ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

'ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ', ಈಗ 53 ಎಸೆತಗಳಲ್ಲಿ 204 ರನ್'!: ವಂಡರ್ ಕಿಡ್ ವೈಭವ್ ಸೂರ್ಯವಂಶಿ ಹೇಳಿದ್ದೇನು?

ಮಂಗಳವಾರ ನಡೆದ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನ ಗ್ರೂಪ್ ಬಿ ಪಂದ್ಯದಲ್ಲಿ ಭಾರತ ಎ ತಂಡ ಯುಎಇ ನೀಡಿದ್ದ 250 ರನ್‌ಗಳ ಗುರಿಯನ್ನು ಕೇವಲ 14.2 ಓವರ್‌ಗಳಲ್ಲಿ ಬೆನ್ನಟ್ಟಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ವೈಭವ್ ಸೂರ್ಯವಂಶಿ
Srinivasa Murthy VN
Updated On : 24 Nov 2026, 9:22 pm

ದೋಹಾ: ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ ಟೂರ್ನಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ 15 ವರ್ಷದ ವೈಭವ್ ಸೂರ್ಯವಂಶಿ, ಇದೀಗ ಒಂದೇ ಪಂದ್ಯದಲ್ಲಿ ಕ್ರಿಕೆಟ್ ಜಗತ್ತೇ ಬೆರಗಾಗುವಂತಹ ಸಾಧನೆ ಮಾಡಿದ್ದಾರೆ.

ದೋಹಾದಲ್ಲಿ ನಡೆದ ಯುಎಇ ವಿರುದ್ಧ ಕೇವಲ 53 ಎಸೆತಗಳಲ್ಲಿ 204 ರನ್ ಸಿಡಿಸಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತ್ಯಂತ ವೇಗದ ದ್ವಿಶತಕ ದಾಖಲಿಸಿದ ವೈಭವ್ ಸೂರ್ಯವಂಶಿ, ಭಾರತ ಎ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಈ ಐತಿಹಾಸಿಕ ಇನ್ನಿಂಗ್ಸ್ ಬಳಿಕ ತಮ್ಮ ಬ್ಯಾಟಿಂಗ್ ತಂತ್ರದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ.

ಮಂಗಳವಾರ ನಡೆದ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ನ ಗ್ರೂಪ್ ಬಿ ಪಂದ್ಯದಲ್ಲಿ ಭಾರತ ಎ ತಂಡ ಯುಎಇ ನೀಡಿದ್ದ 250 ರನ್‌ಗಳ ಗುರಿಯನ್ನು ಕೇವಲ 14.2 ಓವರ್‌ಗಳಲ್ಲಿ ಬೆನ್ನಟ್ಟಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನ ಸಂಪೂರ್ಣ ಶ್ರೇಯಸ್ಸು ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್‌ಗೆ ಸಲ್ಲುತ್ತದೆ.

Advertisement

Advertisement

ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದ ವೈಭವ್, 52 ಎಸೆತಗಳಲ್ಲಿ ದ್ವಿಶತಕದ ಗಡಿ ತಲುಪಿದರು. ಒಟ್ಟು 53 ಎಸೆತಗಳನ್ನು ಎದುರಿಸಿ 204 ರನ್ ಗಳಿಸಿದ ಅವರ ಇನ್ನಿಂಗ್ಸ್‌ನಲ್ಲಿ 28 ಸಿಕ್ಸರ್ ಹಾಗೂ 7 ಬೌಂಡರಿಗಳಿದ್ದವು. ವೃತ್ತಿಪರ ಕ್ರಿಕೆಟ್‌ನಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆಗೂ ಅವರು ಪಾತ್ರರಾದರು.

ಇದಕ್ಕೂ ಮೊದಲು ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಹೆಸರಿನಲ್ಲಿದ್ದ ಲಿಸ್ಟ್ ಎ ಕ್ರಿಕೆಟ್‌ನ ಅತ್ಯಂತ ವೇಗದ ಶತಕದ ದಾಖಲೆಯನ್ನು ವೈಭವ್ ಮುರಿದರು. ಫ್ರೇಸರ್-ಮ್ಯಾಕ್‌ಗುರ್ಕ್ 29 ಎಸೆತಗಳಲ್ಲಿ ಶತಕ ಗಳಿಸಿದ್ದರು. ಇನ್ನು ಕ್ಯಾಂಟರ್‌ಬರಿ ತಂಡದ ಚಾಡ್ ಬೋವ್ಸ್ ದಾಖಲಿಸಿದ್ದ 103 ಎಸೆತಗಳ ದ್ವಿಶತಕದ ದಾಖಲೆಯನ್ನೂ ವೈಭವ್ ಹಿಂದಿಕ್ಕಿದರು.

Also Read

53 ಎಸೆತಗಳಲ್ಲಿ 204 ರನ್! ಗರಿಷ್ಠ ಸ್ಟ್ರೈಕ್ ರೇಟ್, 14.2 ಓವರ್‌ ನಲ್ಲೇ ಚೇಸಿಂಗ್; Vaibhav Sooryavanshi ಅಬ್ಬರಕ್ಕೆ ಹಲವು ದಾಖಲೆಗಳು ಧೂಳಿಪಟ

'ಮೊದಲ ಎರಡು ಪಂದ್ಯಗಳಲ್ಲಿ ರನ್ ಗಳಿಸಿರಲಿಲ್ಲ'

ಐತಿಹಾಸಿಕ ಇನ್ನಿಂಗ್ಸ್ ಬಳಿಕ ಮಾತನಾಡಿದ ವೈಭವ್, ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ ಎಂದು ಒಪ್ಪಿಕೊಂಡರು.

"ಮೊದಲ ಎರಡು ಪಂದ್ಯಗಳಲ್ಲಿ ನಾನು ರನ್ ಗಳಿಸಿರಲಿಲ್ಲ. ಈ ಪಂದ್ಯದ ಪಿಚ್ ಗಮನಿಸಿದಾಗ ಬೌಲರ್‌ಗಳಿಗೆ ಹೆಚ್ಚು ನೆರವು ಸಿಗುವಂತೆ ಕಾಣಲಿಲ್ಲ. ಹೀಗಾಗಿ ನನ್ನ ಸಹಜ ಆಟವನ್ನೇ ಆಡಲು ನಿರ್ಧರಿಸಿದೆ. ಪ್ರತಿಯೊಂದು ಪಂದ್ಯದಲ್ಲೂ ನನ್ನ ಮನಸ್ಥಿತಿ ಒಂದೇ ಆಗಿರುತ್ತದೆ. ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಂತು ಬ್ಯಾಟಿಂಗ್ ಮಾಡಬೇಕು ಎಂಬುದೇ ನನ್ನ ಉದ್ದೇಶ" ಎಂದು ಹೇಳಿದರು.

ಹೆಚ್ಚು ಹೊತ್ತು ಕ್ರೀಸ್ ನಲ್ಲಿರುವುದೇ ಗುರಿಯಾಗಿತ್ತು

"ನನ್ನ ಮನಸ್ಸಿನಲ್ಲಿ ಯಾವುದೇ ನಿರ್ದಿಷ್ಟ ಗುರಿ ಇರಲಿಲ್ಲ. ಹೆಚ್ಚು ಹೊತ್ತು ಬ್ಯಾಟಿಂಗ್ ಮಾಡಬೇಕೆಂದುಕೊಂಡಿದ್ದೆ. ಪಿಚ್ ಉತ್ತಮವಾಗಿತ್ತು. ಹೀಗಾಗಿ ನನ್ನ ಆಟದ ಮೇಲೆ ನಂಬಿಕೆ ಇಟ್ಟು ಆಡಿದೆ" ಎಂದು ವೈಭವ್ ತಿಳಿಸಿದರು.

ಈ ಪಂದ್ಯದಲ್ಲಿ ಸ್ಪಿನ್ನರ್‌ಗಳು ಮತ್ತು ವೇಗದ ಬೌಲರ್‌ಗಳು ಎಂಬ ಭೇದವಿಲ್ಲದೆ ಎಲ್ಲರನ್ನೂ ಸಮರ್ಥವಾಗಿ ಎದುರಿಸಿದ ವೈಭವ್, ಚೆಂಡನ್ನು ಮೈದಾನದ ಮೂಲೆಮೂಲೆಗೂ ಅಟ್ಟಿದರು. 11ನೇ ಓವರ್‌ನಲ್ಲಿ ಅವರ ಕ್ಯಾಚ್ ಕೈಚೆಲ್ಲಿದ್ದು, ದ್ವಿಶತಕ ಪೂರೈಸಲು ಮತ್ತಷ್ಟು ನೆರವಾಯಿತು.

ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

ಹಿಂದಿನ ಪಂದ್ಯದಲ್ಲಿ ಪಾಕಿಸ್ತಾನ ಶಾಹೀನ್ಸ್ ವಿರುದ್ಧ ಸೋಲು ಕಂಡಿದ್ದ ಭಾರತ ಎ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು.

ಇದೀಗ ಮೂರು ಪಂದ್ಯಗಳಲ್ಲಿ ಎರಡನೇ ಗೆಲುವು ದಾಖಲಿಸಿರುವ ಭಾರತ ಎ ತಂಡ ಸೆಮಿಫೈನಲ್ ಪ್ರವೇಶಿಸುವ ನಿರೀಕ್ಷೆಯಿದೆ. ಪಾಕಿಸ್ತಾನ ಈಗಾಗಲೇ ಸೆಮಿಫೈನಲ್ ಸ್ಥಾನ ಖಚಿತಪಡಿಸಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments