ಶ್ರೇಯಸ್ ಅಯ್ಯರ್ ವಿಕೆಟ್ ಪಡೆದ ಮ್ಯಾಟ್ ಹೆನ್ರಿ 
ಕ್ರಿಕೆಟ್

'ಟಾಪ್ ಆರ್ಡರ್ ಅಲ್ಲ.. ಮಧ್ಯಮ ಕ್ರಮಾಂಕವೇ ದುರ್ಬಲ': ನ್ಯೂಜಿಲೆಂಡ್ ವಿರುದ್ಧ 244 ರನ್ ಸೋಲಿನ ಬಳಿಕ ದಿನೇಶ್ ಕಾರ್ತಿಕ್ ಅಚ್ಚರಿ ಹೇಳಿಕೆ!

ಶುಕ್ರವಾರ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ 244 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಸೋಲಿನ ಬೆನ್ನಲ್ಲೇ ಭಾರತ ತಂಡದ ಬ್ಯಾಟಿಂಗ್ ವಿಭಾಗದ ದೌರ್ಬಲ್ಯವನ್ನು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಎತ್ತಿ..

ಮೌಂಟ್ ಮೌಂಗನುಯಿ: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ 4ನೇ ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಅನುಭವಿಸಿದ್ದು, ಈ ಸೋಲಿಗೆ ತಂಡದ ಮಧ್ಯಮ ಕ್ರಮಾಂಕವೇ ಕಾರಣ ಎಂದು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಶುಕ್ರವಾರ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ 244 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಸೋಲಿನ ಬೆನ್ನಲ್ಲೇ ಭಾರತ ತಂಡದ ಬ್ಯಾಟಿಂಗ್ ವಿಭಾಗದ ದೌರ್ಬಲ್ಯವನ್ನು ಮಾಜಿ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಎತ್ತಿ ತೋರಿಸಿದ್ದಾರೆ.

ಐದು ಪಂದ್ಯಗಳ ಸರಣಿಯಲ್ಲಿ ಆರಂಭಿಕ ಎರಡು ಪಂದ್ಯಗಳನ್ನು ಗೆದ್ದಿದ್ದ ಭಾರತ 2-0 ಮುನ್ನಡೆ ಸಾಧಿಸಿತ್ತು. ಆದರೆ, ನಾಲ್ಕನೇ ಪಂದ್ಯಗಳಲ್ಲಿ ನ್ಯೂಜಿಲೆಂಡ್ ತಿರುಗೇಟು ನೀಡಿದೆ. ಶುಕ್ರವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 333 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಬಳಿಕ ಬೌಲಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡಿದ ಕಿವೀಸ್ ಪಡೆ ಭಾರತವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ 244 ರನ್‌ಗಳ ಗೆಲುವು ಸಾಧಿಸಿತು.

ನಿಯಮಿತ ನಾಯಕ ಶುಭಮನ್ ಗಿಲ್ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ಭಾರತ ತಂಡವನ್ನು ಮುನ್ನಡೆಸಿದ್ದರು. ಗುರಿ ಬೆನ್ನಟ್ಟಲು ಕಣಕ್ಕಿಳಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಮೊದಲ ಓವರ್‌ನಲ್ಲೇ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಔಟ್ ಮಾಡಿ ಭಾರತಕ್ಕೆ ದೊಡ್ಡ ಹೊಡೆತ ನೀಡಿದರು. ಈ ಆಘಾತದಿಂದ ಭಾರತ ತಂಡ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮಧ್ಯಮ ಕ್ರಮಾಂಕದ ಬಗ್ಗೆ ಕಾರ್ತಿಕ್ ಕಳವಳ

ಪಂದ್ಯದ ಬಳಿಕ Cricbuzz ಚರ್ಚೆಯಲ್ಲಿ ಮಾತನಾಡಿದ ಮಾಜಿ ಆಟಗಾರ ದಿನೇಶ್ ಕಾರ್ತಿಕ್, ಭಾರತದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಸಮಸ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

"ಈ ಪಂದ್ಯದಲ್ಲಿ ಭಾರತ ಸಂಪೂರ್ಣವಾಗಿ ಕುಸಿದುಬಿತ್ತು. ಆದರೆ, ಈ ಸೋಲಿಗೆ ಮಾತ್ರ ಹೆಚ್ಚು ಹೊಣೆಗಾರಿಕೆ ನಿಗದಿಪಡಿಸಲು ಸಾಧ್ಯವಿಲ್ಲ. ಮೂರು ಪಂದ್ಯಗಳಲ್ಲೂ ಭಾರತದ ಬ್ಯಾಟಿಂಗ್, ಅದರಲ್ಲೂ ಮಧ್ಯಮ ಕ್ರಮಾಂಕ ಸ್ವಲ್ಪ ದುರ್ಬಲವಾಗಿ ಕಾಣಿಸಿದೆ. ಇದು ತಂಡ ಗಂಭೀರವಾಗಿ ಗಮನಿಸಬೇಕಾದ ವಿಚಾರ" ಎಂದು ಕಾರ್ತಿಕ್ ಹೇಳಿದ್ದಾರೆ.

"ನ್ಯೂಜಿಲೆಂಡ್ ನೀಡಿದ ಗುರಿಗಳನ್ನು ಬೆನ್ನಟ್ಟುವಾಗ ಭಾರತ ಹಲವು ಬಾರಿ ಎಡವಿದೆ. ಒಂದು ಪಂದ್ಯದಲ್ಲಿ ಮಳೆಯಿಂದಾಗಿ ನಾವು ಪಾರಾಗಿದ್ದೇವೆ. ಮೊದಲ ಪಂದ್ಯದಲ್ಲೂ ಕೆಲವು ವಿಕೆಟ್‌ಗಳು ಬೇಗನೆ ಉರುಳುವವರೆಗೂ ಭಾರತ ಉತ್ತಮ ಸ್ಥಿತಿಯಲ್ಲಿತ್ತು. ಹೀಗಾಗಿ ಮಧ್ಯಮ ಕ್ರಮಾಂಕದ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕಿದೆ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಂಡದ ಕಾರ್ಯತಂತ್ರ ಬದಲಿಸಿಕೊಳ್ಳಲು ಮುರಳಿ ಕಾರ್ತಿಕ್ ಸಲಹೆ

ಇದೇ ಚರ್ಚೆಯಲ್ಲಿ ಮಾತನಾಡಿದ ಮಾಜಿ ಸ್ಪಿನ್ನರ್ ಮುರಳಿ ಕಾರ್ತಿಕ್ ಕೂಡ ಭಾರತ ತಂಡದ ಕಾರ್ಯತಂತ್ರವನ್ನು ಮರುಪರಿಶೀಲಿಸುವಂತೆ ಸಲಹೆ ನೀಡಿದ್ದಾರೆ.

"ಭಾರತ 333 ರನ್ ಬಿಟ್ಟುಕೊಟ್ಟಿದೆ. ಹೀಗಾಗಿ ಬೌಲಿಂಗ್ ಮಾಡಿದ ರೀತಿಯ ಬಗ್ಗೆಯೂ ತಂಡ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು. ಗುರ್ನೂರ್ ಬ್ರಾರ್ ಬಳಸಿದ ಶಾರ್ಟ್ ಪಿಚ್ ಬೌಲಿಂಗ್ ತಂತ್ರ ಹೆಚ್ಚು ಪರಿಣಾಮ ಬೀರಲಿಲ್ಲ. ಅವರು ಸಾಕಷ್ಟು ರನ್ ಬಿಟ್ಟುಕೊಟ್ಟರು. ಮುಂದಿನ ಪಂದ್ಯದಲ್ಲಿ ಕುಲದೀಪ್ ಯಾದವ್ ಆಡುತ್ತಾರೆಯೇ? ಅವರು ತಮ್ಮ ಬೌಲಿಂಗ್‌ನಲ್ಲಿ ಯಾವ ಬದಲಾವಣೆ ಮಾಡಿಕೊಳ್ಳಬೇಕು ಎಂಬುದನ್ನೂ ತಂಡ ಯೋಚಿಸಬೇಕು" ಎಂದು ಹೇಳಿದ್ದಾರೆ.

"ಮುಂದಿನ ಪಂದ್ಯದಲ್ಲೂ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರೆ ಯಾವ ರೀತಿಯ ಕಾರ್ಯತಂತ್ರ ಅನುಸರಿಸಬೇಕು ಎಂಬುದನ್ನು ಭಾರತ ನಿರ್ಧರಿಸಬೇಕಿದೆ" ಎಂದು ಮುರಳಿ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.

ಅಂದಹಾಗೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯ ನವೆಂಬರ್ 15ರ ಭಾನುವಾರ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನಮಗೆ ಪಾಠ ಮಾಡುವ ಮೊದಲು ನಿಮ್ಮ ಪೂರ್ವಗ್ರಹ ಸರಿಪಡಿಸಿಕೊಳ್ಳಿ, ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ': ಅಮೆರಿಕಕ್ಕೆ ಭಾರತ ಖಡಕ್ ತಿರುಗೇಟು!

ಕಷ್ಟ-ಸುಖ ಮಾತಾಡಿ ಸಂಕಷ್ಟಕ್ಕೆ ಸಿಲುಕಿದ ದರ್ಶನ್-ಪವಿತ್ರಾ: 2 ನಿಮಿಷದ ಸಂಭಾಷಣೆಯೇ SPPಗೆ ಹೊಸ ಅಸ್ತ್ರ! ಆಡಿಯೋ ಕ್ಲಿಪ್ ಜಡ್ಜ್ ಕೈಗೆ?

'ನಾವೇನು ಸ್ಕೂಲ್ ಮಕ್ಕಳಾ?'.. 'ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳ ನೀಡುವುದು ಸರಿಯಲ್ಲ': ಆಸಿಸ್ ನಾಯಕ ಕೆಂಡಾಮಂಡಲ, ಮುರಳಿ ಕಾರ್ತಿಕ್ ತಿರುಗೇಟು!

2019ರಲ್ಲಿ ತಂದೆಯ ಕೊಲೆ, 2026ರಲ್ಲಿ ಸೇಡು ತೀರಿಸಿಕೊಂಡ ಮಗ; ಹಲವು ಬಾರಿ ಸಂಚು, ಕೊಡಲಿಯಿಂದ ಕೊಚ್ಚಿ ಹತ್ಯೆ!

ಅಮೆರಿಕದಲ್ಲಿ ದಿಢೀರ್ ವಿಮಾನ ಸಂಚಾರ ಸ್ಥಗಿತ; ಎಲ್ಲಾ ವಿಮಾನಗಳ ಟೇಕ್-ಆಫ್ ರದ್ದು: ಆದ್ರೂ ಯಾವುದೇ ಬೆದರಿಕೆ ಇಲ್ಲ - US