ಕೀರನ್ ಪೊಲಾರ್ಡ್ © BCCI/IPL
ಕ್ರಿಕೆಟ್

PBKS ವಿರುದ್ಧ ಗೆದ್ದು ಬೀಗಿದ MI: ಮುಂಬೈ ಇಂಡಿಯನ್ಸ್ ಕೋಚ್ ಕೀರನ್ ಪೊಲಾರ್ಡ್‌ಗೆ BCCI ದಂಡ!

ಪೊಲಾರ್ಡ್ ವಿರುದ್ಧ ಆಟಗಾರರು ಮತ್ತು ತಂಡದ ಅಧಿಕಾರಿಗಳಿಗೆ ಸಂಬಂಧಿಸಿದ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3ರ ಅಡಿಯಲ್ಲಿ ಆರೋಪ ಹೊರಿಸಲಾಯಿತು.

ಗುರುವಾರ ನಡೆದ ಪಂಜಾಬ್ ಕಿಂಗ್ಸ್ (PBKS) ವಿರುದ್ಧದ ಪಂದ್ಯದ ವೇಳೆ ಮುಂಬೈ ಇಂಡಿಯನ್ಸ್ (MI) ಬ್ಯಾಟಿಂಗ್ ಕೋಚ್ ಕೀರನ್ ಪೊಲಾರ್ಡ್ ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆ ಮಾಡಿದ್ದು, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಡಳಿತ ಮಂಡಳಿ ದಂಡ ವಿಧಿಸಿದೆ. ಪಂದ್ಯದ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ನಂತರ ವೆಸ್ಟ್ ಇಂಡೀಸ್‌ನ ಮಾಜಿ ಆಲ್‌ರೌಂಡರ್‌ಗೆ ಅವರ ಪಂದ್ಯ ಶುಲ್ಕದ ಶೇ 15 ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಲಾಯಿತು. ಮುಂಬೈ ಪಂದ್ಯವನ್ನು ಗೆದ್ದು, ಅಭಿಯಾನದಲ್ಲಿ ತಮ್ಮ 4ನೇ ಜಯವನ್ನು ದಾಖಲಿಸಿದರೂ, ಕೋಚ್ ಪೊಲಾರ್ಡ್ ಅವರ ನಡವಳಿಕೆಯು ಪಂದ್ಯದ ರೆಫರಿಗೆ ಇಷ್ಟವಾಗಲಿಲ್ಲ.

ಎರಡನೇ ಇನಿಂಗ್ಸ್‌ನ 19ನೇ ಓವರ್‌ನಲ್ಲಿ ಈ ಉಲ್ಲಂಘನೆ ಸಂಭವಿಸಿದೆ. ಐಪಿಎಲ್ ಹೊರಡಿಸಿದ ಪ್ರಕಟಣೆ ಪ್ರಕಾರ, ಪೊಲಾರ್ಡ್ ನಾಲ್ಕನೇ ಅಂಪೈರ್ ಅನ್ನು ಗುರಿಯಾಗಿಸಿಕೊಂಡು ಅಶ್ಲೀಲ ಪದಗಳನ್ನು ಬಳಸಿದ ಆರೋಪದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ.

ಪೊಲಾರ್ಡ್ ವಿರುದ್ಧ ಆಟಗಾರರು ಮತ್ತು ತಂಡದ ಅಧಿಕಾರಿಗಳಿಗೆ ಸಂಬಂಧಿಸಿದ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3ರ ಅಡಿಯಲ್ಲಿ ಆರೋಪ ಹೊರಿಸಲಾಯಿತು. ಇದು ಪಂದ್ಯದ ಸಮಯದಲ್ಲಿ 'ಅಶ್ಲೀಲ ಪದ ಬಳಕೆ'ಯನ್ನು ಒಳಗೊಂಡಿದೆ.

ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, 'ಮುಂಬೈ ಇಂಡಿಯನ್ಸ್‌ನ ಬ್ಯಾಟಿಂಗ್ ಕೋಚ್ ಕೀರನ್ ಪೊಲಾರ್ಡ್ ಅವರಿಗೆ ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ಪಂದ್ಯ ಶುಲ್ಕದ ಶೇ 15 ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ' ಎಂದಿದೆ.

'ಪಂದ್ಯದ ಸಮಯದಲ್ಲಿ ಅಶ್ಲೀಲ ಪದ ಬಳಕೆಯನ್ನು ಉಲ್ಲೇಖಿಸುವ ಐಪಿಎಲ್ ನೀತಿ ಸಂಹಿತೆಯ 2.3ನೇ ವಿಧಿಯನ್ನು ಪೊಲಾರ್ಡ್ ಉಲ್ಲಂಘಿಸಿದ್ದಾರೆ ಎಂದು ಕಂಡುಬಂದಿದೆ. ಪೊಲಾರ್ಡ್ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಮತ್ತು ಪಂದ್ಯದ ರೆಫರಿ ಪಂಕಜ್ ಧರ್ಮಣಿ ವಿಧಿಸಿದ ಶಿಕ್ಷೆಯನ್ನು ಒಪ್ಪಿಕೊಂಡಿದ್ದಾರೆ. ಎರಡನೇ ಇನಿಂಗ್ಸ್‌ನ 19ನೇ ಓವರ್‌ನಲ್ಲಿ ಪೊಲಾರ್ಡ್ ನಾಲ್ಕನೇ ಅಂಪೈರ್‌ಗೆ ನಿಂದನೀಯ ಭಾಷೆ ಬಳಸಿದ್ದಾರೆ' ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೋ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!