ಶುಭಮನ್ ಗಿಲ್ 
ಕ್ರಿಕೆಟ್

IPL 2026: ಗಿಲ್ ಸ್ಫೋಟಕ ಶತಕ; RR ವಿರುದ್ಧ GT ರೋಚಕ ಗೆಲುವು; ಫೈನಲ್​​ಗೆ ಎಂಟ್ರಿ

ಇಂದು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಚಂಡೀಗಢ: ಚಂಡೀಗಢದಲ್ಲಿ ಶುಕ್ರವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಕ್ವಾಲಿಫೈಯರ್ 2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT) ತಂಡ ರಾಜಸ್ಥಾನ್ ರಾಯಲ್ಸ್(RR) ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಪ್ರವೇಶಿಸಿದೆ.

ಇಂದು ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಮೊದಲ ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ ರಾಯಲ್ಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 214 ರನ್ ಗಳಿಸಿತು. ವೈಭವ್ ಸೂರ್ಯವಂಶಿ ಅವರ 96 ರನ್‌ಗಳು ತಂಡವು ಈ ಮೈಲಿಗಲ್ಲು ತಲುಪಲು ಸಹಾಯ ಮಾಡಿತು. 20 ನೇ ಓವರ್‌ನಲ್ಲಿ ರಶೀದ್ ಖಾನ್ ಬೌಲಿಂಗ್‌ನಲ್ಲಿ ನಾಲ್ಕು ಸಿಕ್ಸರ್‌ಗಳನ್ನು ಸಿಡಿಸಿದ ಡೊನೊವನ್ ಫೆರೇರಾ ಕೂಡ ಉತ್ತಮ ಪ್ರದರ್ಶನ ನೀಡಿದರು. ಫೆರೇರಾ ಕೇವಲ 11 ಎಸೆತಗಳಲ್ಲಿ 38 ರನ್ ಗಳಿಸಿದರು. ರವೀಂದ್ರ ಜಡೇಜಾ ಕೂಡ ಅಜೇಯ 45 ರನ್ ಗಳಿಸಿದರು.

ಗೆಲುವಿಗೆ 215ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್, ನಾಯಕ ಶುಭಮನ್ ಗಿಲ್(104) ಅವರ ಸ್ಫೋಟಕ ಶತಕ ಹಾಗೂ ಸಾಯಿ ಸುದರ್ಶನ್(58) ಅಬ್ಬರದ ಆಟದ ನೇರವಿನಿಂದ 18.4 ಓವರ್ ಗಳಲ್ಲಿ 219 ರನ್ ಗಳಿಸುವ ಮೂಲಕ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಗುಜರಾತ್, ಐಪಿಎಲ್ 2026ರ ಫೈನಲ್ ಪ್ರವೇಶಿಸಿದ್ದು, ಭಾನುವಾರ ಆರ್ ಸಿಬಿ ವಿರುದ್ಧ ಸೆಣಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!