ಐಪಿಎಲ್ 2026 ಪಂದ್ಯದ ವೇಳೆ ಅಭಿಮಾನಿಗಳು ಚಿಯರ್‌ಲೀಡರ್‌ಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. 
ಕ್ರಿಕೆಟ್

IPL 2026: LSG vs PBKS ಪಂದ್ಯ; ಚಿಯರ್‌ಲೀಡರ್‌ಗಳೊಂದಿಗೆ ಅಭಿಮಾನಿಗಳ ಅನುಚಿತ ವರ್ತನೆ; ಕ್ರಮ ಕೈಗೊಂಡ ಪೊಲೀಸರು!

ಪಂದ್ಯದ ಸಮಯದಲ್ಲಿ ಕೆಲವು ಅಭಿಮಾನಿಗಳು ಚಿಯರ್‌ಲೀಡರ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ಶನಿವಾರ ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವನ್ನು ಸೋಲಿಸುವ ಮೂಲಕ ಪಂಜಾಬ್ ಕಿಂಗ್ಸ್ (PBKS) ತಂಡವು ಐಪಿಎಲ್ 2026ರ ಪ್ಲೇಆಫ್ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಶ್ರೇಯಸ್ ಅಯ್ಯರ್ ಅದ್ಭುತ ಶತಕ ಬಾರಿಸಿ ತಮ್ಮ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದರೆ, ಎಲ್‌ಎಸ್‌ಜಿ ತಂಡವು ಈ ಆವೃತ್ತಿಯ 10ನೇ ಸೋಲನ್ನು ಅನುಭವಿಸಿತು. ಆದಾಗ್ಯೂ, ಚಿಯರ್‌ಲೀಡರ್‌ಗಳ ಜೊತೆಗೆ ಅಭಿಮಾನಿಗಳು ಅಸಭ್ಯವಾಗಿ ವರ್ತಿಸಿರುವ ಘಟನೆ ವರದಿಯಾಗಿದೆ.

ಪಂದ್ಯದ ಸಮಯದಲ್ಲಿ ಕೆಲವು ಅಭಿಮಾನಿಗಳು ಚಿಯರ್‌ಲೀಡರ್‌ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಕಂಡುಬಂದಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದ್ದಾರೆ. ಸ್ಥಳದ ದೃಶ್ಯಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ತ್ವರಿತವಾಗಿ ಮಧ್ಯಪ್ರವೇಶಿಸಿ ಅಭಿಮಾನಿಗಳ ಗುಂಪಿನ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿ ಅಭಿಮಾನಿಗಳೊಂದಿಗೆ ಮಾತನಾಡುತ್ತಿರುವುದೂ ಕಂಡುಬಂದಿದೆ.

ಪಂದ್ಯದ ಬಗ್ಗೆ ಮಾತನಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್, ಶನಿವಾರ ರಾತ್ರಿ ನಡೆದ ಗುಂಪು ಹಂತದ ಅಂತಿಮ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಏಳು ವಿಕೆಟ್‌ಗಳ ಸೋಲು ಕಂಡಿದೆ. ನಮ್ಮ ತಂಡವು ಐಪಿಎಲ್ 2026ರ ಆವೃತ್ತಿಯಲ್ಲಿ ಸವಾಲನ್ನು ಎದುರಿಸಿದೆ ಎಂದರು.

'ಇದು ಕಠಿಣವಾಗಿದೆ. ನಾವು ಧೈರ್ಯದಿಂದ ಮುಂದುವರಿಯಬೇಕು. ನಮ್ಮ ತಲೆಯನ್ನು ಮೇಲಕ್ಕೆತ್ತಬೇಕು, ಇದು ಬಹಳಷ್ಟು ಕಲಿಯುವ ಸಮಯ, ಖಂಡಿತವಾಗಿಯೂ ನಮಗೆ ಕಠಿಣ ಆವೃತ್ತಿ ಇದಾಗಿತ್ತು ಎಂದು ಪಂತ್ ಹೇಳಿದರು.

ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು.

197 ರನ್ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಪ್ರಿಯಾಂಶ್ ಆರ್ಯ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರ ಪ್ರಭ್ಸಿಮ್ರನ್ ಸಿಂಗ್ 69 ಮತ್ತು ಶ್ರೇಯಸ್ ಅಯ್ಯರ್ ಅವರ ಆಕರ್ಷಕ ಶತಕದ ನೆರವಿನಿಂದ 3 ವಿಕೆಟ್ ನಷ್ಟಕ್ಕೆ 18 ಓವರ್‌ಗಳಲ್ಲಿಯೇ ಗೆಲುವಿನ ದಡ ಸೇರಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!