ಅಭಿಷೇಕ್ ಶರ್ಮಾ 
ಕ್ರಿಕೆಟ್

India vs Afghanistan: ರೋಹಿತ್ ಶರ್ಮಾ ದಾಖಲೆ ಮುರಿದ ಅಭಿಷೇಕ್ ಶರ್ಮಾ; T20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ!

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ರೋಹಿತ್ ಶರ್ಮಾ ಅವರ ದಾಖಲೆ ಮುರಿದು ಟಿ20 ಕ್ರಿಕೆಟ್‌ನಲ್ಲಿ ಹೊಸ ಐತಿಹಾಸ ಸೃಷ್ಟಿಸಿದರು.

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಗುರುವಾರ ನಡೆದ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ಸ್ಫೋಟಕ ಶತಕ ಬಾರಿಸುವ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರು ರೋಹಿತ್ ಶರ್ಮಾ ಅವರ ದಾಖಲೆ ಮುರಿದು ಟಿ20 ಕ್ರಿಕೆಟ್‌ನಲ್ಲಿ ಹೊಸ ಐತಿಹಾಸ ಸೃಷ್ಟಿಸಿದರು.

ಕೇವಲ 30 ಎಸೆತಗಳಲ್ಲಿ 11 ಸಿಕ್ಸರ್ ಹಾಗೂ 9 ಬೌಂಡರಿ ಬಾರಿಸುವ ಮೂಲಕ ಟೆಸ್ಟ್ ಆಡುವ ರಾಷ್ಟ್ರಗಳ ಪೈಕಿ ಅತಿ ವೇಗವಾಗಿ ಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಅಭಿಷೇಕ್ ಶರ್ಮಾ ಪಾತ್ರರಾದರು.

ಇದರೊಂದಿಗೆ ಸಿಕಂದರ್ ರಾಜಾ ಮತ್ತು ಫಿನ್ ಅಲೆನ್ ಅವರ ಹೆಸರಿನಲ್ಲಿದ್ದ 33 ಎಸೆತಗಳ ಹಿಂದಿನ ದಾಖಲೆಯನ್ನು ಅತ್ಯಂತ ಸುಲಭವಾಗಿ ಮುರಿದರು. ಭಾರತದ ಈ ಎಡಗೈ ಬ್ಯಾಟರ್ ಅಭಿಷೇಕ್ ಶರ್ಮಾ ಒಂಬತ್ತು ಬೌಂಡರಿ ಮತ್ತು 11 ಸಿಕ್ಸರ್‌ಗಳ ನೆರವಿನಿಂದ 34 ಎಸೆತಗಳಲ್ಲಿ ಒಟ್ಟು 108 ರನ್ ಗಳಿಸಿದರು.

ಇದೇ ವೇಳೆ, ಭಾರತವು ಮೊದಲ ಆರು ಓವರ್‌ಗಳಲ್ಲಿ ಯಾವುದೇ ವಿಕೆಟ್ ಇಲ್ಲದೆ 100 ರನ್ ಕಲೆಹಾಕಿದ್ದು, ಇದು ಈ ಮಾದರಿಯಲ್ಲಿ ತಂಡದ ಸಾರ್ವಕಾಲಿಕ ಗರಿಷ್ಠ 'ಪವರ್‌ಪ್ಲೇ' ಮೊತ್ತವಾಗಿದೆ. ಇದೀಗ ಸಂಜು ಸ್ಯಾಮ್ಸನ್ ಅವರೊಂದಿಗೆ ಶ್ರೇಯಸ್ ಅಯ್ಯರ್ ಕ್ರೀಸ್‌ನಲ್ಲಿದ್ದಾರೆ.

ರೋಹಿತ್ ದಾಖಲೆ ಮುರಿದ ಅಭಿಷೇಕ್

ಇದರ ಜೊತೆಗೆ ಅಭಿಷೇಕ್ ಶರ್ಮಾ ಭಾರತ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಅತಿ ವೇಗದ ಶತಕ ಬಾರಿಸಿದ ದಾಖಲೆಯನ್ನು ಮುರಿದಿದ್ದಾರೆ. ಈ ಮೊದಲು ಅಂದರೆ ಒಂಬತ್ತು ವರ್ಷಗಳ ಹಿಂದೆ ರೋಹಿತ್ ಶರ್ಮಾ ಈ ದಾಖಲೆಯನ್ನು ನಿರ್ಮಿಸಿದ್ದರು.

2017 ರಲ್ಲಿ ಇಂದೋರ್‌ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಈಗ, ಅಭಿಷೇಕ್ ಶರ್ಮಾ 30 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಭಾರತ ಪರ ಅತಿ ವೇಗದ ಟಿ20 ಅಂತರರಾಷ್ಟ್ರೀಯ ಶತಕ ಸಿಡಿಸಿದ ದಾಖಲೆಯನ್ನು ಮುರಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Tata sons ಅಧ್ಯಕ್ಷರಾಗಿ ಚಂದ್ರಶೇಖರನ್ ಮರು ಆಯ್ಕೆ, IPO ಗೆ ಮತದಾನ ಕಾನೂನುಬಾಹಿರ- ಟಾಟಾ ಟ್ರಸ್ಟ್ಸ್ ತಗಾದೆ

ರಾಮ ಮಂದಿರ ತೀರ್ಪು ಬಂದಾಗ ಶಾರುಖ್, ಸಲ್ಮಾನ್, ಆಮಿರ್ ಖಾನ್ ಬಳಿ ಕ್ಷಮೆ ಕೇಳಿದ್ದೆ; ಹಿಂದೂವಾಗಿ ನನಗೆ ಅಸಹ್ಯವಾಗಿತ್ತು: ನಟಿ ಸ್ವರಾ ಭಾಸ್ಕರ್

ನಾನೀಗ ಮುಖ್ಯಮಂತ್ರಿಯಲ್ಲ, ನನ್ನ ಮಾತು ಎಷ್ಟು ನಡೆಯುತ್ತೆ ಅಂತ ನನಗೆ ಮಾತ್ರ ಗೊತ್ತು: ಮಾಜಿ CM ಸಿದ್ದರಾಮಯ್ಯ ಬೇಸರ

PM Modi Birthday: 'ಆತ್ಮೀಯ ಗೆಳೆಯ' ಮೋದಿಗೆ ಜಾರ್ಜಿಯಾ ಮೆಲೋನಿ ವಿಶೇಷ ವಿಶ್; ಇಟಲಿ ಪ್ರಧಾನಿಯಿಂದ ಹೃದಯಸ್ಪರ್ಶಿ ಸಂದೇಶ!

ಭಟ್ಕಳದಲ್ಲಿ ಮಸೀದಿ-ಮದರಸಾ ಮೇಲೆ ಅಷ್ಟೇ ಅಲ್ಲ, ಗಣೇಶ ಮೆರವಣಿಗೆ ಮೇಲೂ ಕಲ್ಲು ತೂರಾಟ: ಎರಡು ಪ್ರತ್ಯೇಕ FIR ದಾಖಲು; Video