ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಜಿಲ್ಲಾ ಸುದ್ದಿ

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ಆತ್ಮಹತ್ಯೆ

ಗ್ರಾಮ ಪಂಚಾಯಿತಿ ಸದಸ್ಯನ ಮಗನಿಂದ ಅತ್ಯಾಚಾರಕ್ಕೊಳಗಾದ 16 ವರ್ಷದ ಅಪ್ರಾಪ್ತ ಬಾಲಕಿ..

Srinivasa Murthy VN
Updated On : 11 Aug 2014, 7:57 am

ಮೈಸೂರು: ಗ್ರಾಮ ಪಂಚಾಯಿತಿ ಸದಸ್ಯನ ಮಗನಿಂದ ಅತ್ಯಾಚಾರಕ್ಕೊಳಗಾದ 16 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ  ಮೈಸೂರಿನ ಪಿರಿಯಪಟ್ಟಣದಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಪಿರಿಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರ ಮಗನಾದ ಪವನ್(22) ಎಂಬಾತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಈ ಬಗ್ಗೆ ಬಾಲಕಿ ತನ್ನ ಮನೆಯಲ್ಲಿ ಹೇಳದೇ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು. ಇದನ್ನು ಗಮನಿಸಿದ ಬಾಲಕಿಯ ತಾಯಿ ಬಾಲಕಿಯನ್ನು ಗ್ರಾಮದಲ್ಲಿದ್ದ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯುವಾಗ ವಿಷಯ ತಿಳಿಸಿದ್ದಾಳೆ.

ನಂತರ ಬಾಲಕಿಯ ತಾಯಿ ಪೋಲೀಸರಿಗೆ ದೂರು ನೀಡುವ ಮೊದಲು ಊರಿನ ಹಿರಿಯ ಗ್ರಾಮಸ್ಥರೊಂದಿಗೆ ವಿಷಯ ತಿಳಿಸಿ, ಅವರ ಅಭಿಪ್ರಾಯ ಪಡೆಯಲೆಂದು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಹೋದಾಗ ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಆರೋಪಿ ಪವನ್‌ನನ್ನು ಬಂಧಿಸಿದ್ದು, ಅತ್ಯಾಚಾರ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಗಳ ಅಡಿಯಲ್ಲಿ ಮತ್ತು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣಾ ಕಾಯ್ದೆ (ಪೋಕ್ಸೋ)ಅಡಿಯಲ್ಲಿ ದೂರು ದಾಖಲಿಸಿಕೊಂಡಿದ್ದಾರೆ.

ಕಳೆದ ವಾರವಷ್ಟೇ ನಂಜನಗೂಡಿನಲ್ಲಿ 23 ವರ್ಷದ ಯುವತಿ ಮೇಲೆಯೂ ಅತ್ಯಾಚಾರವಾಗಿರುವ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರು ಒಂದರಲ್ಲೇ 3 ವಾರದಲ್ಲಿ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement