ಭಾರತಕ್ಕೆ ಭರ್ಜರಿ ಜಯ 
ಕ್ರಿಕೆಟ್

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಜಪಾನ್ ನ ನಿಶ್ಸಿನ್ ನ ಕೊರೋಗಿ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 212 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಗಳನ್ನಷ್ಟೇ ಗಳಿಸಲು..

ನಿಶ್ಸಿನ್: ಜಪಾನ್ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ವಿಭಾಗದಲ್ಲಿ ಭಾರತ ತಂಡ ಮತ್ತೆ ಚಿನ್ನದ ಪದಕ ಬಾಚಿಕೊಂಡಿದೆ.

ಫೈನಲ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 19 ರನ್`ಗಳ ಅಂತರದಲ್ಲಿ ಮಣಿಸಿದ ಭಾರತ ಮತ್ತೆ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. ಏಷ್ಯನ್ ಕ್ರೀಡಾಕೂಟದ ಪ್ರಸ್ತುತ ಆವೃತ್ತಿಯಲ್ಲಿ ಭಾರತಕ್ಕೆ ಇದು 19ನೇ ಚಿನ್ನದ ಪದಕವಾಗಿದೆ.

ಜಪಾನ್ ನ ನಿಶ್ಸಿನ್ ನ ಕೊರೋಗಿ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 212 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಈ ಮೂಲಕ 19 ರನ್ ಗಳ ಅಂತರದ ವಿರೋಚಿತ ಗೆಲುವು ಸಾಧಿಸಿತು.

ಪಾಕಿಸ್ತಾನ ಪರ ಹಸನ್ ನವಾಜ್ 96 ರನ್ ಗಳಿಸಿ ಕೇವಲ 4 ರನ್ ಅಂತರದಲ್ಲಿ ಶತಕ ವಂಚಿತರಾದರು. ಅಂತೆಯೇ ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.

ಭಾರತದ ಪರ ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ತಲಾ 2 ವಿಕೆಟ್ ಪಡೆದರು.

ಹಸನ್ ನವಾಜ್ ಹೋರಾಟ ವ್ಯರ್ಥ

ಇನ್ನು ಇಂದಿನ ಪಂದ್ಯದಲ್ಲಿ ಪಾಕಿಸ್ತಾನದ ಪರ ಮಧ್ಯಮ ಕ್ರಮಾಂಕದ ಬ್ಯಾಟರ್ ಹಸನ್ ನವಾಜ್ ಏಕಾಂಗಿ ಹೋರಾಟ ನಡೆಸಿದರು. ಒಂದೆಡೆ ಪಾಕಿಸ್ತಾನದ ಅಗ್ರ ಕ್ರಮಾಂಕದ ಬ್ಯಾಟರ್`ಗಳು ರನ್ ಗಳಿಸಲು ವಿಫಲವಾದರೆ ಮಧ್ಯಮ ಕ್ರಮಾಂಕದಲ್ಲಿ ಬಂದ ಹಸನ್ ನವಾಜ್ ಪಾಕಿಸ್ತಾನದ ಇನ್ನಿಂಗ್ಸ್ ಗೆ ಜೀವ ತುಂಬಿದರು.

ಕೇವಲ 51 ಎಸೆತಗಳನ್ನು ಎದುರಿಸಿದ ಹಸನ್ ನವಾಜ್ 7 ಸಿಕ್ಸರ್ ಮತ್ತು 5 ಬೌಂಡರಿ ಸಹಿತ 96 ರನ್ ಗಳಿಸಿ ಅಂತಿಮ ಎಸೆತದಲ್ಲಿ ಔಟಾಗಿ ಇತ್ತ ಶತಕವನ್ನು ಮಿಸ್ ಮಾಡಿಕೊಂಡಿದ್ದಲ್ಲದೇ, ತಂಡ ಕೂಡ ಸೋಲಿನ ಹತಾಶೆ ಅನುಭವಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video