ಕ್ರಿಕೆಟ್ ಆಟಗಾರ್ತಿ ನಂದಿನಿ 
ಕ್ರಿಕೆಟ್

ಭಾರತದ ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದ ಮಹಿಳಾ ಕ್ರಿಕೆಟರ್ ಆತ್ಮಹತ್ಯೆ; ಇಬ್ಬರು ಯುವಕರಿಂದ ಕಿರುಕುಳ ಆರೋಪ

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ನಂದಿನಿ ತಂದೆ ನೀಡಿದ ದೂರಿನ ಆಧಾರದ ಮೇಲೆ, ಅನುಮಾನಾಸ್ಪದ ಸಾವು ಪ್ರಕರಣವೊಂದನ್ನು ದಾಖಲಿಸಲಾಗಿದೆ.

ತೆಲಂಗಾಣದ ವಿಕಾರಾಬಾದ್ ಪಟ್ಟಣದ ಮಧು ಕಾಲೋನಿಯಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ, 17 ವರ್ಷದ ಮಹಿಳಾ ಕ್ರಿಕೆಟ್ ಆಟಗಾರ್ತಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬಿಸಿಸಿಐ (BCCI) ಅಂಡರ್-19 ತಂಡಕ್ಕೆ ಆಯ್ಕೆಯಾಗಿದ್ದರು ಎಂದು ವರದಿಯಾಗಿದೆ. ಈ ಘಟನೆಯು ತೀವ್ರ ದುಃಖಕ್ಕೆ ಕಾರಣವಾಗಿದ್ದು, ಪ್ರತಿಭಟನೆಗಳಿಗೂ ಎಡೆಮಾಡಿಕೊಟ್ಟಿದೆ. ಯಾಲಾಲ ಮಂಡಲದ ಸಂಗಯ್ಯಪಲ್ಲಿ ಗ್ರಾಮದವರಾದ ನಂದಿನಿ, ತಮ್ಮ ಶಿಕ್ಷಣ ಮತ್ತು ಕ್ರಿಕೆಟ್ ತರಬೇತಿಗಾಗಿ ವಿಕಾರಾಬಾದ್‌ನಲ್ಲಿರುವ ಅಜ್ಜಿಯೊಂದಿಗೆ ವಾಸಿಸುತ್ತಿದ್ದರು. ಅನಿಲ್ ಮತ್ತು ಕೃಷ್ಣ ಎಂಬ ಇಬ್ಬರು ಯುವಕರು ತಮಗೆ ತೊಂದರೆ ನೀಡುತ್ತಿದ್ದರು ಎಂದು ನಂದಿನಿ ಅವರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕುಟುಂಬದವರ ಪ್ರಕಾರ, ಅನಿಲ್ ಪ್ರೀತಿಯ ನೆಪದಲ್ಲಿ ನಂದಿನಿಯನ್ನು ಹಿಂಬಾಲಿಸುತ್ತಿದ್ದನು ಮತ್ತು ಕೃಷ್ಣ ಅವನಿಗೆ ಬೆಂಬಲ ನೀಡುತ್ತಿದ್ದನು ಎಂದಿದ್ದಾರೆ. ಈ ಕಿರುಕುಳವೇ ನಂದಿನಿ ಅವರ ಸಾವಿಗೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ನಂದಿನಿ ತಂದೆ ನೀಡಿದ ದೂರಿನ ಆಧಾರದ ಮೇಲೆ, ಅನುಮಾನಾಸ್ಪದ ಸಾವು ಪ್ರಕರಣವೊಂದನ್ನು ದಾಖಲಿಸಲಾಗಿದೆ.

ಪೊಲೀಸರು ಆಕೆಯ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದು, ಆಕೆಗೆ ಕಿರುಕುಳ ನೀಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಆಕೆಯ ಸಾಮಾಜಿಕ ಜಾಲತಾಣ ಖಾತೆಗಳು ಮತ್ತು ಸಂವಹನಗಳು ಸೇರಿದಂತೆ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

'ಸಾಮಾಜಿಕ ಜಾಲತಾಣಗಳ ಮೂಲಕ ಯಾರಾದರೂ ಆಕೆಗೆ ಕಿರುಕುಳ ನೀಡಿದ್ದಾರೆಯೇ ಅಥವಾ ತೊಂದರೆ ಕೊಟ್ಟಿದ್ದಾರೆಯೇ ಎಂದು ತಿಳಿಯಲು ನಾವು ಆಕೆಯ ಇನ್‌ಸ್ಟಾಗ್ರಾಂ, ಫೇಸ್‌ಬುಕ್ ಮತ್ತು ವಾಟ್ಸಾಪ್ ಖಾತೆಗಳನ್ನು ಪರಿಶೀಲಿಸುತ್ತೇವೆ. ತನಿಖೆಯಲ್ಲಿ ಕಂಡುಬರುವ ಅಂಶಗಳ ಆಧಾರದ ಮೇಲೆ, ಇದಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು' ಎಂದು ವಿಕಾರಾಬಾದ್ ಸರ್ಕಲ್ ಇನ್ಸ್‌ಪೆಕ್ಟರ್ (ಸಿಐ) ರಘು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ತಿಳಿಸಿದರು.

ಘಟನೆ ನಂತರ, ನಂದಿನಿಗೆ ಕಿರುಕುಳ ನೀಡಿದ ಆರೋಪ ಹೊತ್ತ ಇಬ್ಬರು ಯುವಕರನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ, ಕುಟುಂಬದವರು ಮತ್ತು ಸಂಬಂಧಿಕರು ವಿಕರಾಬಾದ್‌ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರೊಂದಿಗೆ ಮಾತನಾಡಿದರು.

ಈ ಪ್ರಕರಣದಲ್ಲಿ ಇಬ್ಬರು ಯುವಕರ ಪಾತ್ರವಿರುವ ಶಂಕೆಯಿದ್ದು, ತನಿಖೆ ಮುಂದುವರಿದಿದೆ. ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಮೆರಿಕದಲ್ಲಿ ದಿಢೀರ್ ವಿಮಾನ ಸಂಚಾರ ಸ್ಥಗಿತ; ಎಲ್ಲಾ ವಿಮಾನಗಳ ಟೇಕ್-ಆಫ್ ರದ್ದು: ಆದ್ರೂ ಯಾವುದೇ ಬೆದರಿಕೆ ಇಲ್ಲ - US

ಭಾರತದ ಆರ್ಥಿಕ ಬೆಳವಣಿಗೆಯ ಪ್ರಮುಖ ಚಾಲನಾ ಶಕ್ತಿ ನವ ಮಧ್ಯಮ ವರ್ಗ: ಪ್ರಧಾನಿ ಮೋದಿ; Video

ಬೆತ್ತಲೆ ಫೋಟೋ ಕಳುಹಿಸಿದ ಪಾಕ್ ಏಜೆಂಟ್; ಪ್ರತಿಯಾಗಿ ರಹಸ್ಯ ಯುದ್ಧ ಯೋಜನೆ ಮಾಹಿತಿ ನೀಡಿದ IAF ಅಧಿಕಾರಿ!

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್: ಯಾರಿಗೆ ಕ್ಲೀನ್ ಚಿಟ್? ಕುಮಾರಸ್ವಾಮಿ ಪ್ರಶ್ನೆ

ವಿಧಾನಸೌಧವನ್ನೇ ಮಾರಿಬಿಡಿ: ಸರ್ಕಾರಿ ಆಸ್ತಿಯನ್ನು ರಕ್ಷಿಸಲು ವಿಫಲರಾದ ಅಧಿಕಾರಿಗಳ ವಿರುದ್ದ ಸಾರಿಗೆ ಸಚಿವ ಗರಂ