ಬಿಎಂಟಿಸಿ ಬಸ್ ಡಿಕ್ಕಿ: ಮಹಿಳೆ ಸಾವು
ಜಾಲಹಳ್ಳಿ ಕ್ರಾಸ್ ಬಳಿ ಮೆಜಿಸ್ಟಿಕ್-ಲಗ್ಗೆರೆ ಮಾರ್ಗದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ...
ಬೆಂಗಳೂರು: ಜಾಲಹಳ್ಳಿ ಕ್ರಾಸ್ ಬಳಿ ಮೆಜಿಸ್ಟಿಕ್-ಲಗ್ಗೆರೆ ಮಾರ್ಗದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರನ್ನು ಶಾಂತಮ್ಮ(40) ಎಂದು ಗುರುತಿಸಲಾಗಿದೆ. ಶಾಂತಮ್ಮ ಬಸ್ಗಾಗಿ ಕಾದು ನಿಂತಿದ್ದ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದಿದ್ದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪೀಣ್ಯ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.