ಎಚ್ಡಿಕೆ ವಿರುದ್ಧ ಡಾ. ಮೈತ್ರಿ ಕೇಸ್?
2011ರ ಕೆಪಿಎಸ್ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಡಾ. ಮೈತ್ರಿ ವಿರುದ್ಧ...
ಬೆಂಗಳೂರು: 2011ರ ಕೆಪಿಎಸ್ಸಿ ನೇಮಕಾತಿ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಡಾ. ಮೈತ್ರಿ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವ ಬೆದರಿಕೆ ಹೊಡ್ಡಿದ್ದಾರೆ.
ಕುಮಾರಸ್ವಾಮಿ ತಮ್ಮ ವಿರುದ್ಧ ಲಘುವಾಗಿ ಮಾತಾನಾಡುವುದನ್ನು ಆರೋಪ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಮತ್ತು ಜಾತಿ ನಿಂದನೆ ಕೇಸನ್ನು ದಾಖಲಿಸುತ್ತೇನೆ ಎಂದು ಡಾ. ಮೈತ್ರಿ ಹೇಳಿದ್ದಾರೆ.
2011ರ ಕೆಪಿಎಸ್ಸಿ ನೇಮಕಾತಿಯಲ್ಲಿ ಭ್ರಷ್ಟಚಾರ ನಡೆದಿದೆ ಎಂದು ಡಾ. ಮೈತ್ರಿ ಅವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆ ಮಾಡಿ 2011ರ ನೇಮಕಾತಿ ರದ್ದು ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಮೈತ್ರಿ ವಿರುದ್ಧ ಆರೋಪದ ಸುರಿಮಳೆ ಸುರಿಸಿ ಡಾ. ಮೈತ್ರಿ ಕೆಪಿಎಸ್ಸಿ ಸದಸ್ಯೆ ಮಂಗಳಾ ಶ್ರೀಧರ್ ಅವರಿಗೆ 17 ಬಾರಿ ಕರೆ ಮಾಡಲು ಕಾರಣವೇನೆಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.
ಡಾ. ಮೈತ್ರಿ ಅವರು ತಮ್ಮ ವಿರುದ್ಧ ಕೇಸ್ ದಾಖಲಿಸುವ ಸಂಬಂಧ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ತಮ್ಮ ವಿರುದ್ಧ ಯಾವುದೇ ಕೇಸ್ ದಾಖಲಿಸಿದರು ಹೆದರುವುದಿಲ್ಲ ಎಂದರು.