ಕ್ರಿಕೆಟ್

'ನಿರಾಸೆಗೊಳಿಸಿದ್ದಕ್ಕೆ ಕ್ಷಮಿಸಿ': ಒಂದು ಬಾರಿಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದಿಲ್ಲ ಎಂದ ಅಭಿಮಾನಿಗೆ RCB ಮಾಜಿ ಆಟಗಾರ ತಿರುಗೇಟು!

ಐಪಿಎಲ್‌ನಲ್ಲಿ ಪಾರ್ಥಿವ್, ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಈಗ ಸ್ಥಗಿತಗೊಂಡಿರುವ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಡೆಕ್ಕನ್ ಚಾರ್ಜರ್ಸ್ ಸೇರಿದಂತೆ ಹಲವಾರು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದಾರೆ.

ತಮ್ಮ ಐಪಿಎಲ್ ದಾಖಲೆ ಬಗ್ಗೆ ತಪ್ಪು ಮಾಹಿತಿಯನ್ನು ಹಂಚಿಕೊಂಡ ಅಭಿಮಾನಿಯೊಬ್ಬರಿಗೆ ಸಾಮಾಜಿಕ ಮಾಧ್ಯಮದಲ್ಲಿಯೇ ಸಾಕ್ಷಿ ಸಮೇತ ಭಾರತದ ಮಾಜಿ ವಿಕೆಟ್ ಕೀಪರ್-ಬ್ಯಾಟರ್ ಪಾರ್ಥಿವ್ ಪಟೇಲ್ ತಿರುಗೇಟು ನೀಡಿದ್ದಾರೆ. 2003ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಾರ್ಥಿವ್, ಭಾರತದ ಪರ 25 ಟೆಸ್ಟ್, 38 ಏಕದಿನ ಮತ್ತು ಎರಡು ಟಿ20ಐಗಳಲ್ಲಿ ಆಡಿದ್ದಾರೆ. ಎಲ್ಲ ಸ್ವರೂಪಗಳಲ್ಲಿ 1,706 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿ, ಅವರು 139 ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದು, 2,848 ರನ್ ಗಳಿಸಿದ್ದಾರೆ. ಪಾರ್ಥಿವ್ ಈಗ ತಮ್ಮ ಕಾಮೆಂಟರಿ ಮತ್ತು ಕ್ರಿಕೆಟ್ ವಿಶ್ಲೇಷಣೆಗಾಗಿ ಗುರುತಿಸಲ್ಪಟ್ಟಿದ್ದರೂ, ಎಕ್ಸ್‌ನಲ್ಲಿ ಬಳಕೆದಾರರೊಬ್ಬರು 41 ವರ್ಷದ ಆಟಗಾರ, ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎಂದಿಗೂ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿಲ್ಲ ಎಂದಿದ್ದರು.

13 ಐಪಿಎಲ್ ಸೀಸನ್‌ಗಳಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆಲ್ಲದ ಆಟಗಾರ ಯಾರೆಂದು ತಿಳಿಸಿ ಎಂದು ಅಭಿಮಾನಿಗಳಿಗೆ ಕೇಳಲಾದ ಪೋಸ್ಟ್‌ವೊಂದಕ್ಕೆ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿ, ಪಾರ್ಥಿವ್ ಪಟೇಲ್ ಅವರನ್ನು ಟ್ಯಾಗ್ ಮಾಡಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಆಟಗಾರ ತಮ್ಮ ಅಂಕಿಅಂಶಗಳ ಸ್ಕ್ರೀನ್‌ಶಾಟ್‌ನೊಂದಿಗೆ ಸಾಕ್ಷಿ ಸಮೇತ ತಿರುಗೇಟು ನೀಡಿದ್ದಾರೆ. ನಿಮ್ಮನ್ನು 'ನಿರಾಶೆಗೊಳಿಸಿದ್ದಕ್ಕೆ ಕ್ಷಮಿಸಿ!!' ಎಂಬ ಶೀರ್ಷಿಕೆ ನೀಡಿದ್ದಾರೆ.

ಐಪಿಎಲ್‌ನಲ್ಲಿ ಪಾರ್ಥಿವ್, ಚೆನ್ನೈ ಸೂಪರ್ ಕಿಂಗ್ಸ್ (CSK), ಮುಂಬೈ ಇಂಡಿಯನ್ಸ್ (MI), ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ಈಗ ಸ್ಥಗಿತಗೊಂಡಿರುವ ಕೊಚ್ಚಿ ಟಸ್ಕರ್ಸ್ ಕೇರಳ ಮತ್ತು ಡೆಕ್ಕನ್ ಚಾರ್ಜರ್ಸ್ ಸೇರಿದಂತೆ ಹಲವಾರು ಫ್ರಾಂಚೈಸಿಗಳನ್ನು ಪ್ರತಿನಿಧಿಸಿದ್ದಾರೆ. ಪಾರ್ಥಿವ್ ಪಟೇಲ್ ಅವರು ಐದು ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಗಳಿಸಿದ್ದಾರೆ.

ಸದ್ಯ, ಪಾರ್ಥಿವ್ ಐಪಿಎಲ್ 2026ನೇ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಶುಭಮನ್ ಗಿಲ್ ನಾಯಕತ್ವದಲ್ಲಿ, ಜಿಟಿ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಸಾಧಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆಲುವು ಸಾಧಿಸಿದೆ.

ಗುಜರಾತ್ ಟೈಟಾನ್ಸ್ ತಂಡವು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ಮತ ಎಣಿಕೆಗೆ ಕೇಂದ್ರ ಸಿಬ್ಬಂದಿ ನಿಯೋಜನೆ: EC ಕ್ರಮ ಮಾನ್ಯ ಎಂದ ಸುಪ್ರೀಂಕೋರ್ಟ್, TMCಗೆ ಹಿನ್ನಡೆ

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು, ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್

ಅಣ್ವಸ್ತ್ರ ಒತ್ತಡಕ್ಕೆ ಮಣಿಯದ ಅಮೆರಿಕಾ: ಶಾಂತಿ ಪ್ರಸ್ತಾವನೆಗೆ ನಕಾರ; ಷರತ್ತುಗಳು ಅತಿಯಾಯ್ತು-ಸಮಯ ವ್ಯರ್ಥ ಮಾಡುತ್ತಿದ್ದಾರೆ; ಇರಾನ್ ವಿರುದ್ಧ ಟ್ರಂಪ್ ತೀವ್ರ ಕಿಡಿ

ಕದನ ವಿರಾಮ ನಡುವಲ್ಲೂ ಲೆಬನಾನ್ ಮೇಲೆ ಇಸ್ರೇಲ್ ದಾಳಿ: 10 ಮಂದಿ ಸಾವು, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಬೇಸಿಗೆಯಲ್ಲಿ ಬಾಡದಿರಲಿ ಚರ್ಮ (ಕುಶಲವೇ ಕ್ಷೇಮವೇ)

SCROLL FOR NEXT