ಕೊಹ್ಲಿ, ಗಿಲ್, ಶ್ರೇಯಸ್  
ಕ್ರಿಕೆಟ್

IPL 2026 Playoffs Scenarios: ಅಗ್ರಸ್ಥಾನದಲ್ಲಿ ಆರ್ ಸಿಬಿ, 4ನೇ ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ!

ಇನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಿಂದ 18 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಗುಜರಾತ್ ಟೈಟಾನ್ಸ್ 13 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್‌) ರೋಚಕತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಮವಾರ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಸೋಲಿಸಿದ ಸನ್ ರೈಸರ್ಸ್ ಹೈದರಾಬಾದ್ ಪ್ಲೇಆಫ್ ಗೆ ಲಗ್ಗೆ ಇಟ್ಟಿತು.

ಈ ಗೆಲುವಿನೊಂದಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡ 13 ಪಂದ್ಯಗಳಿಂದ 16 ಪಾಯಿಂಟ್ ಪಡೆದಿದ್ದು, ಪ್ಲೇ ಆಫ್ ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿತು. ಇನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಿಂದ 18 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಗುಜರಾತ್ ಟೈಟಾನ್ಸ್ 13 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಈ ಮೂರು ತಂಡಗಳು ಪ್ಲೇ ಆಫ್ ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿದ್ದು, ಉಳಿದ ನಂಬರ್ 4 ಸ್ಥಾನಕ್ಕಾಗಿ ಐದು ತಂಡಗಳ ನಡುವೆ ತೀವ್ರ ಪೈಪೋಟಿ ಎದುರಾಗಿದೆ.

ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್ ರೇಸ್‌ನಿಂದ ಹೊರಗಿವೆ. ಅವರನ್ನು ಹೊರತುಪಡಿಸಿ, ಇತರ ಎಲ್ಲಾ ತಂಡಗಳು ಪ್ಲೇ ಆಫ್ ಪ್ರವೇಶಿಸಲು ಇನ್ನೂ ಅವಕಾಶವಿದೆ. ಪಂಜಾಬ್ ಕಿಂಗ್ಸ್ 13 ಪಂದ್ಯಗಳಿಂದ 13 ಅಂಕಗಳು, ಚೆನ್ನೈ ಸೂಪರ್ ಕಿಂಗ್ಸ್ 13 ಪಂದ್ಯಗಳಿಂದ 12 ಅಂಕಗಳು ಮತ್ತು ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳಿಂದ 12 ಅಂಕಗಳನ್ನು ಪಡೆದಿದ್ದು, ತಲಾ ಒಂದು ಪಂದ್ಯ ಮಾತ್ರ ಬಾಕಿ ಉಳಿದಿವೆ. ಅವರು ಆ ಪಂದ್ಯಗಳನ್ನು ಗೆದ್ದು ಇತರ ಫಲಿತಾಂಶಗಳನ್ನು ನಿರೀಕ್ಷಿಸಬೇಕು.

ರಾಜಸ್ಥಾನ ರಾಯಲ್ಸ್ 12 ಪಂದ್ಯಗಳಿಂದ 12 ಅಂಕಗಳು ಪಡೆದಿದ್ದು, ಅಗ್ರ ಮೂರು ತಂಡಗಳನ್ನು ಹೊರತುಪಡಿಸಿ 16 ಅಂಕಗಳನ್ನು ತಲುಪಬಹುದಾದ ಏಕೈಕ ತಂಡವಾಗಿದೆ. ಕೋಲ್ಕತ್ತಾ ನೈಟ್ ರೈಡರ್ಸ್ 12 ಪಂದ್ಯಗಳಿಂದ 11 ಪಾಯಿಂಟ್ ಪಡೆದಿದ್ದು, ಎರಡು ಪಂದ್ಯಗಳು ಉಳಿದಿವೆ. ಆದರೆ ಅವರು ಪಡೆಯಬಹುದಾದ ಗರಿಷ್ಠ ಅಂಕಗಳು 15 ಅಂಕ ಮಾತ್ರವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

ಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

SCROLL FOR NEXT