ವಿರಾಟ್ ಕೊಹ್ಲಿ 
ಕ್ರಿಕೆಟ್

IPL 2026: ಜಾಗತಿಕ ಕ್ರಿಕೆಟ್ ನಲ್ಲಿ ಇತಿಹಾಸ ಬರೆದ Virat Kohli, ಈ ಸಾಧನೆ ಮಾಡಿದ ಮೊದಲ ಆಟಗಾರ, ರೇಸ್ ನಲ್ಲಿ Babar Azam

ಆರ್ ಸಿಬಿಗೆ ವೆಂಕಟೇಶ್ ಅಯ್ಯರ್ ಜೊತೆಗೂಡಿ ಅರ್ಧಶತಕದ (60) ಜೊತೆಯಾಟವಾಡಿದರು. ಈ ಪಂದ್ಯದಲ್ಲಿ ಕೊಹ್ಲಿ 11 ಎಸೆತಗಳಲ್ಲಿ 15ರನ್ ಗಳಿಸಿ ಸಕಿಬ್ ಅಲ್ ಹಸನ್ ಬೌಲಿಂಗ್ ನಲ್ಲಿ ಔಟಾದರು.

ಹೈದರಾಬಾದ್: ಐಪಿಎಲ್ 2026 ಟೂರ್ನಿಯ ಇಂದಿನ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ವಿರಾಟ್ ಕೊಹ್ಲಿ ಇತಿಹಾಸ ನಿರ್ಮಿಸಿದ್ದಾರೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಹೈದರಾಬಾದ್ ನೀಡಿದ 256 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತುವಾಗ ಈ ದಾಖಲೆ ನಿರ್ಮಿಸಿದ್ದು, ಆರ್ ಸಿಬಿಗೆ ವೆಂಕಟೇಶ್ ಅಯ್ಯರ್ ಜೊತೆಗೂಡಿ ಅರ್ಧಶತಕದ (60) ಜೊತೆಯಾಟವಾಡಿದರು. ಈ ಪಂದ್ಯದಲ್ಲಿ ಕೊಹ್ಲಿ 11 ಎಸೆತಗಳಲ್ಲಿ 15ರನ್ ಗಳಿಸಿ ಸಕಿಬ್ ಅಲ್ ಹಸನ್ ಬೌಲಿಂಗ್ ನಲ್ಲಿ ಔಟಾದರು.

ಈ ಮೂಲಕ ಕೊಹ್ಲಿ ಕ್ರಿಕೆಟ್ ಜಗತ್ತಿನ ಅತ್ಯಪರೂಪದ ದಾಖಲೆಗೆ ಪಾತ್ರರಾಗಿದ್ದು, ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಬಾರಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳ ಜೊತೆಯಾಟದಲ್ಲಿ ಭಾಗಿಯಾದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಟಿ20 ವೃತ್ತ ಜೀವನದಲ್ಲಿ 211 ಬಾರಿ 50+ ಜೊತೆಯಾಟದಲ್ಲಿ ಪಾಲ್ಗೊಂಡು ಈ ಸಾಧನೆ ಮಾಡಿದ್ದಾರೆ.

ಈ ಮೂಲಕ ಇಂಗ್ಲೆಂಡ್ ಆಟಗಾರ ಅಲೆಕ್ಸ್ ಹೇಲ್ಸ್ (210 ಬಾರಿ) ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಇದೀಗ ಕೊಹ್ಲಿ ಅಗ್ರಸ್ಥಾನಿಯಾಗಿದ್ದು, ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ (200 ಬಾರಿ) 3ನೇ ಸ್ಥಾನದಲ್ಲಿದ್ದಾರೆ.

196 ಬಾರಿ ಈ ಸಾಧನೆ ಮಾಡಿರುವ ಪಾಕಿಸ್ತಾನದ ಬಾಬರ್ ಆಜಂ ಮತ್ತು 191 ಬಾರಿ ಈ ಸಾಧನೆ ಮಾಡಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಯ್ಲ್ ನಂತರದ ಸ್ಥಾನಗಳಲ್ಲಿದ್ದಾರೆ.

Batters involved in most 50-plus stands in Men’s T20s

  • 211 - Virat Kohli*

  • 210 - Alex Hales

  • 200 - David Warner

  • 196 - Babar Azam

  • 191 - Chris Gayle

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!