ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಬೆಂಗಳೂರು: ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕಿರಿಯ ಸಹೋದರಿಯನ್ನೇ ಕೊಂದ ವಕೀಲ, ಆರೋಪಿ ಅಂದರ್!

ಅಧಿಕಾರಿಗಳ ಪ್ರಕಾರ, ಈ ಘಟನೆ ಬುಧವಾರ ಜುನ್ನಸಂದ್ರದಲ್ಲಿ ನಡೆದಿದೆ. ಇಲ್ಲಿ ಈ ಸಹೋದರ-ಸಹೋದರಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದರು.

ಸಾಂದರ್ಭಿಕ ಚಿತ್ರ
Ramyashree GN
Updated On : 26 Nov 2026, 11:38 am

ಬೆಂಗಳೂರು: ಇಲ್ಲಿನ ಬೆಳ್ಳಂದೂರು ಸಮೀಪ ಆಸ್ತಿ ವಿವಾದವೊಂದಕ್ಕೆ ಸಂಬಂಧಿಸಿದಂತೆ, 42 ವರ್ಷದ ವಕೀಲರೊಬ್ಬರು ತಮ್ಮ ಕಿರಿಯ ಸಹೋದರಿಯನ್ನು ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು 39 ವರ್ಷದ ಮೀನಾಕ್ಷಿ ಎಂ ಎಂದು ಗುರುತಿಸಲಾಗಿದೆ.

ತಲೆಮರೆಸಿಕೊಂಡಿದ್ದ ಆರೋಪಿ ಜಯರಾಮ್ ಎಂ ಎಂಬಾತನನ್ನು ಬಂಧಿಸಲಾಗಿದೆ ಎಂದು ಗುರುವಾರ ಪೊಲೀಸ್ ಮೂಲಗಳು ತಿಳಿಸಿವೆ.

Advertisement

Advertisement

ಅಧಿಕಾರಿಗಳ ಪ್ರಕಾರ, ಈ ಘಟನೆ ಬುಧವಾರ ಜುನ್ನಸಂದ್ರದಲ್ಲಿ ನಡೆದಿದೆ. ಇಲ್ಲಿ ಈ ಸಹೋದರ-ಸಹೋದರಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದರು.

ಮೀನಾಕ್ಷಿ ತನ್ನ ತಾಯಿ ಮತ್ತು ಮಕ್ಕಳೊಂದಿಗೆ ವಾಸವಾಗಿದ್ದರೆ, ಜಯರಾಮ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ವಾಸವಾಗಿದ್ದರು.

ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಇವರಿಬ್ಬರ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ; ಜಯರಾಮ್ ತನ್ನ ಸಹೋದರಿ ಬಳಿ, ತಾಯಿಯ ಮನೆಯನ್ನು ಖಾಲಿ ಮಾಡಿ ಬೇರೆಡೆಗೆ ಹೋಗುವಂತೆ ಕೇಳಿದ್ದರು ಎಂದು ಆರೋಪಿಸಲಾಗಿದೆ.

ಆದರೆ, ತಾಯಿಯೊಂದಿಗೆ ಉಳಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ ಮೀನಾಕ್ಷಿ, ಇದಕ್ಕೆ ನಿರಾಕರಿಸಿದ್ದಳು.

Also Read

'ನನಗೆ ನೀನು ಬೇಡಾ..': ASI ಕೊಲೆ ಮಾಡಿ, ಶವ ಸುಟ್ಟು ಹಾಕಿದ ಮಹಿಳಾ ಹೆಡ್‌ಕಾನ್‌ಸ್ಟೆಬಲ್! ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿದ ಕರಾಳ ಪ್ರೇಮ್ ಕಹಾನಿ

ಬುಧವಾರ, ಈ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮತ್ತೆ ಜಗಳ ನಡೆದಿದೆ. ಈ ವೇಳೆ, ಜಯರಾಮ್ ಕ್ರಿಕೆಟ್ ಬ್ಯಾಟ್‌ನಿಂದ ಮೀನಾಕ್ಷಿ ಮೇಲೆ ಪದೇ ಪದೆ ಹಲ್ಲೆ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

ತೀವ್ರವಾಗಿ ಗಾಯಗೊಂಡಿದ್ದ ಮೀನಾಕ್ಷಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement