ಐಪಿಎಲ್ ಆಟಗಾರರ ಹರಾಜು(ಸಂಗ್ರಹ ಚಿತ್ರ)  
ಕ್ರಿಕೆಟ್

IPL Auction: ಮೂರು ವರ್ಷದ ಬಳಿಕ ಮತ್ತೆ ಭಾರತದಲ್ಲೇ ಐಪಿಎಲ್ ಹರಾಜು; ಸ್ಥಳ, ದಿನಾಂಕ ಘೋಷಣೆ

2027 ರ ಐಪಿಎಲ್​ಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದ್ದು, ಈ ಬಾರಿ ಆಟಗಾರರ ಹರಾಜು ಪ್ರಕ್ರಿಯೆಯು ಗೋವಾದಲ್ಲಿ ನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಬುಧವಾರ ಪಿಟಿಐಗೆ ತಿಳಿಸಿದ್ದಾರೆ.

ಮುಂಬೈ: ಕಳೆದ ಮೂರು ವರ್ಷಗಳಿಂದ ವಿದೇಶಗಳಲ್ಲಿ ನಡೆಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್(IPL) ಹರಾಜು ಪ್ರಕ್ರಿಯೆಯನ್ನು ಈ ಬಾರಿ ಭಾರತದಲ್ಲೇ ಆಯೋಜಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನಿರ್ಧರಿಸಿದೆ.

2027 ರ ಐಪಿಎಲ್​ಗೆ ಈಗಿನಿಂದಲೇ ಸಿದ್ಧತೆ ಆರಂಭವಾಗಿದ್ದು, ಈ ಬಾರಿ ಆಟಗಾರರ ಹರಾಜು ಪ್ರಕ್ರಿಯೆಯು ಗೋವಾದಲ್ಲಿ ನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಬುಧವಾರ ಪಿಟಿಐಗೆ ತಿಳಿಸಿದ್ದಾರೆ.

ಈ ಬಾರಿ ಹರಾಜು ಪ್ರಕ್ರಿಯೆಗೆ ನಾವು ಗೋವಾವನ್ನು ಅಂತಿಮಗೊಳಿಸಿದ್ದೇವೆ. ಡಿಸೆಂಬರ್ 15, 16 ರಂದು ಹರಾಜು ಪ್ರಕ್ರಿಯೆ ನಡೆಯುವ ಸಾಧ್ಯತೆಯಿದೆ ಎಂದು ಅವರು ಹೇಳಿದ್ದಾರೆ.

ಇದು ಮಿನಿ ಹರಾಜು ಆಗಿರುವುದರಿಂದ ಕೇವಲ ಒಂದೇ ದಿನದಲ್ಲಿ ಪ್ರಕ್ರಿಯೆ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಅರುಣ್ ಧುಮಾಲ್ ತಿಳಿಸಿದ್ದಾರೆ.

ಕಳೆದ ಮೂರು ಐಪಿಎಲ್ ಹರಾಜುಗಳನ್ನು ಸೌದಿ ಅರೇಬಿಯಾ, ದುಬೈ ಮತ್ತು ಅಬುಧಾಬಿಯಲ್ಲಿ ನಡೆಸಲಾಗಿತ್ತು. ಇದೀಗ ಮೂರು ವರ್ಷಗಳ ನಂತರ ಬಿಸಿಸಿಐ ಹರಾಜು ಪ್ರಕ್ರಿಯೆಯನ್ನು ಮತ್ತೆ ಭಾರತದಲ್ಲೇ ನಡೆಸಲು ತೀರ್ಮಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್​ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ

ಆ ಮೆಂಟಲ್ ಬಗ್ಗೆ ನನ್ನ ಕೇಳಬೇಡ್ರಿ: ನೀವ್ಯಾಕೆ ದಿನಾ ಆ ವ್ಯಕ್ತಿಗೆ ಮೈಕ್ ಹಿಡೀತೀರಾ: ಮಾಧ್ಯಮ ವಿರುದ್ಧ ಪ್ರತಾಪ್ ಸಿಂಹ ಗರಂ!

ಸದನದಲ್ಲೇ ಕಾಂಗ್ರೆಸ್ ಶಾಸಕರ ನಡುವೆ ಜಟಾಪಟಿ; ಅನಿರೀಕ್ಷಿತ ಹೈಡ್ರಾಮಾ: 'ಸುಮ್ನಿರಮ್ಮಾ, ಹೊಡಿಬೇಡ' ಎಂದ ಆರ್ ಅಶೋಕ್!

ಕೊಲೆ ಆರೋಪಿ ನಟ ದರ್ಶನ್​​ಗೆ ಮತ್ತೊಂದು ಶಾಕ್: ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾ!

India Rich List 2026: ಮುಕೇಶ್ ಅಂಬಾನಿಯನ್ನೇ ಹಿಂದಿಕ್ಕಿದ ಗೌತಮ್ ಅದಾನಿ, ಭಾರತದ ಅತ್ಯಂತ ಶ್ರೀಮಂತ!