ಭುವನೇಶ್ವರ್ ಕುಮಾರ್ 
ಕ್ರಿಕೆಟ್

ಟೀಂ ಇಂಡಿಯಾಗೆ RCB ಆಟಗಾರ ಕಂಬ್ಯಾಕ್: ಅಜಿತ್ ಅಗರ್ಕರ್ ಹೊರಬಿದ್ದ ಬೆನ್ನಲ್ಲೇ BCCI ಅಚ್ಚರಿ ನಿರ್ಧಾರ; ನ್ಯೂಜಿಲೆಂಡ್ ವಿರುದ್ಧ ಬ್ಲೂ ಜೆರ್ಸಿಯಲ್ಲಿ ಭುವಿ!

ಭಾರತವು ಅಕ್ಟೋಬರ್ 22 ರಿಂದ ನವೆಂಬರ್ 1 ರವರೆಗೆ ನ್ಯೂಜಿಲೆಂಡ್‌ನಲ್ಲಿ ಐದು ಟಿ20ಐ ಪಂದ್ಯಗಳನ್ನು ಆಡಲಿದೆ. ಟಿ20 ಸರಣಿ ನಂತರ ಭಾರತವು ಐದು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನೂ ಆಡಲಿದೆ.

ನ್ಯೂಜಿಲೆಂಡ್ ಪ್ರವಾಸಕ್ಕಾಗಿ ಭಾರತ ಮತ್ತು 'ಇಂಡಿಯಾ ಎ' (India A) ತಂಡಗಳನ್ನು ಬಿಸಿಸಿಐ (BCCI) ಪುರುಷರ ಆಯ್ಕೆ ಸಮಿತಿ ಪ್ರಕಟಿಸಿದ್ದು, ದೊಡ್ಡ ಅಚ್ಚರಿಯೊಂದು ಎದುರಾಯಿತು. ಈ ಪ್ರವಾಸದಲ್ಲಿ ಭಾರತ ತಂಡವು ಐದು ಟಿ20 ಪಂದ್ಯಗಳನ್ನು ಆಡಿದರೆ, 'ಇಂಡಿಯಾ ಎ' ತಂಡವು ನ್ಯೂಜಿಲೆಂಡ್ 'ಎ' ತಂಡದ ವಿರುದ್ಧ ಮೂರು ಬಹು-ದಿನದ (Multi-Day) ಪಂದ್ಯಗಳನ್ನು ಆಡಲಿದೆ. ಏಕದಿನ (ODI) ಮತ್ತು ಟೆಸ್ಟ್ ಸರಣಿಗಾಗಿನ ತಂಡಗಳನ್ನು ನಂತರ ಪ್ರಕಟಿಸಲಾಗುವುದು. ಈ ತಿಂಗಳ ಕೊನೆಯಲ್ಲಿ ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಗಾಗಿ, ಭಾರತದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಸುಮಾರು ನಾಲ್ಕು ವರ್ಷಗಳ ನಂತರ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ.

ಐಪಿಎಲ್ (IPL) 2026ರಲ್ಲಿ ಭುವನೇಶ್ವರ್ ಕುಮಾರ್ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರು; ಅವರು 16 ಪಂದ್ಯಗಳಲ್ಲಿ 28 ವಿಕೆಟ್‌ಗಳನ್ನು ಕಬಳಿಸಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2026ರಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಭುವಿ ನಿರ್ಣಾಯಕ ಪಾತ್ರ ವಹಿಸಿದ್ದರು.

ಬಿಸಿಸಿಐ ಆಯ್ಕೆ ಸಮಿತಿ ಮಾಜಿ ಅಧ್ಯಕ್ಷ ಅಜಿತ್ ಅಗರ್ಕರ್ ನಿರ್ಗಮನದ ನಂತರ ಮತ್ತು ಪ್ರಜ್ಞಾನ್ ಓಜಾ ಅವರು ಹಂಗಾಮಿ ಅಧ್ಯಕ್ಷರಾಗಿರುವಾಗ ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ, ಗಾಯದ ಸಮಸ್ಯೆಯಿಂದಾಗಿ ಏಷ್ಯನ್ ಗೇಮ್ಸ್‌ನಿಂದ ಹೊರಗುಳಿದಿದ್ದ ವರುಣ್ ಚಕ್ರವರ್ತಿ ಕೂಡ ಮರಳಿದ್ದಾರೆ.

ಭಾರತವು ಅಕ್ಟೋಬರ್ 22 ರಿಂದ ನವೆಂಬರ್ 1 ರವರೆಗೆ ನ್ಯೂಜಿಲೆಂಡ್‌ನಲ್ಲಿ ಐದು ಟಿ20ಐ ಪಂದ್ಯಗಳನ್ನು ಆಡಲಿದೆ. ಸರಣಿಯ ಮೊದಲ ಪಂದ್ಯವು ಅಕ್ಟೋಬರ್ 22 ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದ್ದು, ಎರಡನೇ ಪಂದ್ಯವೂ ಅದೇ ಸ್ಥಳದಲ್ಲಿ ಅಕ್ಟೋಬರ್ 24 ರಂದು ನಡೆಯಲಿದೆ.

ಅಕ್ಟೋಬರ್ 27 ರಂದು ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯವು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದ್ದು, ನಾಲ್ಕನೇ ಮತ್ತು ಐದನೇ ಟಿ20 ಪಂದ್ಯಗಳು ಕ್ರಮವಾಗಿ ಅಕ್ಟೋಬರ್ 30 ರಂದು ಆಕ್ಲೆಂಡ್‌ನಲ್ಲಿ ಹಾಗೂ ನವೆಂಬರ್ 1 ರಂದು ಹ್ಯಾಮಿಲ್ಟನ್‌ನಲ್ಲಿ ನಡೆಯಲಿವೆ.

ಟಿ20 ಸರಣಿ ನಂತರ ಭಾರತವು ಐದು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನೂ ಆಡಲಿದೆ.

ಭಾರತದ T20I ತಂಡ

ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ಅರ್ಶದೀಪ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್.

ಭಾರತ ಎ ತಂಡ

ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ದೇವದತ್ ಪಡಿಕ್ಕಲ್, ರವಿಚಂದ್ರನ್ ಸ್ಮರಣ್, ರಿಷಭ್ ಪಂತ್ (ವಿಕೆಟ್ ಕೀಪರ್)*, ಧ್ರುವ್ ಜುರೆಲ್ (ನಾಯಕ) (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಔಕಿಬ್ ನಬಿ, ಆಕಾಶ್ ದೀಪ್, ಅಂಶುಲ್ ಕಾಂಬೋಜ್, ಮಾನವ್ ಸುತಾರ್, ಮುಕೇಶ್ ಚೌಧರಿ, ಸಾಯಿ ಸುದರ್ಶನ್, ಯಶ್ ರಾಥೋಡ್, ಮುಕೇಶ್ ಕುಮಾರ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ