ಭಾರತ ತಂಡದ ಬ್ಯಾಟಿಂಗ್ 
ಕ್ರಿಕೆಟ್

96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!

ವೆಲ್ಲಿಂಗ್ಟನ್ ನ ಬೇಸಿನ್ ರಿಸರ್ವ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಸಂಪೂರ್ಣ ಮೇಲುಗೈ ಸಾಧಿಸಿದ್ದು, ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 368 ರನ್‌ಗಳಿಗೆ ಆಲೌಟ್ ಆಗಿತ್ತು.

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಐತಿಹಾಸಿಕ ಸಾಧನೆ ಮಾಡಿದ್ದು, 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆಯೊಂದನ್ನು ಭಾರತ ಮಾಡಿ ತೋರಿಸಿದೆ.

ವೆಲ್ಲಿಂಗ್ಟನ್ ನ ಬೇಸಿನ್ ರಿಸರ್ವ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಸಂಪೂರ್ಣ ಮೇಲುಗೈ ಸಾಧಿಸಿದ್ದು, ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 368 ರನ್‌ಗಳಿಗೆ ಆಲೌಟ್ ಆಗಿತ್ತು.

ಈ ಮೊತ್ತಕ್ಕೆ ಉತ್ತರವಾಗಿ ಶುಭಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 9 ವಿಕೆಟ್ ನಷ್ಟಕ್ಕೆ 720 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ.

ಆ ಮೂಲಕ ಭಾರತ ತಂಡ 96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಗತ್ತಿನ ಯಾವುದೇ ತಂಡ ಮಾಡದ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.

1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!

ನ್ಯೂಜಿಲೆಂಡ್ ತಂಡ 1930ರಲ್ಲಿ ಟೆಸ್ಟ್ ಕ್ರಿಕೆಟ್ ಆಡಲು ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಆ ದೇಶದ ವಿರುದ್ಧ ಯಾವುದೇ ತಂಡ 700ಕ್ಕೂ ಹೆಚ್ಚು ರನ್ ಗಳಿಸಿದೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಭಾನುವಾರ ನಾಲ್ಕನೇ ದಿನದಾಟದ ವೇಳೆ ಭಾರತ ಈ ಸಾಧನೆ ಮಾಡಿದೆ.

ಈ ಮೂಲಕ ನ್ಯೂಜಿಲೆಂಡ್ ನೆಲದಲ್ಲಿ ಟೆಸ್ಟ್ ಪಂದ್ಯವೊಂದರಲ್ಲಿ ದಾಖಲಾದ ಅತ್ಯಧಿಕ ಮೊತ್ತದ ದಾಖಲೆಯನ್ನೂ ತನ್ನದಾಗಿಸಿಕೊಂಡಿದೆ. 2019ರಲ್ಲಿ ಹ್ಯಾಮಿಲ್ಟನ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನ್ಯೂಜಿಲೆಂಡ್ 6 ವಿಕೆಟ್‌ಗೆ 715 ರನ್ ಗಳಿಸಿದ್ದು ಈ ಹಿಂದಿನ ದಾಖಲೆಯಾಗಿತ್ತು. ಇದೀಗ ಭಾರತ 720 ರನ್ ಗಳಿಸುವ ಮೂಲಕ ಆ ದಾಖಲೆಯನ್ನು ಮುರಿದಿದೆ.

ಒಟ್ಟಾರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದು 19ನೇ ಅತ್ಯಧಿಕ ಇನ್ನಿಂಗ್ಸ್ ಮೊತ್ತವಾಗಿದೆ. 1997ರಲ್ಲಿ ಭಾರತ ವಿರುದ್ಧ ಶ್ರೀಲಂಕಾ 6 ವಿಕೆಟ್‌ಗೆ 952 ರನ್ ಗಳಿಸಿದ್ದು ಟೆಸ್ಟ್ ಇತಿಹಾಸದ ಗರಿಷ್ಠ ಮೊತ್ತವಾಗಿದೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ವಿರುದ್ಧ ಟೆಸ್ಟ್‌ನಲ್ಲಿ ದಾಖಲಾದ ಅತ್ಯಧಿಕ ಮೊತ್ತ 1995ರಲ್ಲಿ ವೆಲ್ಲಿಂಗ್ಟನ್‌ನಲ್ಲೇ ವೆಸ್ಟ್ ಇಂಡೀಸ್ ಗಳಿಸಿದ್ದ 5 ವಿಕೆಟ್‌ಗೆ 660 ರನ್ ಆಗಿತ್ತು.

ಪಂತ್ ಅಮೋಘ ಶತಕ

ಭಾರತದ ಬೃಹತ್ ಮೊತ್ತದಲ್ಲಿ ರಿಷಭ್ ಪಂತ್ ಅವರ ಕೊಡುಗೆ ಪ್ರಮುಖವಾಗಿತ್ತು. ಅವರು 153 ಎಸೆತಗಳಲ್ಲಿ 128 ರನ್ ಗಳಿಸಿ ಗಮನ ಸೆಳೆದರು. ಇದರೊಂದಿಗೆ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ (SENA) ದೇಶಗಳಲ್ಲಿ ಟೆಸ್ಟ್ ಶತಕ ಗಳಿಸಿದ ಭಾರತದ ಆರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ನಾಲ್ಕನೇ ದಿನದಾಟದ ಅಂತ್ಯಕ್ಕೆ ಕಿವೀಸ್ 119/2

ಭಾರತ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡ ಬಳಿಕ ಎರಡನೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್ ನಾಲ್ಕನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿದೆ. ಈ ಮೂಲಕ ಭಾರತಕ್ಕಿಂತ ಇನ್ನೂ 233 ರನ್‌ಗಳ ಹಿನ್ನಡೆಯಲ್ಲಿದೆ. ಡೆವೊನ್ ಕಾನ್ವೆ 59 ರನ್ ಗಳಿಸಿ ಅಜೇಯರಾಗಿದ್ದರೆ, ರಚಿನ್ ರವೀಂದ್ರ 27 ರನ್ ಗಳಿಸಿ ಕ್ರೀಸ್‌ನಲ್ಲಿದ್ದರು.

ಹೆನ್ರಿ ನಿಕೋಲ್ಸ್ 31 ರನ್ ಗಳಿಸಿ ಔಟಾದರು. ಧ್ರುವ್ ಜುರೇಲ್ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಪ್ರಸಿದ್ಧ್ ಕೃಷ್ಣ ಅವರಿಗೆ ವಿಕೆಟ್ ತಂದುಕೊಟ್ಟರು. ಇನ್ನಿಂಗ್ಸ್‌ನ ಮೊದಲ ಓವರ್‌ನಲ್ಲೇ ನ್ಯೂಜಿಲೆಂಡ್ ನಾಯಕ ಟಾಮ್ ಲಾಥಮ್ ಅವರನ್ನು ಜಸ್ಪ್ರೀತ್ ಬುಮ್ರಾ ಔಟ್ ಮಾಡಿದ್ದರು.

ಪಿಚ್‌ಗಿಂತ ಹವಾಮಾನವೇ ಕಾರಣ ಎಂದ ಜುರೇಲ್

ಬೇಸಿನ್ ರಿಸರ್ವ್ ಮೈದಾನದ ಪಿಚ್ ಬ್ಯಾಟಿಂಗ್‌ಗೆ ಹೆಚ್ಚು ಅನುಕೂಲಕರವಾಗಿದ್ದಕ್ಕೆ ಹವಾಮಾನವೇ ಪ್ರಮುಖ ಕಾರಣ ಎಂದು ಭಾರತದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಅಭಿಪ್ರಾಯಪಟ್ಟಿದ್ದಾರೆ.

ಸತತ ಮೂರು ದಿನಗಳ ಕಾಲ ಬಿಸಿಲು ಇದ್ದ ಕಾರಣ ಪಿಚ್ ಒಣಗಿದೆ. ಮೋಡ ಕವಿದ ವಾತಾವರಣವಿದ್ದಿದ್ದರೆ ಬೌಲರ್‌ಗಳಿಗೆ ಹೆಚ್ಚಿನ ನೆರವು ಸಿಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಭಾರತ ಗೆಲುವು ಸಾಧಿಸಲು ನ್ಯೂಜಿಲೆಂಡ್‌ನ ಉಳಿದ ಎಂಟು ವಿಕೆಟ್‌ಗಳನ್ನು ಕಬಳಿಸಬೇಕಿದೆ. ಅದಕ್ಕಾಗಿ ಉತ್ತಮ ಬೌಲಿಂಗ್ ಜೊತೆಗೆ ಸ್ವಲ್ಪ ಅದೃಷ್ಟವೂ ಬೇಕಾಗಬಹುದು ಎಂದು ಜುರೇಲ್ ಅಭಿಪ್ರಾಯಪಟ್ಟಿದ್ದಾರೆ. ಭಾರತ ಎ ತಂಡದ ಪರ ಈ ಹಿಂದೆ ಕೆಂಪು ಚೆಂಡಿನ ಪಂದ್ಯಗಳನ್ನು ಆಡಿದ ಅನುಭವದ ಆಧಾರದಲ್ಲಿ ಅವರು ಈ ಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಹಿರಂಗವಾಗಿ ರಾಜಿನಾಮೆ ಪತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಆಕ್ರೋಶ!

ಭಾರತ-ಪಾಕಿಸ್ತಾನ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಮತ್ತು ವಿಪ್ರಜ್ ಡಿಕ್ಕಿ: ನೋವಿನಿಂದ ನರಳಾಡಿದ್ದ ಸ್ಫೋಟಕ ಬ್ಯಾಟರ್, Video!

ನಿಶ್ಚಿತಾರ್ಥ ಮಾಡಿಕೊಂಡ Biggboss ಜೋಡಿ: ಉಂಗುರ ಬದಲಿಸಿಕೊಂಡ ಶಿಶಿರ್-ಐಶ್ವರ್ಯಾ!

ಸೋಲಿನ ಹತಾಶೆ; ನೀವು ನನಗೆ ಮತ ಕೊಟ್ಟಿಲ್ಲ, ನಾನು ನಿಮಗೆ ಲೈಟ್ ಕೊಡಲ್ಲ; ಬೀದಿದೀಪ ತೆರವುಗೊಳಿಸಿದ BJP ಅಭ್ಯರ್ಥಿ| video

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ವಿಶ್ವದಾಖಲೆ.. ಈ ಸಾಧನೆ ಮಾಡಿದ ಜಗತ್ತಿನ ಮೊದಲ ತಂಡ!