ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2026: ಇತಿಹಾಸ ಬರೆದ ಕಿಂಗ್ Virat kohli, ಒಂದೇ ಪಂದ್ಯದಲ್ಲಿ ಬರೊಬ್ಬರಿ 10 ದಾಖಲೆ ನಿರ್ಮಾಣ! ಏಕೈಕ ಆಟಗಾರ

ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹಾಲಿ ವರ್ಷದ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಬೆಂಗಳೂರು: ಐಪಿಎಲ್ 2026ರ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳುರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಆರಂಭಿಕ ಪಂದ್ಯದಲ್ಲೇ ರನ್ ಮೆಷಿನ್ ವಿರಾಟ್ ಕೊಹ್ಲಿ ಹಲವು ದಾಖಲೆಗಳ ನಿರ್ಮಿಸಿದ್ದಾರೆ.

ನಿನ್ನೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹಾಲಿ ವರ್ಷದ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ ನಿಗಧಿತ 20 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 201ರನ್ ಪೇರಿಸಿತ್ತು. ಈ ಪೈಕಿ ಇಶಾನ್ ಕಿಶನ್ 80 ರನ್ ಗಳಿಸಿದರೆ, ಅನಿಕೇತ್ 43 ಮತ್ತು ಕ್ಲಾಸನ್ 31 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.

ಗೆಲ್ಲಲು 202 ರನ್ ಗಳ ಮೊತ್ತವನ್ನು ಬೆನ್ನು ಹತ್ತಿದ ಆರ್ ಸಿಬಿ ದೇವದತ್ ಪಡಿಕ್ಕಲ್ (61) ವಿರಾಟ್ ಕೊಹ್ಲಿ (ಅಜೇಯ 69) ಮತ್ತು ನಾಯಕ ರಜತ್ ಪಾಟಿದಾರ್ (31 ರನ್) ಉತ್ತಮ ಬ್ಯಾಟಿಂಗ್ ನೆರವಿನಿಂದ 15.4 ಓವರ್ ನಲ್ಲೇ 203 ರನ್ ಕಲೆಹಾಕಿ 6 ವಿಕೆಟ್ ಅಂತರದ ಜಯಭೇರಿ ಭಾರಿಸಿತು.

ಒಂದೇ ಪಂದ್ಯದಲ್ಲಿ ಕೊಹ್ಲಿ ಹೆಸರಿಗೆ 10 ದಾಖಲೆಗಳು

ಇನ್ನು ಈ ಪಂದ್ಯದಲ್ಲಿ ಕೊನೆಯವರೆಗೂ ಕ್ರೀಸ್ ನಲ್ಲಿ ನಿಂತು ಅದ್ಭುತ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಈ ಒಂದೇ ಒಂದು ಪಂದ್ಯದ ಮೂಲಕ ಬರೊಬ್ಬರಿ 10 ದಾಖಲೆಗಳನ್ನು ನಿರ್ಮಾಣ ಮಾಡಿದ್ದಾರೆ. ಈ ಎಲ್ಲ ದಾಖಲೆಗಳ ಪಟ್ಟಿ ಇಲ್ಲಿದೆ.

ಚೇಸಿಂಗ್ ನಲ್ಲೇ 4000 ರನ್​

ಐಪಿಎಲ್ ಇತಿಹಾಸದಲ್ಲೇ ಚೇಸಿಂಗ್​ನಲ್ಲಿ 4000 ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಐಪಿಎಲ್​ನಲ್ಲಿ ಚೇಸಿಂಗ್​ ವೇಳೆ 4 ಸಾವಿರ ರನ್​ಗಳ ಗಡಿ ದಾಟಿಲ್ಲ.

ಅತ್ಯಧಿಕ ರನ್ ಕಲೆ ಹಾಕಿದ ಆಟಗಾರ: ಅಂತೆಯೇ ಐಪಿಎಲ್‌ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ತಂಡದ ಪರ ಅತ್ಯಧಿಕ ರನ್ ಗಳಿಸಿದ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಈ ಹಿಂದೆ ಈ ದಾಖಲೆ ಡೇವಿಡ್ ವಾರ್ನರ್ (66) ಹೆಸರಿನಲ್ಲಿತ್ತು. ಇದೀಗ 67ನೇ ಬಾರಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮುವ ಮೂಲಕ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

50+ ಸ್ಕೋರ್​ ಮತ್ತು ಗೆಲುವು

ನಿನ್ನೆಯ ಗೆಲುವಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಈ ಹಿಂದೆ ಈ ದಾಖಲೆ ಡೇವಿಡ್ ವಾರ್ನರ್ (41) ಹೆಸರಿನಲ್ಲಿತ್ತು. ಇದೀಗ ಆರ್‌ಸಿಬಿ ಗೆದ್ದ ಪಂದ್ಯಗಳಲ್ಲಿ ಕೊಹ್ಲಿ 42 ಬಾರಿ 50+ ಸ್ಕೋರ್​ಗಳಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅತೀ ಹೆಚ್ಚು ಬಾರಿ ಅಜೇಯ

ಐಪಿಎಲ್‌ನಲ್ಲಿ 50+ ಸ್ಕೋರ್​ಗಳಿಸಿ ಅತ್ಯಧಿಕ ಬಾರಿ ಅಜೇಯರಾಗಿ ಉಳಿದ ಬ್ಯಾಟರ್ ಎಂಬ ದಾಖಲೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಈ ಹಿಂದೆ ಈ ದಾಖಲೆ ಎಬಿ ಡಿವಿಲಿಯರ್ಸ್ (23) ಹೆಸರಿನಲ್ಲಿತ್ತು. ಇದೀಗ 24ನೇ ಬಾರಿ ಅಜೇಯರಾಗಿ ಉಳಿಯುವ ಮೂಲಕ ಕೊಹ್ಲಿ ಹೊಸ ದಾಖಲೆ ಬರೆದಿದ್ದಾರೆ.

ಚೇಸಿಂಗ್ ನಲ್ಲಿ ಅತೀ ಹೆಚ್ಚು ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಕೆ

ಅಂತೆಯೇ ಯಶಸ್ವಿ ಚೇಸಿಂಗ್ ವೇಳೆ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ದಾಖಲೆ ಕೂಡ ಕಿಂಗ್ ಕೊಹ್ಲಿಯ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಡೇವಿಡ್ ವಾರ್ನರ್ (20) ಹಾಗೂ ಶಿಖರ್ ಧವನ್ (20) ಹೆಸರಿನಲ್ಲಿತ್ತು. ಇದೀಗ 21ನೇ ಬಾರಿ ಯಶಸ್ವಿ ಚೇಸಿಂಗ್​​ನಲ್ಲಿ 50 ಕ್ಕಿಂತ ಅಧಿಕ ಸ್ಕೋರ್​ಗಳಿಸಿ ಕೊಹ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಹೈದರಾಬಾದ್ ವಿರುದ್ಧ ಅತ್ಯಧಿಕ ರನ್

ಸನ್​ರೈಸರ್ಸ್​ ಹೈದರಾಬಾದ್ ತಂಡದ ವಿರುದ್ಧ ಅತಿ ಹೆಚ್ಚು ರನ್ (874) ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ.

ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಓಪನಿಂಗ್ ಬ್ಯಾಟರ್

ಇದೇ ವೇಳೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತೀಯ ಓಪನರ್ ಎಂಬ ದಾಖಲೆ ಕೂಡ ವಿರಾಟ್ ಕೊಹ್ಲಿ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ (179) ಹೆಸರಿನಲ್ಲಿತ್ತು. ಇದೀಗ 181 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಸಿಕ್ಸರ್ ಸರದಾರ ಎನಿಸಿಕೊಂಡಿದ್ದಾರೆ.

ಅತೀ ಹೆಚ್ಚು ಬಾರಿ ಗರಿಷ್ಛ ಸ್ಟ್ರೈಕ್ ರೇಟ್‌

ಐಪಿಎಲ್ ಇತಿಹಾಸದಲ್ಲಿ 150+ ಸ್ಟ್ರೈಕ್ ರೇಟ್​ನಲ್ಲಿ ಅತಿ ಹೆಚ್ಚು ಬಾರಿ ಟಾಪ್ ಸ್ಕೋರರ್ ಆಗಿ ಹೊರಹೊಮ್ಮಿದ್ದ ಬ್ಯಾಟರ್ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕಿಂಗ್ ಕೊಹ್ಲಿ 150 ಕ್ಕಿಂತ ಹೆಚ್ಚಿನ ಸ್ಟ್ರೈಕ್​ ರೇಟ್​ನಲ್ಲಿ 31ನೇ ಬಾರಿ 50+ ಸ್ಕೋರ್​​ ಗಳಿಸುವ ಮೂಲಕ ರೋಹಿತ್ ಶರ್ಮಾ (30) ಅವರ ದಾಖಲೆ ಮುರಿದಿದ್ದಾರೆ.

19 ಸೀಸನ್ ಒಂದೇ ತಂಡದ ಪರ ಆಡಿದ ಏಕೈಕ ಆಟಗಾರ

ಇದಲ್ಲದೆ ಐಪಿಎಲ್​ ಇತಿಹಾಸದಲ್ಲಿ ಒಂದೇ ತಂಡದ ಪರ 19 ಸೀಸನ್​ ಆಡಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೂ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಹಾಗೆಯೇ ಎಸ್​ಆರ್​ಹೆಚ್ ವಿರುದ್ಧ ಗಳಿಸಿದ 69 ರನ್​ಗಳೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೇರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೊನೆಗೂ ಇರಾನ್ ನೆಲದಲ್ಲಿ ಸೇನೆ ಇಳಿಸ್ತಾ ಅಮೆರಿಕ?: 20 ವರ್ಷಗಳಲ್ಲಿ ಅತಿದೊಡ್ಡ ಸೇನಾ ಜಮಾವಣೆ, Hormuz ವಶಕ್ಕೆ ಇನ್ನಿಲ್ಲದ ಕಸರತ್ತು!

West Asia Conflict- ವದಂತಿಗಳಿಗೆ ಕಿವಿಗೊಡಬೇಡಿ, ಎಚ್ಚರಿಕೆ ಇರಲಿ, ಸವಾಲನ್ನು ಒಟ್ಟಾಗಿ ಎದುರಿಸೋಣ: ಪ್ರಧಾನಿ ಮೋದಿ-Video

ಟ್ರಂಪ್ ಎಚ್ಚರಿಕೆಗೆ ಬಗ್ಗದ ಇರಾನ್: ಸೌದಿ ವಾಯುನೆಲೆ ಮೇಲೆ ಮುಂದುವರೆದ ಕ್ಷಿಪಣಿ ದಾಳಿ; ಅಮೆರಿಕಾದ 15 ಸೈನಿಕರಿಗೆ ಗಾಯ, ಐವರ ಸ್ಥಿತಿ ಗಂಭೀರ

'ನಾನು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತೇನೆ, ನನ್ನ ಲಕ್ಷುರಿ ಜೀವನ ಬಿಟ್ಟು, ನೋವುಗಳನ್ನು ಸಹಿಸಿಕೊಂಡು ನಿಮ್ಮ ಋಣ ತೀರಿಸಲು ಬಂದಿದ್ದೇನೆ, ಒಂದು ಬಾರಿ ಅವಕಾಶ ನೀಡಿ': ಟಿವಿಕೆ ವಿಜಯ್ -Video

'ನಾವು ಓದುವಾಗ ಹಿಂದಿ ಭಾಷೆ ಕಡ್ಡಾಯ ಇರಲಿಲ್ಲ, ಪರೀಕ್ಷೆಗೆ ಅದು ಕಡ್ಡಾಯ ಆಗಬಾರದು': ಸಿಎಂ ಸಿದ್ದರಾಮಯ್ಯ

SCROLL FOR NEXT