ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 
ಕ್ರಿಕೆಟ್

IPL 2026, RCB vs MI: MS Dhoni ದಾಖಲೆ ಸರಿಗಟ್ಟಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ ಜೋಡಿ

ಈ ಹೈವೋಲ್ಟೇಜ್ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ರನ್ ಮೆಷಿನ್ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿ ಅವರ ಅತಿದೊಡ್ಡ ದಾಖಲೆ ಸರಿಗಟ್ಟಿದ್ದಾರೆ.

ರಾಯ್ಪುರ: ಐಪಿಎಲ್ ಟೂರ್ನಿಯ ಇಂದಿನ 2ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡ ಮುಖಾಮುಖಿಯಾಗಿದೆ.

ಈ ಹೈವೋಲ್ಟೇಜ್ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಮತ್ತು ರನ್ ಮೆಷಿನ್ ವಿರಾಟ್ ಕೊಹ್ಲಿ ಮಾಜಿ ನಾಯಕ ಎಂಎಸ್ ಧೋನಿ ಅವರ ಅತಿದೊಡ್ಡ ದಾಖಲೆ ಸರಿಗಟ್ಟಿದ್ದಾರೆ.

ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ರೋ-ಕೋ ಜೋಡಿ ಈ ಸಾಧನೆ ಮಾಡಿದ್ದು, ಇದು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ 278ನೇ ಐಪಿಎಲ್ ಪಂದ್ಯವಾಗಿದೆ.

ಈ ಮೂಲಕ ಅವರು ಎಂಎಸ್ ಧೋನಿ ಅವರ ಅತಿ ಹೆಚ್ಚು ಐಪಿಎಲ್ ಪಂದ್ಯಗಳನ್ನು ಆಡಿದ ದಾಖಲೆಯನ್ನು ಈ ಜೋಡಿ ಏಕಕಾಲದಲ್ಲಿ ಸರಿಗಟ್ಟಿದ್ದಾರೆ.

ಮತ್ತೊಂದು ದಾಖಲೆ ಸನಿಹದಲ್ಲಿ ಕೊಹ್ಲಿ

ಅಂತೆಯೇ ಆರ್ ಸಿಬಿಯ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ದಾಖಲೆಯತ್ತ ದಾಪುಗಾಲಿರಿಸಿದ್ದು ಐತಿಹಾಸಿಕ ದಾಖಲೆ ಮುರಿಯಲು ಕೆಲವೇ ರನ್ ಗಳ ಸನಿಹದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಅವರು ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 1,000 ರನ್ ಪೂರೈಸಿದ ಮೊದಲ ಆಟಗಾರನಾಗಲು ಕೇವಲ 28 ರನ್‌ಗಳ ಅವಶ್ಯಕತೆಯಿದೆ.

ಅಂದಹಾಗೆ 34 ಪಂದ್ಯಗಳಲ್ಲಿ ಕೊಹ್ಲಿ, ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ವಿರುದ್ಧ 32.4 ಸರಾಸರಿಯಲ್ಲಿ 972 ರನ್ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್