ಉಭಯ ತಂಡಗಳ ಆಟಗಾರರು 
ಕ್ರಿಕೆಟ್

India vs West Indies: ಮಳೆಯಿಂದಾಗಿ 5ನೇ ಟಿ20 ಪಂದ್ಯ ರದ್ದು; ಎರಡು ತಂಡಕ್ಕೂ ಟ್ರೋಫಿ ಹಂಚಿಕೆ

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಮಳೆಯಿಂದಾಗಿ ತಲಾ 9 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು.

ಬೆಂಗಳೂರು: ನಿರಂತರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ರದ್ದಾಗಿದ್ದು, ಟ್ರೋಫಿಯನ್ನು ಎರಡೂ ತಂಡಗಳಿಗೆ ಹಂಚಿಕೆ ಮಾಡಲಾಗಿದೆ.

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಮಳೆಯಿಂದಾಗಿ ತಲಾ 9 ಓವರ್‌ಗಳಿಗೆ ಸೀಮಿತಗೊಳಿಸಲಾಗಿತ್ತು.

ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 7.4 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 118 ರನ್ ಗಳಿಸಿತ್ತು.

8ನೇ ಓವರ್​ನಲ್ಲಿ ಮತ್ತೆ ಮಳೆ ಸುರಿಯಲಾರಂಭಿಸಿತು. ಹೀಗಾಗಿ ಪಂದ್ಯವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಆದರೆ ಕ್ರಮೇಣ ಮಳೆ ಜೋರಾದ ಕಾರಣ ಪಂದ್ಯವನ್ನುರದ್ದುಗೊಳಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಸರಣಿ 2-2 ರ ಸಮಬಲದೊಂದಿಗೆ ಅಂತ್ಯಗೊಂಡಿದ್ದು, ಉಭಯ ತಂಡಗಳು ಟ್ರೋಫಿಯನ್ನು ಹಂಚಿಕೊಂಡಿವೆ. ಏಕೆಂದರೆ ಸರಣಿಯಲ್ಲಿ ಉಭಯ ತಂಡಗಳು ತಲಾ 2 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾದ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಘೋರ ದುರಂತ; ಕಾಲ್ತುಳಿತ ಸಂಭವಿಸಿ 17 ಮಂದಿ ಸಾವು

'ಭಾರತ ತೊರೆಯುವಂತೆ' ನೋಟಿಸ್ ಕಾನೂನು ಬಾಹಿರ: ಹೈಕೋರ್ಟ್‌ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಈ ದೇಶದಲ್ಲಿ ಸ್ಟಿಂಗ್ ಆಪರೇಷನ್ 'ಪಿತಾಮಹ' ಅಂತ ಯಾರಾದ್ರೂ ಇದ್ರೆ ಅದು ಮೋದಿ: ಹಳೇ ಘಟನೆ ಕೆದಕಿದ ಬಿಕೆ ಹರಿಪ್ರಸಾದ್

ಮುಳುಗಿದ ಸರಕು ಹಡಗಿನಿಂದ ಐಫೋನ್‌, ಸುಗಂಧ ದ್ರವ್ಯ ಸಂಗ್ರಹಕ್ಕೆ ಧಾವಿಸಿದ ಇರಾನಿನ ಮೀನುಗಾರರು| video

'ತಳ್ಳಿದ' ಪ್ರಕರಣ: ರಾಹುಲ್ ಗಾಂಧಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗರ್ಭಿಣಿ ಪತ್ರಕರ್ತೆ