ಅಭಿಷೇಕ್ ಶರ್ಮಾ 
ಕ್ರಿಕೆಟ್

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಸೇರಿಸಿತು.

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಭಾನುವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 156 ರನ್ ಸೇರಿಸಿತು. ಆಲ್​ರೌಂಡರ್​ ಅಜ್ಮತುಲ್ಲಾ ಒಮರ್ಜಾಯ್ ಅಜೇಯ 64 ರನ್​ ಸಿಡಿಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು.

ಅಫ್ಘಾನಿಸ್ತಾನ ತಂಡಕ್ಕೆ ಕಮ್​ಬ್ಯಾಕ್ ಹೀರೋ ಜಸ್ಪ್ರೀತ್ ಬುಮ್ರಾ ಮೊದಲ ಓವರ್​ನಲ್ಲೇ ಆಘಾತ ನೀಡಿದರು. ಸ್ಫೋಟಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಖಾತೆ ತೆರೆಯದೇ ಔಟ್ ಆದರು. ನಂತರ 10 ಎಸೆತಗಳಲ್ಲಿ 11 ರನ್​ಗಳಿಸಿದ್ದ ನಾಯಕ ಇಬ್ರಾಹಿಂ ಜಡ್ರಾನ್ ರನ್​ಔಟ್ ಆದರೆ, ಸದಿಕುಲ್ಲಾ ಅಟಲ್(13 ರನ್) ಅರ್ಶ್‌ದೀಪ್ ಸಿಂಗ್ ಬೌಲಿಂಗ್‌ನಲ್ಲಿ ಬುಮ್ರಾಗೆ ಕ್ಯಾಚ್ ನೀಡಿ ಔಟ್ ಆದರು.

ಗೆಲುವಿಗೆ 157 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ, ಅಭಿಷೇಕ್ ಶರ್ಮಾ ಅವರ 82 ರನ್ ಗಳ ಭರ್ಜರಿ ಅರ್ಧ ಶತಕ ಹಾಗೂ ಇಶಾನ್ ಕಿಶನ್(42) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 13.4 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 157 ರನ್ ಗಳಿಸುವ ಮೂಲಕ ಏಳು ವಿಕೆಟ್ ಗಳಿಂದ ಗೆಲುವು ಸಾಧಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಣೇಶೋತ್ಸವಕ್ಕೆ ಅನಗತ್ಯ ನಿರ್ಬಂಧ ಇಲ್ಲ, ಆದ್ರೆ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: CM ಡಿಕೆ ಶಿವಕುಮಾರ್ ಕಿಡಿ

ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ: ಆರ್ ಅಶೋಕ್, ಯದುವೀರ್, ಪ್ರತಾಪ್ ಸಿಂಹ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

ಹಾವೇರಿ: ಪ್ರೀತಿಸಿ ಮದುವೆಯಾಗಿದ್ದ ಪತ್ನಿ ದೂರ; 'ಮುಂದಿನ ಜನ್ಮ ಇದ್ದರೆ ನಿನ್ನವನಾಗಿ ಹುಟ್ಟುವೆ' ಎಂದು ಪೋಸ್ಟ್ ಹಾಕಿ ಯುವಕ ಆತ್ಮಹತ್ಯೆ!

ಸರ್ಕಾರಿ ಸರ್ಕ್ಯೂಟ್‌ ಹೌಸ್‌ನಲ್ಲಿ 'ನೀಲಿ ಚಿತ್ರನಟಿ' ವಾಸ; ರೂರ್ಕೆಲಾದಲ್ಲಿ ಸಂಚಲನ, ಪೊಲೀಸ್ ತನಿಖೆ

ಭಾರತೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಕ್ಷಣ: ಇದೇ ಮೊದಲ ಬಾರಿಗೆ ಮೈದಾನದಲ್ಲಿ 'ಜನ ಗಣ ಮನ'ಕ್ಕೂ ಮುನ್ನ ಮೊಳಗಿದ ವಂದೇ ಮಾತರಂ, Video!