ಸನ್‌ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ 
ಕ್ರಿಕೆಟ್

ಪಂಜಾಬ್ ಕಿಂಗ್ಸ್‌ಗೆ ಸತತ ಮೂರನೇ ಸೋಲು; ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಸನ್‌ರೈಸರ್ಸ್ ಹೈದರಾಬಾದ್!

ಪಿಬಿಕೆಎಸ್ ಪರ ಕೂಪರ್ ಕೊನೋಲಿ 59 ಎಸೆತಗಳಲ್ಲಿ ಔಟಾಗದೆ 107 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ, ತಂಡವನ್ನು ಸೋಲಿನ ಸುಳಿಯಿಂದ ಪಾರುಮಾಡಲು ಸಾಧ್ಯವಾಗಲಿಲ್ಲ.

ಬುಧವಾರ ಹೈದರಾಬಾದ್‌ನಲ್ಲಿ ನಡೆದ ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ಪಂಜಾಬ್ ಕಿಂಗ್ಸ್ (PBKS) ವಿರುದ್ಧ 33 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿ ಐಪಿಎಲ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಹೆನ್ರಿಚ್ ಕ್ಲಾಸೆನ್ (69) ಮತ್ತು ಇಶಾನ್ ಕಿಶನ್ (55) ಅವರ ಆಕರ್ಷಕ ಬ್ಯಾಟಿಂಗ್ ಪ್ರದರ್ಶನದಿಂದ ಎಸ್‌ಆರ್‌ಎಚ್ ತಂಡವು ಅಧಿಕ ರನ್ ಕಲೆಹಾಕಿತು. ಪಂಜಾಬ್ ಕಿಂಗ್ಸ್‌ ತಂಡವು ತನ್ನ ಕಳಪೆ ಫೀಲ್ಡಿಂಗ್‌ಗೆ ಭಾರಿ ಬೆಲೆ ತೆರಬೇಕಾಯಿತು. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಎಸ್‌ಆರ್‌ಎಚ್‌ಗೆ ಈ ಜೋಡಿ 4 ವಿಕೆಟ್‌ಗೆ 235 ರನ್‌ಗಳ ಸವಾಲಿನ ಮೊತ್ತವನ್ನು ಗಳಿಸುವಲ್ಲಿ ಸಹಾಯ ಮಾಡಿತು. ಇದಕ್ಕುತ್ತರವಾಗಿ, ಪಂಜಾಬ್ ಕಿಂಗ್ಸ್ 7 ವಿಕೆಟ್‌ ನಷ್ಟಕ್ಕೆ ಕೇವಲ 202 ರನ್‌ಗಳಿಸಲಷ್ಟೇ ಸೀಮಿತಗೊಂಡು ಸತತ ಮೂರನೇ ಸೋಲು ಕಂಡಿತು. ಇದರ ಪರಿಣಾಮವಾಗಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಪಿಬಿಕೆಎಸ್ ಪರ ಕೂಪರ್ ಕೊನೋಲಿ 59 ಎಸೆತಗಳಲ್ಲಿ ಔಟಾಗದೆ 107 ರನ್ ಗಳಿಸಿ ಏಕಾಂಗಿ ಹೋರಾಟ ನಡೆಸಿದರೂ, ತಂಡವನ್ನು ಸೋಲಿನ ಸುಳಿಯಿಂದ ಪಾರುಮಾಡಲು ಸಾಧ್ಯವಾಗಲಿಲ್ಲ. ಇನ್ನೊಂದು ತುದಿಯಿಂದ ಯಾವೊಬ್ಬ ಬ್ಯಾಟರ್ ಅವರಿಗೆ ಬೆಂಬಲ ನೀಡಲಿಲ್ಲ.

ಎಸ್‌ಆರ್‌ಎಚ್ ಪರ, ಪ್ಯಾಟ್ ಕಮ್ಮಿನ್ಸ್ (2/34) ಮತ್ತು ಶಿವಾಂಗ್ ಕುಮಾರ್ (2/45) ಪ್ರಮುಖ ವಿಕೆಟ್ ಪಡೆದ ಬೌಲರ್‌ಗಳಾಗಿದ್ದರು.

ಇದಕ್ಕೂ ಮೊದಲು 9 ರನ್ ಗಳಿಸಿದ್ದಾಗ ಕ್ಯಾಚ್ ಕೈಬಿಟ್ಟಿದ್ದರಿಂದ ಜೀವದಾನ ಪಡೆದ ಕ್ಲಾಸೆನ್ 43 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಮತ್ತೊಂದೆಡೆ ಎರಡು ಬಾರಿ ಕ್ಯಾಚ್ ಕೈಬಿಟ್ಟಿದ್ದರ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಕಿಶನ್, 32 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಒಳಗೊಂಡಂತೆ 55 ರನ್ ಗಳಿಸಿದರು.

ಎಸ್ಆರ್‌ಎಚ್ ಸದ್ಯ ಆಡಿರುವ 11 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿದೆ. ಈ ಸೋಲಿನಿಂದಾಗಿ ಪಂಜಾಬ್ ಕಿಂಗ್ಸ್ ಆಡಿರುವ 10 ಪಂದ್ಯಗಳಲ್ಲಿ ಆರರಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ಪಂದ್ಯಗಳನ್ನು ಆಡಿದ್ದು, ಆರು ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ನಾಲ್ಕನೇ ಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್, ಐದನೇ ಸ್ಥಾನದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಆರನೇ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸ್ಥಾನ ಪಡೆದಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!