ಅಮಿತಾಭ್ - ವೈಭವ್ ಸೂರ್ಯವಂಶಿ 
ಕ್ರಿಕೆಟ್

'ಈ ವಯಸ್ಸಲ್ಲಿ ನನಗೆ ಗಿಲ್ಲಿದಾಂಡು ಆಡೋಕೂ ಬರ್ತಿರಲಿಲ್ಲ': ವೈಭವ್ ಸೂರ್ಯವಂಶಿಯನ್ನು ಹಾಡಿ ಹೊಗಳಿದ ಅಮಿತಾಭ್

ಶುಕ್ರವಾರ ನಡೆದ ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಸೋತು ಟೂರ್ನಿಯಿಂದ ಹೊರಬಿದ್ದಿರಬಹುದು.

ಮುಂಬೈ: IPL 2026ರಲ್ಲಿ ಸ್ಫೋಟಕ ಬ್ಯಾಟಿಂಗ್ ನಿಂದ ಭಾರೀ ಸದ್ದು ಮಾಡಿದ ಹದಿನೈದು ವರ್ಷದ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಹಾಡಿ ಹೊಗಳಿದ್ದಾರೆ.

ಶುಕ್ರವಾರ ನಡೆದ ಕ್ವಾಲಿಫೈಯರ್-2 ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡ ಸೋತು ಟೂರ್ನಿಯಿಂದ ಹೊರಬಿದ್ದಿರಬಹುದು. ಆದರೆ, 15 ವರ್ಷದ ವೈಭವ್ ಸೂರ್ಯವಂಶಿ ಅವರ ಅದ್ಭುತ ಇನ್ನಿಂಗ್ಸ್ ಇಡೀ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಶತಕದ ಸನಿಹ ಬಂದು(96 ರನ್) ಔಟಾಗಿ, ತಂಡದ ಸೋಲಿನಿಂದ ಮೈದಾನದಲ್ಲೇ ಕಣ್ಣೀರು ಹಾಕಿದ ಈ ಬಾಲಕನ ಬೆಂಬಲಕ್ಕೆ ಈಗ ಖುದ್ದು ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಧಾವಿಸಿದ್ದಾರೆ.

ವೈಭವ್ ಸೂರ್ಯವಂಶಿ ಬಗ್ಗೆ ಎಕ್ಸ್ ನಲ್ಲಿ ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಬಿಗ್ ಬಿ, 15ನೇ ವಯಸ್ಸಿನಲ್ಲಿ ಸೂರ್ಯವಂಶಿ ಅದ್ಭುತವಾಗಿ ಆಡಿದ್ದಾನೆ. ಆ ವಯಸ್ಸಿನಲ್ಲಿ ನಮಗೆ ಗೋಲಿ ಅಥವಾ ಗಿಲ್ಲಿ ದಾಂಡು ಸಹ ಸರಿಯಾಗಿ ಆಡಲು ಬರುತ್ತಿರಲ್ಲ. ಆದರೆ ಈ ಹುಡುಗ ಇಷ್ಟು ಚಿಕ್ಕ ವಯಸ್ಸಿಗೆ ವಿಶ್ವದ ದೊಡ್ಡ ವೇದಿಕೆಯಲ್ಲಿ ಅಬ್ಬರಿಸುತ್ತಿದ್ದಾನೆ ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ನಿನ್ನೆ ರಾಜಸ್ಥಾನ ರಾಯಲ್ಸ್ ಸೋಲಿನ ನಂತರ ವೈಭವ್ ಸೂರ್ಯವಂಶಿ ಮೈದಾನದಲ್ಲಿ ತೀವ್ರ ಭಾವುಕರಾಗಿದ್ದ ದೃಶ್ಯ ಕಂಡುಬಂದಿತ್ತು. ಇದನ್ನು ಗಮನಿಸಿದ ನಟ ಅಮಿತಾಭ್ ಬಚ್ಚನ್, ತಮ್ಮ ಎಕ್ಸ್ ಖಾತೆಯಲ್ಲಿ ಹಿಂದಿಯಲ್ಲಿ ಮನದಾಳದ ಮಾತುಗಳನ್ನು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನಗಳ ವಿಧಾನಮಂಡಲ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಬಗ್ಗೆ ಮಹತ್ವದ ಚರ್ಚೆ

KPSC ಹಗರಣ: ಮೊದಲ ತಲೆದಂಡ, IAS ಜ್ಞಾನೇಂದ್ರ ಕುಮಾರ್ ಅಮಾನತು

ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ: ಬಿಜೆಪಿ ಶಾಸಕ ಸುರೇಶ್‌ಗೌಡ ಪುತ್ರಿಗೆ ಕೋರ್ಟ್ ಶಾಕ್, ಜಾಮೀನು ಅರ್ಜಿ ತಿರಸ್ಕೃತ

RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್: ಅಮಾನತು ಆದೇಶಕ್ಕೆ KSAT ತಡೆ, ಸರ್ಕಾರಕ್ಕೆ ಹಿನ್ನಡೆ

'ಲಾಲ್‌ಬಾಗ್ ಉಳಿಸಿ..': ಕೊನೆಗೂ ಹೋರಾಟಕ್ಕೆ ಮಣಿದ ಸರ್ಕಾರ; ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಸ್; BJP ಸ್ವಾಗತ; Video