ಸಂಜು ಸ್ಯಾಮ್ಸನ್ 
ಕ್ರಿಕೆಟ್

India vs Afghanistan: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; ಅಫ್ಘಾನ್ ವಿರುದ್ಧದ T20 ಸರಣಿ ಭಾರತ ಕೈವಶ!

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಸೇರಿಸಿತು.

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಸೇರಿಸಿತು.

ಭಾರತದ ಪರ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ತಮ್ಮ ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಪ್ರದರ್ಶನ ನೀಡಿದರು. ತಮ್ಮ ಮೂರು ಓವರ್‌ಗಳಲ್ಲಿ ಕೇವಲ 24 ರನ್ ನೀಡಿ ಪ್ರಮುಖ ಮೂರು ವಿಕೆಟ್ ಪಡೆಯುವ ಮೂಲಕ ಅಫ್ಘಾನಿಸ್ತಾನಕ್ಕೆ ಶಾಕ್ ನೀಡಿದರು.

ಇನ್ನು ಗೆಲುವಿಗೆ 159 ರನ್ ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ, ಸಂಜು ಸ್ಯಾಮ್ಸನ್ ಅವರ 22 ಎಸೆತಗಳಲ್ಲಿ 57 ರನ್‌ಗಳ ಭರ್ಜರಿ ಅರ್ಧ ಶತಕ, ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ. 14.5 ಓವರ್ ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 163 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

ಟೀಂ ಇಂಡಿಯಾ ಆಟಗಾರರು ಆರಂಭದಲ್ಲಿ ನಿಧಾನಗತಿಯ ಆಟವಾಡಿದರೂ, ಸ್ಯಾಮ್ಸನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಅಭಿಷೇಕ್ 19 ಎಸೆತಗಳಲ್ಲಿ 39 ರನ್ ಗಳಿಸಿ ಔಟಾದರು.

ಅಫ್ಘಾನಿಸ್ತಾನ ವಿರುದ್ಧ ಕಳೆದ ಭಾನುವಾರ ನಡೆದ ಮೊದಲ ಪಂದ್ಯದಲ್ಲೂ ಭಾರತ 7 ವಿಕೆಟ್‌ಗಳ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

₹2,000ಕ್ಕಿಂತ ಹೆಚ್ಚಿನ UPI ಪಾವತಿಗಳಿಗೆ ಶೇ. 0.4ರಷ್ಟು MDR ಶುಲ್ಕ! ಅಕ್ಟೋಬರ್ 15 ರಿಂದ ಜಾರಿ

India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!

ಮೋದಿಗೆ 'ಭಾರತ ರತ್ನ'?: Modi ಹೆಸರಲ್ಲಿ ಒಂದು ತಿಂಗಳು ಸೇವಾ ಸಂಕಲ್ಪ ಅಭಿಯಾನ: ಕೇಂದ್ರ ಸಚಿವ ಜೆ.ಪಿ ನಡ್ಡಾ

ದ್ವಿಪಕ್ಷೀಯ ಮಾತುಕತೆ ವೇಳೆ ಚೀನಾ ಅಧ್ಯಕ್ಷ ಜಿನ್ಪಿಂಗ್ ಗೆ ಮೋದಿ ಹೇಳಿದ್ದೇನು? MEA ಹೇಳಿದ್ದಿಷ್ಟು...

'ತಮ್ಮ ಮಗನನ್ನು ಪ್ರತಿಷ್ಠಾಪಿಸಲು ಪ್ರಜ್ವಲ್ ರೇವಣ್ಣರನ್ನು ಮುಗಿಸಿದ ಕುಮಾರಸ್ವಾಮಿ': ಸಚಿವ ಬಾಲಕೃಷ್ಣ