ಸಾಹಿಬ್‌ಜಾದಾ ಫರ್ಹಾನ್ 
ಕ್ರಿಕೆಟ್

T20 ಕ್ರಿಕೆಟ್ ಇತಿಹಾಸದಲ್ಲಿ ಯಾರೂ ಮಾಡದ ಅಪರೂಪದ ವಿಶ್ವ ದಾಖಲೆ ಬರೆದ ಪಾಕ್ ಕ್ಯಾಪ್ಟನ್!

ರಾವಲ್ಪಿಂಡಿಯಲ್ಲಿ ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಎಂಟು ವಿಕೆಟ್‌ಗಳ ನಿರಾಶಾದಾಯಕ ಸೋಲನ್ನು ಅನುಭವಿಸಿದರೂ, ಈ ಇಡೀ ಸರಣಿಯಲ್ಲಿ ಫರ್ಹಾನ್ ಒಟ್ಟು 238 ರನ್‌ಗಳನ್ನು ಕಲೆಹಾಕಿದ್ದಾರೆ.

ಪಾಕಿಸ್ತಾನ ಕ್ರಿಕೆಟ್ ತಂಡ ನಾಯಕ ಸಾಹಿಬ್‌ಜಾದಾ ಫರ್ಹಾನ್, 'ಫುಲ್ ಮೆಂಬರ್' (ಪೂರ್ಣ ಸದಸ್ಯ) ರಾಷ್ಟ್ರಗಳ ನಡುವಿನ ಮೂರು ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಅತಿ ಹೆಚ್ಚು ರನ್‌ಗಳನ್ನು ಗಳಿಸುವ ಮೂಲಕ ಟಿ20 ಅಂತರರಾಷ್ಟ್ರೀಯ (T20I) ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ರಾವಲ್ಪಿಂಡಿಯಲ್ಲಿ ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ತಂಡ ಶ್ರೀಲಂಕಾ ವಿರುದ್ಧ ಎಂಟು ವಿಕೆಟ್‌ಗಳ ನಿರಾಶಾದಾಯಕ ಸೋಲನ್ನು ಅನುಭವಿಸಿದರೂ, ಈ ಇಡೀ ಸರಣಿಯಲ್ಲಿ ಫರ್ಹಾನ್ ಒಟ್ಟು 238 ರನ್‌ಗಳನ್ನು ಕಲೆಹಾಕಿದ್ದಾರೆ ಎಂದು ಐಸಿಸಿ(ICC) ವೆಬ್‌ಸೈಟ್ ತಿಳಿಸಿದೆ.

ಈ ಐತಿಹಾಸಿಕ ಸಾಧನೆಯೊಂದಿಗೆ, ಟಿ20 ಕ್ರಿಕೆಟ್‌ನಲ್ಲೇ ಇದುವರೆಗೆ ಯಾರೂ ಮಾಡದ ಅಪರೂಪದ ದಾಖಲೆಯೊಂದನ್ನು ಸಾಹಿಬ್​ಝಾದ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂರೂ ಪಂದ್ಯಗಳಲ್ಲೂ ಸಾಹಿಬ್‌ಜಾದಾ ಫರ್ಹಾನ್ ಅವರು ಅರ್ಧಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 3 ಪಂದ್ಯಗಳ ದ್ವಿಪಕ್ಷೀಯ ಸರಣಿಯೊಂದರ ಎಲ್ಲಾ ಪಂದ್ಯಗಳಲ್ಲೂ ಅರ್ಧ ಶತತ ಸಿಡಿಸಿದ ವಿಶ್ವದ ಮೊದಲ ನಾಯಕನೆಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 89 ರನ್ ಬಾರಿಸಿ ಅಬ್ಬರಿಸಿದ್ದ ಫರ್ಹಾನ್, ದ್ವಿತೀಯ ಪಂದ್ಯದಲ್ಲೂ 73 ರನ್ ಸಿಡಿಸಿದ್ದರು. ಇನ್ನು ಮೂರನೇ ಹಾಗೂ ಕೊನೆಯ ಪಂದ್ಯದಲ್ಲೂ ಸಾಹಿಬ್‌ಜಾದಾ 76 ರನ್ ಗಳಿಸುವ ಮೂಲಕ ಈ ಅಪರೂಪದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಫರ್ಹಾನ್ ಅವರು ಈ ಸರಣಿಯಲ್ಲಿ ಒಟ್ಟು 238 ರನ್‌ ಗಳಿಸಿದ್ದು, ಇದರೊಂದಿಗೆ 3 ಪಂದ್ಯಗಳ ದ್ವಿಪಕ್ಷೀಯ ಟಿ20 ಸರಣಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಪಾಕ್ ತಂಡದ ನಾಯಕ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ಭಾರತದ ಅಭಿಷೇಕ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ. ಅಭಿಷೇಕ್ ಶರ್ಮಾ ಅವರು ಈ ವರ್ಷದ ಆರಂಭದಲ್ಲಿ ಅಫ್ಘಾನಿಸ್ತಾನದ ವಿರುದ್ಧದ 3 ಪಂದ್ಯಗಳ ಸರಣಿಯಲ್ಲಿ 229 ರನ್ ಗಳಿಸಿ ಈ ದಾಖಲೆ ನಿರ್ಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಆಯ್ಕೆ ಸಮಿತಿ ಅಧ್ಯಕ್ಷರ ಆಯ್ಕೆ ಕಸರತ್ತು; BCCI ಆಫರ್ ತಿರಸ್ಕರಿಸಿದ ಸ್ಟಾರ್‌ ಗಳು, 100 ಟೆಸ್ಟ್‌ ಅನುಭವಿ ಆಟಗಾರರಿಂದಲೇ ನಕಾರ?

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ