನ 19ನೇ ಆವೃತ್ತಿ ಇಂದು ಶನಿವಾರದಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಆಡಲಿದೆ.

CSK ತಂಡವು ಸೋಮವಾರ ತನ್ನ ಮೊದಲ ಪಂದ್ಯವನ್ನು ಮೊದಲ ಆವೃತ್ತಿಯ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಐದು ಬಾರಿ ಪ್ರಶಸ್ತಿ ಗೆದ್ದಿರುವ ಮಹೇಂದ್ರ ಸಿಂಗ್ ಧೋನಿ ಅವರು ಆರಂಭಿಕ ಪಂದ್ಯಗಳನ್ನು ಮಿಸ್ ಮಾಡಿ ಮೊದಲ ಎರಡು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದು ಸಿಎಸ್ ಕೆ ಹೇಳಿದೆ.

ಎಂಎಸ್ ಧೋನಿ ಅವರು ಈಗ ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಾರಣದಿಂದ ಅವರು ಐಪಿಎಲ್ 2026ರ ಮೊದಲ ಎರಡು ವಾರಗಳನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಫ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ, ತಂಡವು ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಅಭ್ಯಾಸ ಪಂದ್ಯ (ಮ್ಯಾಚ್ ಸಿಮ್ಯುಲೇಷನ್) ವಿಡಿಯೋವನ್ನು ಹಂಚಿಕೊಂಡಿತ್ತು. ಅದರಲ್ಲಿ ಧೋನಿ ಬ್ಯಾಟಿಂಗ್ ಮಾಡಿದ್ದು, ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಮಾಡಿದರು. 44 ವರ್ಷದ ಧೋನಿ ಹಲವು ಅದ್ಭುತ ಶಾಟ್‌ಗಳನ್ನು ಹೊಡೆದು ಚೆಂಡನ್ನು ಗಡಿ ದಾಟಿಸಿದ್ದರು.

ಧೋನಿಯವರು ಆಟದಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ, ಆರಂಭಿಕ ಪಂದ್ಯಗಳಲ್ಲಿ CSK ತಂಡದ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ವಹಿಸುವ ಸಾಧ್ಯತೆ ಇದೆ. CSK ತಂಡವು ದಾಖಲೆ ಆರನೇ ಐಪಿಎಲ್ ಪ್ರಶಸ್ತಿಗಾಗಿ ಪ್ರಯತ್ನಿಸುತ್ತಿದೆ. ಇತ್ತ, ಮೊದಲು ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿದ್ದ ಸ್ಯಾಮ್ಸನ್ ಅವರನ್ನು ಸಿಎಸ್ ಕೆ ತಂಡಕ್ಕೆ ವರ್ಗಾವಣೆ ಮಾಡಲಾಗಿದ್ದು, ರುತುರಾಜ್ ಗಾಯಕ್ವಾಡ್ ನೇತೃತ್ವದ ತಂಡವು ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಮತ್ತು ಸ್ಯಾಮ್ ಕರನ್ ಅವರನ್ನು ಮತ್ತೊಂದು ತಂಡಕ್ಕೆ ವರ್ಗಾವಣೆ ಮಾಡಿದೆ.

ಇಂಗ್ಲೆಂಡ್‌ನ ಆಲ್‌ರೌಂಡರ್ ಸ್ಯಾಮ್ ಕರನ್ ಗಾಯದ ಕಾರಣದಿಂದ ಐಪಿಎಲ್ 2026ರಿಂದ ಹೊರಗುಳಿದಿದ್ದಾರೆ. ಸೋಮವಾರ ಗೌಹಾಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಸಿಎಸ್ ಕೆ ಮುಖಾಮುಖಿಯಾಗುವಾಗ, ಸ್ಯಾಮ್ಸನ್ ಮತ್ತು ಜಡೇಜಾ ತಮ್ಮ ಹಳೆಯ ತಂಡಗಳ ವಿರುದ್ಧ ಆಡುತ್ತಿರುವುದು ಕುತೂಹಲಕರವಾಗಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್