ಭುವನೇಶ್ವರ್ ಕುಮಾರ್  
ಕ್ರಿಕೆಟ್

ಅರ್ಷದೀಪ್‌ಗೆ ಗಾಯ: ಬೆಂಗಳೂರು ಟಿ 20 ಪಂದ್ಯಕ್ಕೆ ಬದಲಿ ಆಟಗಾರನಾಗಿ ಭುವನೇಶ್ವರ್ ಸೇರ್ಪಡೆ!

ಪ್ರಸ್ತುತ 2-2 ಅಂತರದಲ್ಲಿ ಸಮಬಲಗೊಂಡಿರುವ ಈ ಸರಣಿಯ ಅಂತಿಮ ಪಂದ್ಯ ಶನಿವಾರ ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಬೆಂಗಳೂರು: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ನಿರ್ಣಾಯಕ ಐದನೇ ಹಾಗೂ ಅಂತಿಮ ಟಿ20 ಪಂದ್ಯಕ್ಕಾಗಿ ಭುಜದ ಗಾಯಕ್ಕೆ ತುತ್ತಾಗಿರುವ ಅರ್ಷದೀಪ್ ಸಿಂಗ್ ಅವರ ಬದಲಿಗೆ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಭಾರತ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಪ್ರಸ್ತುತ 2-2 ಅಂತರದಲ್ಲಿ ಸಮಬಲಗೊಂಡಿರುವ ಈ ಸರಣಿಯ ಅಂತಿಮ ಪಂದ್ಯ ಶನಿವಾರ ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

"ಹೈದರಾಬಾದ್‌ನಲ್ಲಿ ಬುಧವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದ ವೇಳೆ, ಅರ್ಷದೀಪ್ ಸಿಂಗ್ ಅವರು ಬೌಲಿಂಗ್ ಮಾಡುವಾಗ ಅವರ ಭುಜಕ್ಕೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಗಾಯಗೊಂಡಿದ್ದು, ಭುವನೇಶ್ವರ್ ಕುಮಾರ್ ಅವರನ್ನು ಬದಲಿ ಆಟಗಾರನಾಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ (BCCI) ಪ್ರಕಟಣೆಯಲ್ಲಿ ತಿಳಿಸಿದೆ.

"ಅಂತಿಮ ಟಿ20 ಪಂದ್ಯಕ್ಕೂ ಮುನ್ನ ಅರ್ಷದೀಪ್ ಅವರ ಚೇತರಿಕೆ ಸ್ಥಿತಿಯನ್ನು ಗಮನಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. 36 ವರ್ಷದ ಭುವನೇಶ್ವರ್ ಅವರನ್ನು ಈ ಹಿಂದೆ ಅಕ್ಟೋಬರ್ 22 ರಿಂದ ಕ್ರೈಸ್ಟ್‌ಚರ್ಚ್‌ನಲ್ಲಿ ಪ್ರಾರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಆಯ್ಕೆ ಮಾಡಲಾಗಿತ್ತು.

ಭಾರತದ ಹೊಸ ಟಿ20 ತಂಡ ಇಂತಿದೆ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ಉಪನಾಯಕ), ಶಿವಂ ದುಬೆ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ನಿತೀಶ್ ಕುಮಾರ್ ರೆಡ್ಡಿ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ಮಯಾಂಕ್ ಯಾದವ್, ನಮನ್ ಧೀರ್, ಭುವನೇಶ್ವರ್ ಕುಮಾರ್.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಭಿಜೀತ್ ದೀಪ್ಕೆ ದೆಹಲಿ ನಿವಾಸಕ್ಕೆ ಪೊಲೀಸರ ಭೇಟಿ: CJP ತಿರಂಗಾ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ನೋಟಿಸ್ ಜಾರಿ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

'ಭಾರತದ ವಿರುದ್ಧದ ಸರಣಿಯಿಂದ ನಯಾ ಪೈಸೆ ಪ್ರಯೋಜನವಿಲ್ಲ': ವಿಂಡೀಸ್ CEO ಹೇಳಿಕೆ, ಏನದು 1997ರ ನಿರ್ಧಾರ?

ಸರ್ಕಾರದಿಂದ ಉತ್ತರ ಕೇಳುವುದು ಅರಾಜಕತೆಯಲ್ಲ: ಜೈಲಿಗೂ ಹೋಗಲು ಸಿದ್ಧ; CJP ತಿರಂಗಾ ಮೆರವಣಿಗೆಗೂ ಮುನ್ನ ಅಭಿಜೀತ್ ದೀಪ್ಕೆ!

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'