ಧರ್ಮಶಾಲಾ: ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಬೇರಿ ಭಾರಿಸಿ ಮುಖ್ಯಮಂತ್ರಿಯಾದ ವಿಜಯ್ ಫೀವರ್, ಐಪಿಎಲ್ ಗೂ ತಲುಪಿದೆ.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ 2026 ಪಂದ್ಯದ ವೇಳೆ ವೆಂಕಟೇಶ್ ಅಯ್ಯರ್, ಫಿಫ್ಟಿ ಗಳಿಸಿದ ನಂತರ ವಿಶೇಷ ರೀತಿಯಲ್ಲಿ ಸೆಲೆಬ್ರೇಶನ್ ಮಾಡಿದ್ದು, ತಮಿಳುನಾಡು ಮುಖ್ಯಮಂತ್ರಿ ಹಾಗೂ ಸ್ಟಾರ್ ನಟ ವಿಜಯ್ ಗೆ ಗೌರವ ಸಲ್ಲಿಸಿದ್ದಾರೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಗಾಯಗೊಂಡ ರಜತ್ ಪಾಟಿದಾರ್ ಬದಲಿಗೆ 4ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದ ವೆಂಕಟೇಶ್, 40 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಾಯದಿಂದ ಅಜೇಯ 73 ರನ್ ಗಳಿಸಿದರು.
ಪಂಜಾಬ್ ಕಿಂಗ್ಸ್ ಬೌಲರ್‌ಗಳ ಮೇಲೆ ಪ್ರಾಬಲ್ಯ ಸಾಧಿಸುವ ಮೂಲಕ ಅವರು ಅದ್ಭುತ ಫಾರ್ಮ್‌ನಲ್ಲಿ ಕಾಣಿಸಿಕೊಂಡರು. ತಮ್ಮ ತಂಡದ ಸ್ಕೋರ್ ಅನ್ನು 220 ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅರ್ಧಶತಕದ ನಂತರ ಮೆರ್ಸಲ್ ಚಿತ್ರದಲ್ಲಿ ವಿಜಯ್ ಅವರ ರೀತಿ ವೆಂಕಟೇಶ್ ಎರಡೂ ಕೈಗಳನ್ನು ಮೇಲಕ್ಕೆತ್ತಿ ಅಡ್ಡ ಹೊಡೆದರು.
ಈ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವೆಂಕಟೇಶ್ ಅಯ್ಯರ್ ಅವರ ಸೆಲೆಬ್ರೇಶನ್ ವಿಜಯ್ ಅಭಿಮಾನಿ ಎಂಬುದನ್ನು ಸೂಚಿಸುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಆಗುತ್ತಿವೆ.