ಚೆನ್ನೈ ತಂಡಕ್ಕೆ ತವರಿನಲ್ಲೇ ಸೋಲು 
ಕ್ರಿಕೆಟ್

IPL 2026: SRH ಗೆಲುವಿನ ದಡ ಸೇರಿಸಿದ Ishan Kishan; ತವರಿನಲ್ಲೇ CSKಗೆ ಮುಖಭಂಗ; ಪ್ಲೇಆಫ್ ನಿಂದ ಬಹುತೇಕ ಔಟ್!

ಚೆನ್ನೈ ನೀಡಿದ್ದ 181 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 19 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿ 5 ವಿಕೆಟ್ ಅಂತರದ ಗೆಲುವು ಸಾಧಿಸಿತು.

ಚೆನ್ನೈ: ಐಪಿಎಲ್ ಟೂರ್ನಿಯ ಇಂದಿನ ಪ್ರಮುಖ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಸೋಲುಕಂಡಿದ್ದು, ಪ್ಲೇಆಫ್ ರೇಸ್ ನಿಂದ ಬಹುತೇಕ ಹೊರಬಿದ್ದಿದೆ.

ಇಂದು ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ನೀಡಿದ್ದ 181 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡ 19 ಓವರ್ ನಲ್ಲೇ 5 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿ 5 ವಿಕೆಟ್ ಅಂತರದ ಗೆಲುವು ಸಾಧಿಸಿತು.

181 ರನ್ ಗಳ ಸವಾಲಿನ ಗುರಿ ಬೆನ್ನು ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ಇಶಾನ್ ಕಿಶನ್ (70) ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ಗೆಲುವು ಸಾಧಿಸಿತು.

ಹೈದರಾಬಾದ್ ಪರ ಅಭಿಷೇಕ್ ಶರ್ಮಾ 26, ಟ್ರಾವಿಸ್ ಹೆಡ್ 6, ಹೆನ್ರಿಚ್ ಕ್ಲಾಸನ್ 47, ನಿತೀಶ್ ಕುಮಾರ್ ರೆಡ್ಡಿ 11, ಸಲೀಲ್ ಅರೋರಾ ಅಜೇಯ 10 ಮತ್ತು ಸ್ಮರಣ್ ರವಿಚಂದ್ರನ್ ಅಜೇಯ 5 ರನ್ ಗಳಿಸಿದರು.

ಚೆನ್ನೈ ಸವಾಲಿನ ಮೊತ್ತ

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿತು. ಚೆನ್ನೈ ಪರ ಸಂಜು ಸ್ಯಾಮ್ಸನ್ 27, ರುತುರಾಡ್ ಗಾಯಕ್ವಾಡ್ 15, ಉರ್ವಿ ಪಟೇಲ್ 13, ಕಾರ್ತಿಕ್ ಶರ್ಮಾ 32, ಡಿವಾಲ್ಡ್ ಬ್ರೇವಿಸ್ 44, ಶಿವಂ ದುಬೆ 26, ಪ್ರಶಾಂತ್ ವೀರ್ 11 ಮತ್ತು ಅಕೀಲ್ ಹೊಸೇನ್ ಅಜೇಯ 3 ರನ್ ಗಳಿಸಿದರು.

ತವರಿನಲ್ಲೇ CSKಗೆ ಮುಖಭಂಗ, ಪ್ಲೇಆಫ್ ನಿಂದ ಬಹುತೇಕ ಔಟ್!

ಇನ್ನು ಇಂದಿನ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತಿತ್ತು. ಆದರೆ ಇಂದಿನ ಪಂದ್ಯದಲ್ಲೂ ಚೆನ್ನೈ ತಂಡ ಸೋತಿದೆ. ಹೀಗಾಗಿ ರುತುರಾಜ್ ಗಾಯಕ್ವಾಡ್ ಪಡೆ ಪ್ಲೇಆಫ್ ರೇಸ್ ನಿಂದ ಬಹುತೇಕ ಹೊರಬಿದ್ದಿದೆ. ಚೆನ್ನೈ ತಂಡ ಪ್ರಸ್ತುತ 13 ಪಂದ್ಯಗಳನ್ನಾಡಿದ್ದು 6ರಲ್ಲಿ ಗೆಲುವು, 7 ಪಂದ್ಯಗಳಲ್ಲಿ ಸೋತಿದೆ. ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಚೆನ್ನೈಗೆ ಇನ್ನೊಂದು ಲೀಗ್ ಪಂದ್ಯ ಮಾತ್ರ ಬಾಕಿ ಇದ್ದು ಆ ಪಂದ್ಯ ಗೆದ್ದರೂ ಪ್ಲೇಆಫ್ ಗೇರುವುದು ಸಾಧ್ಯವಿಲ್ಲ.

ಹೈದರಾಬಾದ್, ಗುಜರಾತ್ ಪ್ಲೇಆಫ್ ಗೆ

ಮತ್ತೊಂದೆಡೆ ಇಂದಿನ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ಲೇಆಫ್ ಹಂತಕ್ಕೇರಿದೆ. ಹೈದರಾಬಾದ್ ಮಾತ್ರವಲ್ಲದೇ ಗುಜರಾತ್ ಟೈಟನ್ಸ್ ಕೂಡ ಪ್ಲೇ ಆಫ್ ಗೇರಿದೆ. ಹೈದರಾಬಾದ್ ಮತ್ತು ಗುಜರಾತ್ ಎರಡೂ ತಂಡಗಳು ತಲಾ 13 ಪಂದ್ಯಗಳಲ್ಲಿ ತಲಾ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಅಂತೆಯೇ ತಲಾ 5 ಪಂದ್ಯಗಳಲ್ಲಿ ಸೋತು ಅಂಕ ಪಟ್ಟಿಯಲ್ಲಿ ತಲಾ 16 ಅಂಕಗಳೊಂದಿಗೆ ಪ್ಲೇಆಫ್ ಗೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!