ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ 
ಕ್ರಿಕೆಟ್

4th ODI: 16 ವರ್ಷಗಳ ಬಳಿಕ ಮತ್ತದೇ ಆಘಾತ, ಒಂದೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾದ ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ!

ಭಾರತಕ್ಕೆ ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಆರಂಭದಲ್ಲೇ ಆಘಾತ ನೀಡಿದ್ದು, ಒಂದೇ ಓವರ್‌ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಭಾರತ ತಂಡ..

ಮೌಂಟ್ ಮೌಂಗನುಯಿ: ಭಾರತದ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ನ ಆಧಾರ ಸ್ಥಂಭ ಎಂದೇ ಪರಿಗಣಿಸಲಾಗಿದ್ದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಡಕೌಟ್ ಆಗುವ ಮೂಲಕ 16 ವರ್ಷಗಳ ಹಳೆಯ ಹೀನಾಯ ದಾಖಲೆ ಮರುಕಳಿಸಿದೆ.

ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ 334 ರನ್ ಬೃಹತ್ ಮೊತ್ತ ಬೆನ್ನು ಹತ್ತಿರುವ ಭಾರತ ತಂಡ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ.

ನ್ಯೂಜಿಲೆಂಡ್ ತಂಡದ ವೇಗಿ ಮ್ಯಾಟ್ ಹೆನ್ರಿ ಮಾರಕ ಬೌಲಿಂಗ್ ಗೆ ಪತರುಗುಟ್ಟಿದ ಭಾರತ ತಂಡ ತಾನು ಎದುರಿಸಿದ ಮೊದಲ ಓವರ್ ನಲ್ಲೇ 3 ವಿಕೆಟ್ ಕಳೆದುಕೊಂಡಿತು.

ಭಾರತಕ್ಕೆ ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಆರಂಭದಲ್ಲೇ ಆಘಾತ ನೀಡಿದ್ದು, ಒಂದೇ ಓವರ್‌ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವ ಮೂಲಕ ಭಾರತ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.

ಮಾತ್ರವಲ್ಲದೇ ಒಂದೇ ಓವರ್ ನಲ್ಲಿ ಭಾರತದ ಮೂವರು ಸ್ಟಾರ್ ಬ್ಯಾಟರ್ ಗಳನ್ನು ಶೂನ್ಯಕ್ಕೆ ಔಟ್ ಮಾಡಿ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಶೂನ್ಯಕ್ಕೆ ಔಟಾದ ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ!

ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಭಾರಿ ನಿರಾಸೆ ಮೂಡಿಸಿದ್ದಾರೆ. ಇಬ್ಬರೂ ಒಂದೇ ಪಂದ್ಯದಲ್ಲಿ ಖಾತೆ ತೆರೆಯುವ ಮೊದಲೇ ಪೆವಿಲಿಯನ್ ಸೇರಿದ್ದಾರೆ.

ವಿಶೇಷವೆಂದರೆ, ರೋಹಿತ್ ಮತ್ತು ಕೊಹ್ಲಿ ತಮ್ಮ ಏಕದಿನ ಕ್ರಿಕೆಟ್ ವೃತ್ತಿಜೀವನದಲ್ಲಿ ಒಂದೇ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿರುವುದು ಇದು ಕೇವಲ ಎರಡನೇ ಬಾರಿ. ಇದಕ್ಕೂ ಮೊದಲು 2010ರಲ್ಲಿ ಶ್ರೀಲಂಕಾ ವಿರುದ್ಧ ದಂಬುಲ್ಲಾದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಇಬ್ಬರೂ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಬರೋಬ್ಬರಿ 16 ವರ್ಷಗಳ ಬಳಿಕ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮತ್ತೊಮ್ಮೆ ಈ ಅಪರೂಪದ ಘಟನೆ ಮರುಕಳಿಸಿದೆ.

ಮ್ಯಾಟ್ ಹೆನ್ರಿ ಮಾರಕ ದಾಳಿ: ರೋ-ಕೋ ಡಕ್ ಔಟ್!

ನ್ಯೂಜಿಲೆಂಡ್ ನೀಡಿದ್ದ 334 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭದಲ್ಲೇ ವೇಗಿ ಮ್ಯಾಟ್ ಹೆನ್ರಿ ಆಘಾತ ನೀಡಿದರು. ಇನಿಂಗ್ಸ್‌ನ ಮೊದಲ ಎಸೆತದಲ್ಲೇ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದರು.

ಹೆನ್ರಿ ಎಸೆತವನ್ನು ಎದುರಿಸಲು ಹೋದ ರೋಹಿತ್ ಬ್ಯಾಟ್‌ಗೆ ಚೆಂಡು ತಾಗಿ ಸ್ಲಿಪ್‌ನಲ್ಲಿದ್ದ ಫಿನ್ ಅಲೆನ್ ಕೈ ಸೇರಿತು. ಹೀಗಾಗಿ ರೋಹಿತ್ ಗೋಲ್ಡನ್ ಡಕ್‌ಗೆ ಬಲಿಯಾದರು. ನಂತರ ಕ್ರೀಸ್‌ಗೆ ಬಂದ ವಿರಾಟ್ ಕೊಹ್ಲಿ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಹೆನ್ರಿ ಎಸೆದ ಒಳನುಗ್ಗುವ ಎಸೆತಕ್ಕೆ ಕೊಹ್ಲಿ ಬೌಲ್ಡ್ ಆದರು.

ಕೇವಲ ನಾಲ್ಕು ಎಸೆತ ಎದುರಿಸಿದ ಕೊಹ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಅನುಭವಿಸಿದರು. ಇದರ ಬೆನ್ನಲ್ಲೇ ನಾಯಕ ಶ್ರೇಯಸ್ ಅಯ್ಯರ್ ಕೂಡ ಮೊದಲ ಎಸೆತದಲ್ಲೇ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದರು. ಈ ಮೂಲಕ ಭಾರತದ ಮೂವರು ಪ್ರಮುಖ ಬ್ಯಾಟರ್‌ಗಳು ಮೊದಲ ಓವರ್‌ನಲ್ಲೇ ಶೂನ್ಯಕ್ಕೆ ಪೆವಿಲಿಯನ್ ಸೇರಿದರು.

16 ವರ್ಷಗಳ ಬಳಿಕ ಮತ್ತದೇ ಆಘಾತ

16 ವರ್ಷಗಳ ಹಿಂದೆ ಶ್ರೀಲಂಕಾ ವಿರುದ್ಧ ಎದುರಾಗಿದ್ದ ಇದೇ ರೀತಿಯ ವೈಫಲ್ಯವನ್ನು ರೋಹಿತ್ ಮತ್ತು ಕೊಹ್ಲಿ ಇದೀಗ ಮತ್ತೊಮ್ಮೆ ಅನುಭವಿಸಿದ್ದಾರೆ. ಹಲವು ವರ್ಷಗಳಿಂದ ಭಾರತ ತಂಡದ ಬ್ಯಾಟಿಂಗ್‌ಗೆ ಬಲವಾಗಿದ್ದ ಈ ಇಬ್ಬರು ದಿಗ್ಗಜರು ಒಂದೇ ಪಂದ್ಯದಲ್ಲಿ ಖಾತೆ ತೆರೆಯದೆ ಔಟಾಗಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

- 2010: ಭಾರತ ವಿರುದ್ಧ ಶ್ರೀಲಂಕಾ, ದಂಬುಲ್ಲಾ.

- 2026: ಭಾರತ ವಿರುದ್ಧ ನ್ಯೂಜಿಲೆಂಡ್, ಮೌಂಟ್ ಮೌಂಗನುಯಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi visit to Bengaluru | ನಮ್ಮ ಮೆಟ್ರೊ ಪಿಂಕ್ ಲೈನ್ ಪ್ರಧಾನಿ ಮೋದಿ ಉದ್ಘಾಟನೆ; ನ.14ರಿಂದ ಕಾರ್ಯಾಚರಣೆ

ಸಾಂಪ್ರದಾಯಿಕ ಮದುವೆಗೆ ಬ್ರೇಕ್; ಸೆಲ್ಫ್ ರೆಸ್ಪೆಕ್ಟ್ ಮ್ಯಾರೇಜ್ ಆದ ಅನಿರುದ್ಧ್-ಕಾವ್ಯಾ ಮಾರನ್: ಏನಿದು ಹೊಸ ಪದ್ಧತಿ?

4th ODI: ಒಂದೇ ಓವರ್ ನಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಡಕೌಟ್, Matt Henry ಮಾರಕ ಬೌಲಿಂಗ್, ವಿಶ್ವದಾಖಲೆ!

4th ODI: ಒಂದೂ ರನ್ ಗಳಿಸದೇ 3 ವಿಕೆಟ್ ಪತನ, ಕ್ರಿಕೆಟ್ ಇತಿಹಾಸದ ಹೀನಾಯ ದಾಖಲೆ ಬರೆದ ಭಾರತ!

ಗುಪ್ತಚರ ಆಧಾರಿತ ಕಾರ್ಯಾಚರಣೆಗಳಲ್ಲಿ 74 ಭಯೋತ್ಪಾದಕರ ಹತ್ಯೆ: ಪಾಕಿಸ್ತಾನ ಸೇನೆ