ಮ್ಯಾಟ್ ಹೆನ್ರಿ ಮಾರಕ ಬೌಲಿಂಗ್, ಮೂವರು ಔಟ್ 
ಕ್ರಿಕೆಟ್

4th ODI: ಒಂದೇ ಓವರ್ ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಡಕೌಟ್, Matt Henry ಮಾರಕ ಬೌಲಿಂಗ್, ವಿಶ್ವದಾಖಲೆ!

ಶುಕ್ರವಾರ ಬೇ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಆರಂಭಿಸುತ್ತಿದ್ದಂತೆ ಹೆನ್ರಿ ಮಾರಕ ದಾಳಿ ನಡೆಸಿದರು. ಮೊದಲ ಓವರ್‌ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಹೆನ್ರಿ ಎಸೆತ..

ಮೌಂಟ್ ಮೌಂಗನುಯಿ: ಭಾರತದ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವೇಗಿ ಮ್ಯಾಟ್ ಹೆನ್ರಿ ಮಾರಕ ಬೌಲಿಂಗ್ ಮಾಡಿದ್ದು, ಒಂದೇ ಓವರ್ ನಲ್ಲಿ ಭಾರತದ ಮೂವರು ಸ್ಟಾರ್ ಬ್ಯಾಟರ್ ಗಳನ್ನು ಶೂನ್ಯಕ್ಕೆ ಔಟ್ ಮಾಡಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ 334 ರನ್ ಬೃಹತ್ ಮೊತ್ತ ಬೆನ್ನು ಹತ್ತಿರುವ ಭಾರತ ತಂಡ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ.

ಭಾರತಕ್ಕೆ ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಆರಂಭದಲ್ಲೇ ಆಘಾತ ನೀಡಿದ್ದು, ಒಂದೇ ಓವರ್‌ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಭಾರತ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ಮ್ಯಾಟ್ ಹೆನ್ರಿ ಮಾರಕ ಬೌಲಿಂಗ್, ಒಂದೇ ಓವರ್ ನಲ್ಲಿ 3 ಡಕೌಟ್

ಶುಕ್ರವಾರ ಬೇ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ಆರಂಭಿಸುತ್ತಿದ್ದಂತೆ ಹೆನ್ರಿ ಮಾರಕ ದಾಳಿ ನಡೆಸಿದರು. ಮೊದಲ ಓವರ್‌ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಹೆನ್ರಿ ಎಸೆತವನ್ನು ರಕ್ಷಣಾತ್ಮಕವಾಗಿ ಆಡಲು ಪ್ರಯತ್ನಿಸಿದ ರೋಹಿತ್ ಬ್ಯಾಟ್‌ಗೆ ಚೆಂಡು ತಾಗಿ ಸ್ಲಿಪ್‌ನಲ್ಲಿದ್ದ ಫಿನ್ ಅಲೆನ್ ಕೈ ಸೇರಿತು. ಈ ಮೂಲಕ ರೋಹಿತ್ ಗೋಲ್ಡನ್ ಡಕ್‌ಗೆ ಬಲಿಯಾದರು.

ನಂತರ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ ಕೂಡ ಹೆನ್ರಿ ಬೌಲಿಂಗ್ ಎದುರು ಪರದಾಡಿದರು. ಆರಂಭದಲ್ಲಿ ಕೆಲವು ಎಸೆತಗಳನ್ನು ಎದುರಿಸಿದರೂ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಸಾಧ್ಯವಾಗಲಿಲ್ಲ. ಹೆನ್ರಿ ಎಸೆದ ಇನ್ ಸೈಡ್ ಸ್ವಿಂಗ್ ಎಸೆತಕ್ಕೆ ಕೊಹ್ಲಿ ಸರಿಯಾಗಿ ಬ್ಯಾಟ್ ಬೀಸಲು ಸಾಧ್ಯವಾಗಲಿಲ್ಲ. ಚೆಂಡು ನೇರವಾಗಿ ವಿಕೆಟ್‌ಗೆ ಅಪ್ಪಳಿಸಿತು. ಕೇವಲ ನಾಲ್ಕು ಎಸೆತಗಳನ್ನು ಎದುರಿಸಿದ ಕೊಹ್ಲಿ ಶೂನ್ಯಕ್ಕೆ ಔಟಾದರು.

ಶ್ರೇಯಸ್ ಅಯ್ಯರ್ ಕೂಡ ಗೋಲ್ಡನ್ ಡಕ್!

ಕೊಹ್ಲಿ ವಿಕೆಟ್ ಪತನದ ಬೆನ್ನಲ್ಲೇ ಕ್ರೀಸ್‌ಗೆ ಬಂದ ಭಾರತದ ಹಂಗಾಮಿ ನಾಯಕ ಶ್ರೇಯಸ್ ಅಯ್ಯರ್ ಕೂಡ ಮೊದಲ ಎಸೆತದಲ್ಲೇ ಔಟಾದರು. ಹೆನ್ರಿ ಎಸೆದ ಒಳನುಗ್ಗುವ ಚೆಂಡು ಅಯ್ಯರ್ ಅವರ ಕಾಲಿಗೆ ಬಡಿಯಿತು. ನ್ಯೂಜಿಲೆಂಡ್ ಆಟಗಾರರು ಎಲ್‌ಬಿಡಬ್ಲ್ಯುಗೆ ಮನವಿ ಮಾಡಿದರೂ ಅಂಪೈರ್ ಆರಂಭದಲ್ಲಿ ನಾಟೌಟ್ ತೀರ್ಪು ನೀಡಿದರು.

ಆದರೆ ನ್ಯೂಜಿಲೆಂಡ್ ತಂಡ ಡಿಆರ್‌ಎಸ್ ಮೊರೆ ಹೋಯಿತು. ಅಲ್ಟ್ರಾಎಡ್ಜ್‌ನಲ್ಲಿ ಬ್ಯಾಟ್‌ಗೆ ಚೆಂಡು ತಗುಲಿಲ್ಲ ಎಂಬುದು ಖಚಿತವಾಯಿತು. ಬಳಿಕ ಬಾಲ್ ಟ್ರ್ಯಾಕಿಂಗ್‌ನಲ್ಲಿ ಚೆಂಡು ನೇರವಾಗಿ ಮಿಡಲ್ ಸ್ಟಂಪ್‌ಗೆ ಬಡಿಯುವುದು ಸ್ಪಷ್ಟವಾಯಿತು. ಹೀಗಾಗಿ ಅಯ್ಯರ್ ಔಟ್ ಎಂದು ಮೂರನೇ ಅಂಪೈರ್ ತೀರ್ಪು ನೀಡಿದರು.

ಒಂದೇ ಓವರ್‌ನಲ್ಲಿ 3 ವಿಕೆಟ್, ಮೇಡನ್ ದಾಖಲೆ!

ಈ ಮೂಲಕ ಮ್ಯಾಟ್ ಹೆನ್ರಿ ಮೊದಲ ಓವರ್‌ನಲ್ಲೇ ಮೂರು ವಿಕೆಟ್ ಕಬಳಿಸಿ ಭಾರತದ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ವಿಶೇಷವೆಂದರೆ ಈ ಮೂರು ವಿಕೆಟ್‌ಗಳು ಶೂನ್ಯಕ್ಕೆ ಬಿದ್ದವು. ಒಂದೇ ಓವರ್‌ನಲ್ಲಿ ಮೂರು ವಿಕೆಟ್ ಪಡೆದು ಮೇಡನ್ ಓವರ್ ಎಸೆದ ಹೆನ್ರಿ ನ್ಯೂಜಿಲೆಂಡ್ ತಂಡಕ್ಕೆ ಕನಸಿನ ಆರಂಭ ಒದಗಿಸಿದರು.

ಇದರ ಬೆನ್ನಲ್ಲೇ ಮತ್ತೊಂದು ಓವರ್‌ನಲ್ಲೂ ಹೆನ್ರಿ ಯಾವುದೇ ರನ್ ನೀಡದೆ ಭಾರತೀಯ ಬ್ಯಾಟರ್‌ಗಳನ್ನು ಕಾಡಿದರು. ಆದರೆ ಆ ಓವರ್‌ನಲ್ಲಿ ವಿಕೆಟ್ ಪಡೆಯಲು ಅವರಿಗೆ ಸಾಧ್ಯವಾಗಲಿಲ್ಲ.

334 ರನ್‌ಗಳ ಗುರಿ ಬೆನ್ನಟ್ಟಿದ್ದ ಭಾರತಕ್ಕೆ ಆರಂಭದಲ್ಲೇ ಮೂವರು ಪ್ರಮುಖ ಬ್ಯಾಟರ್‌ಗಳನ್ನು ಕಳೆದುಕೊಂಡಿರುವುದು ದೊಡ್ಡ ಹಿನ್ನಡೆಯಾಯಿತು.

ಭಾರತಕ್ಕೆ ಹೀನಾಯ ದಾಖಲೆ

ಮೊದಲ ಓವರ್‌ನಲ್ಲೇ ಯಾವುದೇ ರನ್ ಗಳಿಸದೆ ಮೂರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಭಾರತ ತಂಡ ಅಪರೂಪದ ಕೆಟ್ಟ ದಾಖಲೆಯೊಂದಕ್ಕೆ ಪಾತ್ರವಾಗಿದೆ.

2019ರ ಏಕದಿನ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತಕ್ಕೆ ಆಘಾತ ನೀಡಿದ್ದ ಮ್ಯಾಟ್ ಹೆನ್ರಿ, ಇದೀಗ ಮತ್ತೊಮ್ಮೆ ಅದೇ ರೀತಿಯ ಪ್ರದರ್ಶನ ನೀಡಿದ್ದಾರೆ. ಮೊದಲು ರೋಹಿತ್ ಶರ್ಮಾ ಅವರನ್ನು ಗೋಲ್ಡನ್ ಡಕ್‌ಗೆ ಔಟ್ ಮಾಡಿದ ಹೆನ್ರಿ, ಮೂರು ಎಸೆತಗಳ ಅಂತರದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕೂಡ ಕಬಳಿಸಿದರು.

ನಂತರ ಏಕದಿನ ತಂಡದ ನಾಯಕತ್ವದ ಚೊಚ್ಚಲ ಪಂದ್ಯವನ್ನಾಡುತ್ತಿದ್ದ ಶ್ರೇಯಸ್ ಅಯ್ಯರ್ ಕೂಡ ಹೆನ್ರಿ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದರು. ಹೀಗಾಗಿ ಮೊದಲ ಓವರ್‌ನಲ್ಲೇ ಭಾರತ ಮೂರು ವಿಕೆಟ್ ಕಳೆದುಕೊಂಡು ಶೂನ್ಯ ರನ್ ಗಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi visit to Bengaluru | ನಮ್ಮ ಮೆಟ್ರೊ ಪಿಂಕ್ ಲೈನ್ ಪ್ರಧಾನಿ ಮೋದಿ ಉದ್ಘಾಟನೆ; ನ.14ರಿಂದ ಕಾರ್ಯಾಚರಣೆ

4th ODI: ವಿಲ್ ಯಂಗ್ ಸ್ಫೋಟಕ ಶತಕ, ಭಾರತಕ್ಕೆ ಗೆಲ್ಲಲು 334 ರನ್ ಬೃಹತ್ ಗುರಿ ನೀಡಿದ ನ್ಯೂಜಿಲೆಂಡ್

ಝಾಕಿರ್ ನಾಯಕ್​ಗೆ ಮೋದಿ ಸರ್ಕಾರ ಶಾಕ್: 'ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್' ಮೇಲಿನ ನಿಷೇಧ ಮತ್ತೆ ಐದು ವರ್ಷ ವಿಸ್ತರಣೆ!

16 ವರ್ಷಗಳ ಹಿಂದೆ ವಿಚ್ಚೇದನ, ಮುರಿದು ಬಿದ್ದ 2ನೇ ಮದುವೆ, ಕೊನೆಗೂ ಒಂದಾದ ತಾರಾ ದಂಪತಿ ರಂಜಿತ್-ಪ್ರಿಯಾ ರಮಣ್!

ರಾಕ್ಷಸ ಕೃತ್ಯ; ಮಹಿಳೆಗೆ ಲೈಂಗಿಕ ಕಿರುಕುಳ, ವಿರೋಧಿಸಿದ್ದಕ್ಕೆ ರೈಲಿನಿಂದ ತಳ್ಳಿದ ಕಾಮುಕ; ಸಿಸಿಟಿವಿಯಲ್ಲಿ ಕೃತ್ಯ ಸೆರೆ! Video