ಭಾರತ ತಂಡದ ಆಟಗಾರರು 
ಕ್ರಿಕೆಟ್

India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; 127 ರನ್‌ಗಳ ಭರ್ಜರಿ ಜಯ, T20 ಸರಣಿ ಕ್ಲೀನ್ ಸ್ವೀಪ್

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 221 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಗುರುವಾರ ನಡೆದ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟಕ ಶತಕದ ನೆರವಿನಿಂದ ಟೀಂ ಇಂಡಿಯಾ 127 ರನ್‌ಗಳ ಭರ್ಜರಿ ಜಯ ಗಳಿಸುವ ಮೂಲಕ ಮೂರು ಪಂದ್ಯಗಳ T20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 221 ರನ್ ಗಳ ಬೃಹತ್ ಮೊತ್ತ ಸೇರಿಸಿತು.

ಗೆಲುವಿಗೆ 222 ರನ್ ಗಳ ದೊಡ್ಡ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನ 14.1 ಓವರ್ ಗಳಲ್ಲಿ ಕೇವಲ 94 ರನ್ ಗಳಿಸಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಸೋಲು ಒಪ್ಪಿಕೊಂಡಿತು. ಇದರೊಂದಿಗೆ ಅಫ್ಘಾನಿಸ್ತಾನ ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಖಾಲಿ ಕೈಯಲ್ಲಿ ತವರಿಗೆ ಮರಳಬೇಕಾಗಿದೆ.

ಅಫ್ಘಾನಿಸ್ತಾನ ವಿರುದ್ಧದ ಹಿಂದಿನ ಎರಡೂ ಪಂದ್ಯಗಳಲ್ಲಿ, ಟೀಂ ಇಂಡಿಯಾ ಎರಡನೇ ಬಾರಿಗೆ ಬ್ಯಾಟಿಂಗ್ ಮಾಡಿ ಗೆಲುವು ಸಾಧಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ರನ್​ಗಳ ಮಳೆ ಹರಿಸಿ ತಮ್ಮ ಮೂರನೇ ಅಂತರರಾಷ್ಟ್ರೀಯ ಟಿ20 ಶತಕವನ್ನು ಪೂರೈಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಡಂ, ನಿಮ್ಮಂತ ಸುಂದರಿ ಯಾರೂ ಇಲ್ಲ'; ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, CM ಕೋಟಾದಡಿ IAS ಹುದ್ದೆ ಕೊಡಿಸ್ತೇನೆ!

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ