ಕೆಕೆಆರ್ ಆಟಗಾರರ ಸಂಭ್ರಮ 
ಕ್ರಿಕೆಟ್

IPL 2026: ಫಿನ್ ಅಲೆನ್ ಶತಕದ ಅಬ್ಬರ, ಡೆಲ್ಲಿ ವಿರುದ್ಧ KKR ಗೆ 8 ವಿಕೆಟ್ ಗಳ ಭರ್ಜರಿ ಜಯ!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 142 ರನ್ ಗಳಿಸಿತು.

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತವರಿನಲ್ಲಿಯೇ ಹೀನಾಯ ಸೋಲು ಕಂಡಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ ನ 51ನೇ ಪಂದ್ಯದಲ್ಲಿ ಫಿನ್ ಅಲೆನ್ ಅವರ ಶತಕದ ಅಬ್ಬರದಿಂದ KKR 8 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 142 ರನ್ ಗಳಿಸಿತು.

ಆರಂಭಿಕ ಆಟಗಾರರಾದ ಪಥುಮ್ ನಿಶಾಂಕ ಭರ್ಜರಿ ಅರ್ಧಶತಕ ಸಿಡಿಸಿದರೆ, ಕೆಎಲ್ ರಾಹುಲ್ ಕೇವಲ 23 ರನ್ ಗಳಿಗೆ ಔಟಾಗುವ ಮೂಲಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದರು. ಬಳಿಕ ನಿತಿಶ್ ರಾಣಾ 8, ಸಮೀರ್ ರಿಜ್ವಿ 3, ತ್ರಿಸ್ಟಾನ್ ಸ್ಟಾಬಸ್ 2, ಅಕ್ಸರ್ ಪಟೇಲ್ 11 ರನ್ ಗಳಿಗೆ ಔಟಾದರು.

ಬಳಿಕ ಅಶುತೋಷ್ ಶರ್ಮಾ 39, ವಿಪ್ರಜ್ ನಿಗಮ್ 3 ರನ್ ಗಳಿಸುವುದರೊಂದಿಗೆ ದೆಹಲಿ ಕ್ಯಾಪಿಟಲ್ಸ್ ಕೇವಲ 142 ರನ್ ಗಳಿಸಲಷ್ಟೇ ಶಕ್ತವಾಯಿತು.

ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ ಅಂಕುಲ್ ರಾಯ್ 2, ಕಾರ್ತಿಕ್ ತ್ಯಾಗಿ 2 ವಿಕೆಟ್ ಪಡೆದರೆ, ವೈಭವ್ ಅರೋರಾ, ಸುನೀಲ್ ನರೈನ್ ಹಾಗೂ ಕ್ಯಾಮರೂನ್ ಗ್ರೀನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 143 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಕೆಕೆಆರ್ ಪರ ನಾಯಕ ಅಜಿಂಕ್ಯಾ ರಹಾನೆ 13 ರನ್ ಗಳಿಸಿ ಬೇಗನೆ ಔಟಾದರು. ಆದರೆ ಫಿನ್ ಅಲ್ಲೆನ್ ಕೇವಲ 47 ಎಸೆತಗಳಲ್ಲಿ 10 ಸಿಕ್ಸರ್ , 5 ಬೌಂಡರಿಗಳೊಂದಿಗೆ ಭರ್ಜರಿ ಶತಕ ಬಾರಿಸಿದರು.

ಬಳಿಕ ಕ್ಯಾಮರೂನ್ ಗ್ರೀನ್ 33 ರನ್ ಗಳಿಸುವುದರೊಂದಿಗೆ 14.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿದ ಕೆಕೆಆರ್ ಗೆಲುವಿನ ನಗೆ ಬೀರಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ವಿಜಯ್ ಸಿಎಂ ಹಾದಿಗೆ 118 ವಿಘ್ನ: TVK ಗೆ ಬೆಂಬಲ ಇಲ್ಲ- ಮುಸ್ಲೀಂ ಲೀಗ್ ಅಧಿಕೃತ ಘೋಷಣೆ; ಮತ್ತೆ ಮ್ಯಾಜಿಕ್ ನಂಬರ್ ಕೊರತೆ!

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರ್ಣ: ಅಭಿಮಾನೋತ್ಸವ ಸಮಾರಂಭದಲ್ಲಿ ಅಮಿತ್ ಶಾ ಭಾಗಿ ಸಾಧ್ಯತೆ!

SCROLL FOR NEXT