ರೋಹಿತ್, ರಿಕಲ್ಟನ್ 
ಕ್ರಿಕೆಟ್

IPL 2026: ರೋಹಿತ್, ರಿಕಲ್ಟನ್ ಅಬ್ಬರದ ಬ್ಯಾಟಿಂಗ್; KKR ವಿರುದ್ಧ ಮುಂಬೈಗೆ ಭರ್ಜರಿ ಗೆಲುವು

ಇಂದು ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(MI) ತಂಡ ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್(KKR) ವಿರುದ್ಧ 6 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 14 ವರ್ಷಗಳ ನಂತರ ಮೊದಲ ಬಾರಿ ಆರಂಭಿಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯ ಗಳಿಸಿದೆ.

ಇಂದು ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್, ನಿಗದಿತ 20 ಓವರ್‌ಗಳಲ್ಲಿ 220 ರನ್ ಗಳ ಬೃಹತ್ ಮೊತ್ತ ಕಲೆಹಾಕಿತು.

ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಅವರು 40 ಎಸೆತಗಳಲ್ಲಿ 67 ರನ್ ಗಳಿಸಿದರೆ, ಫಿನ್ ಅಲೆನ್ 37 ರನ್ ಗಳಿಸಿದರು. ಈ ಇಬ್ಬರೂ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು. ಹೀಗಾಗಿ ಕೋಲ್ಕತ್ತಾ ತಂಡ ದೊಡ್ಡ ಸ್ಕೋರ್ ತಲುಪಲು ಸಹಾಯ ಮಾಡಿತು.

ಗೆಲುವಿಗೆ 221 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್, ರೋಹಿತ್ ಶರ್ಮಾ(78) ಹಾಗೂ ರಿಯಾನ್ ರಿಕಲ್ಟನ್(81) ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ 19.1 ಓವರ್ ಗಳಲ್ಲಿ 224ರನ್ ಗಳಿಸುವ ಮೂಲಕ ಆರು ವಿಕೆಟ್ ಗಳ ಗೆಲುವು ಸಾಧಿಸಿತು.

ರೋಹಿತ್ ಶರ್ಮಾ ಅವರು ಕೇವಲ 23 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಐದು ಸಿಕ್ಸರ್‌ ಮತ್ತು ಮೂರು ಬೌಂಡರಿಗಳನ್ನು ರೋಹಿತ್ ಶರ್ಮಾ ಬಾರಿಸಿದರು. ಇನ್ನೂ ರಿಕಲ್ಟನ್ ಅವರು 43 ಎಸೆತಗಳಲ್ಲಿ 81 ರನ್ ಗಳಿಸಿ ರನೌಟ್ ಆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್