ಪ್ರತೀಕಾ ರಾವಲ್ 
ಕ್ರಿಕೆಟ್

Asian Games 2026: ಜೆಮಿಮಾ ರೋಡ್ರಿಗಸ್‌ ಬದಲಿಗೆ ಭಾರತ ತಂಡ ಸೇರಿದ ಪ್ರತೀಕಾ ರಾವಲ್!

17 ವರ್ಷದ ಪ್ರತಿಕಾ ರಾವಲ್ ಸದ್ಯ ನಡೆಯುತ್ತಿರುವ ಏಷ್ಯಾ ಕಪ್‌ನಲ್ಲಿ ಟಿ20ಐಗೆ ಪದಾರ್ಪಣೆ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಆಡಿದ್ದಾರೆ.

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಕ್ರೀಡಾಕೂಟಕ್ಕಾಗಿ ಗಾಯಗೊಂಡ ಜೆಮಿಮಾ ರೋಡ್ರಿಗಸ್ ಬದಲಿಗೆ ಭಾರತದ ಮಹಿಳಾ ಕ್ರಿಕೆಟ್ ತಂಡಕ್ಕೆ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಪ್ರತೀಕಾ ರಾವಲ್ ಅವರನ್ನು ಸೇರಿಸಿಕೊಳ್ಳಲಾಗಿದೆ.

ಆಗಸ್ಟ್ 3 ರಂದು ದಿ ಹಂಡ್ರೆಡ್‌ನಲ್ಲಿ ಸದರ್ನ್ ಬ್ರೇವ್ ಪರ ಆಡುವಾಗ ಆದ ಗಾಯದಿಂದ ಜೆಮಿಮಾ ಚೇತರಿಸಿಕೊಳ್ಳುತ್ತಿದ್ದಾರೆ. ಈ ಗಾಯದಿಂದಾಗಿ ದುಬೈನಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾ ಕಪ್ ಮತ್ತು ಏಷ್ಯನ್ ಕ್ರೀಡಾಕೂಟದಿಂದ ಅವರು ಈಗಾಗಲೇ ಹೊರಗುಳಿದಿದ್ದರು.

ಆರಂಭದಲ್ಲಿ ಜೆಮಿಮಾ ಅವರ ಬದಲಿ ಆಟಗಾರ್ತಿಯಾಗಿ ರಾವಲ್ ಅವರನ್ನು ಏಷ್ಯಾ ಕಪ್‌ಗೆ ಮಾತ್ರ ಹೆಸರಿಸಲಾಗಿತ್ತು, ಏಷ್ಯನ್ ಗೇಮ್ಸ್ ತಂಡದಲ್ಲಿ ಅವರ ಸ್ಥಾನ ಯಾರಿಗೆ ಸಿಗಲಿದೆ ಎಂಬುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಇರಲಿಲ್ಲ. ಇದೀಗ, ಏಷ್ಯನ್ ಗೇಮ್ಸ್‌ಗಾಗಿ ಸಲ್ಲಿಸಲಾದ 15 ಸದಸ್ಯರ ತಂಡದಲ್ಲಿ ರಾವಲ್ ಅವರ ಹೆಸರನ್ನು ಈಗಾಗಲೇ ಸೇರಿಸಲಾಗಿದೆ ಎಂದು ಬಿಸಿಸಿಐ ಮೂಲಗಳು ಬುಧವಾರ ದೃಢಪಡಿಸಿವೆ. ಪ್ರತಿಕಾ ರಾವಲ್ ಅವರು ಇದೀಗ ಜೆಮಿಮಾ ಅವರ ಬದಲಿ ಆಟಗಾರ್ತಿಯಾಗಿ ಜಪಾನ್‌ಗೆ ಪ್ರಯಾಣಿಸಲಿದ್ದಾರೆ.

17 ವರ್ಷದ ಪ್ರತಿಕಾ ರಾವಲ್ ಸದ್ಯ ನಡೆಯುತ್ತಿರುವ ಏಷ್ಯಾ ಕಪ್‌ನಲ್ಲಿ ಟಿ20ಐಗೆ ಪದಾರ್ಪಣೆ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಆಡಿದ್ದಾರೆ. ಇದುವರೆಗಿನ ಲೀಗ್ ಹಂತದ ಮೂರು ಪಂದ್ಯಗಳಲ್ಲಿ ಅವರು 22, 10 ಮತ್ತು 4 ರನ್ ಗಳಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ರಾವಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದಾರೆ. ಏಷ್ಯಾ ಕಪ್‌ಗೆ ಆಯ್ಕೆಯಾಗುವ ಮೊದಲು ಅವರು ನವೆಂಬರ್ 2024 ರಿಂದ ಯಾವುದೇ ಸ್ಪರ್ಧಾತ್ಮಕ ಟಿ20 ಕ್ರಿಕೆಟ್ ಆಡಿರಲಿಲ್ಲ ಮತ್ತು 2025ರ ಮಹಿಳಾ ಏಕದಿನ ವಿಶ್ವಕಪ್ ಸಮಯದಲ್ಲಿ ಪಾದದ ಗಾಯದ ನಂತರ 2026ರ ಮಹಿಳಾ ಪ್ರೀಮಿಯರ್ ಲೀಗ್‌ನಿಂದಲೂ ಹೊರಗುಳಿಯಬೇಕಾಯಿತು.

ಭಾರತ ತಂಡಕ್ಕೆ ಕರೆ ಬಂದಾಗ ಅವರು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಏಕದಿನ ಕಪ್‌ಗಾಗಿ ವಾರ್ವಿಕ್‌ಷೈರ್ ಸೇರಲು ತಯಾರಿ ನಡೆಸಿದ್ದರು. ಕಳೆದ ವರ್ಷ ನಡೆದ WPL ಹರಾಜಿನಲ್ಲಿ ಯುಪಿ ವಾರಿಯರ್ಜ್ ಅವರನ್ನು ₹50 ಲಕ್ಷಕ್ಕೆ ಖರೀದಿಸಿತ್ತು. ಆದರೆ, ಅವರು 2026ರ ಐಪಿಎಲ್ ಆವೃತ್ತಿಯಲ್ಲಿ ಕಾಣಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಹ್ಯಾಂಗ್‌ಝೌನಲ್ಲಿ ನಡೆದ ಹಿಂದಿನ ಆವೃತ್ತಿಯ ಫೈನಲ್‌ನಲ್ಲಿ ಶ್ರೀಲಂಕಾವನ್ನು 19 ರನ್‌ಗಳಿಂದ ಸೋಲಿಸಿದ ನಂತರ ಭಾರತ ಇದೀಗ ಏಷ್ಯನ್ ಕ್ರೀಡಾಕೂಟಕ್ಕೆ ಹಾಲಿ ಚಾಂಪಿಯನ್ ಆಗಿ ಪ್ರವೇಶಿಸಲಿದೆ. ಎಂಟು ತಂಡಗಳ ಈ ಸ್ಪರ್ಧೆಯು ಸೆಪ್ಟೆಂಬರ್ 17 ರಿಂದ 22 ರವರೆಗೆ ನಡೆಯಲಿದ್ದು, ಭಾರತದೊಂದಿಗೆ ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಜಪಾನ್, ಥೈಲ್ಯಾಂಡ್, ಮಲೇಷ್ಯಾ ಮತ್ತು ಚೀನಾ ತಂಡಗಳು ಸೇರಿವೆ.

ಭಾರತದ ಏಷ್ಯನ್ ಗೇಮ್ಸ್ ತಂಡ

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಪ್ರತೀಕಾ ರಾವಲ್, ಭಾರತಿ ಫುಲ್ಮಾಲಿ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಪ್ರೇಮಾ ರಾವತ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರೇಣುಕಾ ಸಿಂಗ್, ಎನ್ ಶ್ರೀ ಚರಣಿ ಮತ್ತು ನಂದನಿ ಶರ್ಮಾ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Trumpಗೆ Iran ಬಿಗ್ ಶಾಕ್: ಅಮೆರಿಕಾ ಹಡಗು ಸೇರಿ 20ಕ್ಕೂ ಹೆಚ್ಚು ನೌಕೆಗಳ ಮೇಲೆ ದಾಳಿ, Hormuz ಜಲಸಂಧಿ ಹೊರಗೂ 'No-go zone' ವಿಸ್ತರಣೆ..!

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: ಯುದ್ಧ ಅಂತ್ಯಕ್ಕೆ ಕೌಂಟ್‌ಡೌನ್; ಇನ್ನು ಅವರ ಆಟ ನಡೆಯಲ್ಲ, ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!

ಬೆಂಗಳೂರಿಗರಿಗೆ Good News: ಸಿದ್ಧವಾಯ್ತು ಸಹಾಯ 3.0 ಪೋರ್ಟಲ್‌: ಇನ್ಮುಂದೆ Typing ಕಿರಿಕಿರಿ ಇರಲ್ಲ, Voice Note ಮೂಲಕವೇ ದೂರು ಸಲ್ಲಿಸಲು ಅವಕಾಶ..!

37 ವರ್ಷ ನಿಷೇಧದ ಬಳಿಕ ಮತ್ತೆ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ; ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ